ವರುಣ್ ಆರನ್ ಶುಕ್ರವಾರ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿಕೊಳ್ಳುವ ಮೂಲಕ ಕ್ರಿಕೆಟ್ ಜೀವನಕ್ಕೆ ವಿದಾಯ ಘೋಷಿದ್ದಾರೆ.
ಟೀಮ್ ಇಂಡಿಯಾಗೆ 2011 ರಲ್ಲಿ ಪಾದಾರ್ಪಣೆ ಮಾಡಿದ ವೇಗಿ ವರುಣ್ ಭಾರತ ತಂಡದ ಪರವಾಗಿ 9 ಟೆಸ್ಟ್ ಹಾಗೂ 9 ಏಕದಿನ ಪಂದ್ಯವನ್ನು ಆಡಿದ್ದು, ಒಟ್ಟು 29 ವಿಕೆಟ್ ಗಳನ್ನು ಕಬಳಿಸಿದ್ದಾರೆ. 2011ರ ವಿಜಯ್ ಹಜಾರೆ ಟ್ರೋಫಿ ಫೈನಲ್ ನಲ್ಲಿ ಗುಜರಾತ್ ವಿರುದ್ಧ 153 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಸುದ್ದಿಯಾಗಿದ್ದರು. ಇದೀಗ 35 ವರ್ಷದ ವರುಣ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ.
ವರುಣ್ ಆರನ್, ಒಟ್ಟು 18 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ದೇಶವನ್ನ ಪ್ರತಿನಿಧಿಸಿದ್ದು, ಕೇವಲ 29 ವಿಕೆಟ್ಗಳನ್ನು ಪಡೆದಿದ್ದಾರೆ. ಆದಾಗ್ಯೂ, ಆರೋನ್ ನಿಯಮಿತವಾಗಿ ಜಾರ್ಖಂಡ್ ಪರ ದೇಶೀಯ ಕ್ರಿಕೆಟ್ ಆಡುತ್ತಿದ್ದರು.
ಇದೀಗ ನಿವೃತ್ತಿಯ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಕಳೆದ 20 ವರ್ಷಗಳಿಂದ, ನಾನು ವೇಗವಾಗಿ ಬೌಲಿಂಗ್ ಮಾಡುವ ಭರಾಟೆಯಲ್ಲಿ ಬದುಕಿ, ಉಸಿರಾಡಿದ್ದೇನೆ ಮತ್ತು ಬೆಳೆದಿದ್ದೇನೆ. ಹಾಗಾಗಿ ಈಗ ನನ್ನ ವೃತ್ತಿಪರ ಕ್ರಿಕೆಟ್ನಿಂದ ನಿವೃತ್ತಿ ಹೊಂದಲು ಬಯಸುತ್ತೇನೆ ಎಂದು ಉಲ್ಲೇಖಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.