ಭಾರತ-ವೆಸ್ಟ್‌ ಇಂಡೀಸ್‌ 2ನೇ ಏಕದಿನ ಪಂದ್ಯ: ಧವನ್‌ ನಾಯಕತ್ವದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದ ಈ ಆಟಗಾರ

ನಾಯಕ ಶಿಖರ್‌ ಧವನ್‌ ಮತ್ತು ಶುಭಮನ್‌ ಗಿಲ್‌ ಜೊತೆಯಾಟ ತಂಡಕ್ಕೆ ಭದ್ರಬುನಾದಿಯನ್ನು ಹಾಕಿತ್ತು. ಆ ಬಳಿಕ ಕಣಕ್ಕಿಳಿದ ಶ್ರೇಯಸ್‌ ಅಯ್ಯರ್‌ ಸಹ ಅದ್ಭುತ ಪ್ರದರ್ಶನ ನೀಡಿದ್ದರು. ಇನ್ನು ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ಶಿಖರ್‌ ಧವನ್‌ ನಾಯಕತ್ವದ ಹೊಣೆ ಹೊತ್ತಿದ್ದಾರೆ. ಧವನ್‌ ಲೀಡರ್‌ಶಿಪ್‌ನಲ್ಲಿ ಟೀಂ ಇಂಡಿಯಾದ ಆಟಗಾರನ ಅದೃಷ್ಟ ಖುಲಾಯಿಸಿದೆ. 

Written by - Bhavishya Shetty | Last Updated : Jul 24, 2022, 11:48 AM IST
  • ಭಾರತ- ವೆಸ್ಟ್ ಇಂಡೀಸ್ ವಿರುದ್ಧ ಇಂದು ಎರಡನೇ ಏಕದಿನ ಪಂದ್ಯ
  • ನಾಯಕ ಶಿಖರ್‌ ಧವನ್‌ ನಾಯಕತ್ವದಲ್ಲಿ ನಡೆಯಲಿದೆ ಈ ಆಟ
  • ಧವನ್‌ ಲೀಡರ್‌ಶಿಪ್‌ನಲ್ಲಿ ಟೀಂ ಇಂಡಿಯಾದ ಆಟಗಾರನ ಅದೃಷ್ಟ ಖುಲಾಯಿಸಿದೆ
ಭಾರತ-ವೆಸ್ಟ್‌ ಇಂಡೀಸ್‌ 2ನೇ ಏಕದಿನ ಪಂದ್ಯ: ಧವನ್‌ ನಾಯಕತ್ವದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದ ಈ ಆಟಗಾರ  title=
Avesh Khan

ಶಿಖರ್ ಧವನ್ ನಾಯಕತ್ವದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ ಇಂದು ಎರಡನೇ ಏಕದಿನ ಪಂದ್ಯವನ್ನು ಆಡಲಿದೆ. ಮೊದಲ ಏಕದಿನ ಪಂದ್ಯವನ್ನು ಭಾರತ ರೋಚಕ ರೀತಿಯಲ್ಲಿ ಗೆದ್ದುಕೊಂಡಿದೆ. ಕೇವಲ ಮೂರು ರನ್‌ಗಳ ಅಂತರದಲ್ಲಿ ಟೀಂ ಇಂಡಿಯಾ ವಿಂಡೀಸ್‌ ಆಟಗಾರರನ್ನು ಸೋಲಿಸಿತ್ತು. 

ನಾಯಕ ಶಿಖರ್‌ ಧವನ್‌ ಮತ್ತು ಶುಭಮನ್‌ ಗಿಲ್‌ ಜೊತೆಯಾಟ ತಂಡಕ್ಕೆ ಭದ್ರಬುನಾದಿಯನ್ನು ಹಾಕಿತ್ತು. ಆ ಬಳಿಕ ಕಣಕ್ಕಿಳಿದ ಶ್ರೇಯಸ್‌ ಅಯ್ಯರ್‌ ಸಹ ಅದ್ಭುತ ಪ್ರದರ್ಶನ ನೀಡಿದ್ದರು. ಇನ್ನು ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ಶಿಖರ್‌ ಧವನ್‌ ನಾಯಕತ್ವದ ಹೊಣೆ ಹೊತ್ತಿದ್ದಾರೆ. ಧವನ್‌ ಲೀಡರ್‌ಶಿಪ್‌ನಲ್ಲಿ ಟೀಂ ಇಂಡಿಯಾದ ಆಟಗಾರನ ಅದೃಷ್ಟ ಖುಲಾಯಿಸಿದೆ. 

ಇದನ್ನೂ ಓದಿ: Viral Video: 5ನೇ ಮಹಡಿಯಿಂದ ಬಿದ್ದ 2 ವರ್ಷದ ಬಾಲಕಿಯನ್ನು ಕ್ಯಾಚ್ ಹಿಡಿದ ವ್ಯಕ್ತಿ!

ವೆಸ್ಟ್ ಇಂಡೀಸ್ ಪ್ರವಾಸದ ತಂಡದಲ್ಲಿ ಅವೇಶ್ ಖಾನ್ ಸ್ಥಾನ ಪಡೆದಿದ್ದಾರೆ. ಅವೇಶ್ ಖಾನ್ ಅತ್ಯುತ್ತಮ ಫಾರ್ಮ್‌ನಲ್ಲಿ ಆಡುತ್ತಿದ್ದು, ಕೆಲವೇ ಎಸೆತಗಳಲ್ಲಿ ಪಂದ್ಯದ ದಿಕ್ಕನ್ನೇ ಬದಲಿಸಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ. ಅವೇಶ್ ಖಾನ್‌ ಡೆತ್ ಓವರ್‌ಗಳಲ್ಲಿ ಅತ್ಯಂತ ಮಿತವ್ಯಯ ರೀತಿಯಲ್ಲಿ ಬೌಲಿಂಗ್‌ ಮಾಡುತ್ತಾರೆ.  ಅವೇಶ್ ಖಾನ್ ಭಾರತ ಪರ 8 ಟಿ20 ಪಂದ್ಯಗಳನ್ನು ಆಡಿದ್ದು 7 ವಿಕೆಟ್‌ಗಳನ್ನು ಪಡೆದಿದ್ದಾರೆ. 

ಅವೇಶ್ ಖಾನ್ ಇತ್ತೀಚಿನ ದಿನಗಳಲ್ಲಿ ಬೌಲಿಂಗ್ ಮೂಲಕ ಎಲ್ಲರ ಮನ ಗೆದ್ದಿದ್ದಾರೆ. ಅವೇಶ್ ಖಾನ್‌ಗೆ ಈಗ ಕೇವಲ 25 ವರ್ಷ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.  

ಭಾರತ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ.ಕೀ), ಸಂಜು ಸ್ಯಾಮ್ಸನ್ (ವಿ.ಕೀ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ಇದನ್ನೂ ಓದಿ: ಈ ದಿನದಂದು ದೇವಸ್ಥಾನದಲ್ಲಿ ಚಪ್ಪಲಿ ಕಳ್ಳತನವಾದ್ರೆ ಮಂಗಳಕರ! ಇದಕ್ಕಿದೆ ಪ್ರಮುಖ ಕಾರಣ

ವೆಸ್ಟ್ ಇಂಡೀಸ್: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮರ್ ಬ್ರೂಕ್ಸ್, ಕೀಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಕೇಶ್ ಮೋಟಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್ ಮತ್ತು ಜೇಡನ್ ಸೀಲ್ಸ್.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News