ಟೀಂ ಇಂಡಿಯಾ ಗೆಲುವಿನೊಂದಿಗೆ ಕ್ರಿಕೆಟ್‌ ಕರಿಯರ್‌ ಕಾಪಾಡಿಕೊಂಡ ಈ ಆಟಗಾರ!

ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಅವೇಶ್ ಖಾನ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವೇಶ್ ಖಾನ್ ತಮ್ಮ ಉತ್ತಮ ಆಟದ ಮೂಲಕ ವಿಮರ್ಶಕರಿಗೆ ತಕ್ಕ ಉತ್ತರ ನೀಡಿದ್ದಾರೆ. ಅವೇಶ್ ಖಾನ್ ನಾಲ್ಕು ಓವರ್‌ಗಳಲ್ಲಿ 17 ರನ್‌ಗಳಿಗೆ ಎರಡು ಪ್ರಮುಖ ವಿಕೆಟ್‌ಗಳನ್ನು ಪಡೆದಿದ್ದಾರೆ.

Written by - Bhavishya Shetty | Last Updated : Aug 7, 2022, 01:04 PM IST
  • ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತಕ್ಕೆ ಗೆಲುವು
  • ಟೀಂ ಇಂಡಿಯಾ 59 ರನ್‌ಗಳ ಭರ್ಜರಿ ಜಯ ಸಾಧಿಸಿದೆ
  • ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಅವೇಶ್ ಖಾನ್
ಟೀಂ ಇಂಡಿಯಾ ಗೆಲುವಿನೊಂದಿಗೆ ಕ್ರಿಕೆಟ್‌ ಕರಿಯರ್‌ ಕಾಪಾಡಿಕೊಂಡ ಈ ಆಟಗಾರ!  title=
India vs West Indies

India vs West Indies: ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ನಾಲ್ಕನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ 59 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಒಬ್ಬ ಆಟಗಾರ ಭಾರತದ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಆಟಗಾರ ತನ್ನ ಸ್ವಂತ ಬಲದಿಂದ ಭಾರತಕ್ಕೆ ಗೆಲುವನ್ನು ತಂದುಕೊಟ್ಟಿದ್ದಾರೆ ಎನ್ನಬಹುದು. ಇನ್ನು ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಈ ಆಟಗಾರ ಪ್ರತಿ ಪಂದ್ಯದಲ್ಲೂ ಟೀಂ ಇಂಡಿಯಾಕ್ಕೆ ವಿಲನ್ ಆಗುತ್ತಿದ್ದ. ಆದರೆ ಈ ಬಾರಿ ಮಾತ್ರ ತನ್ನ ಭರ್ಜರಿ ಆಟ ಪ್ರದರ್ಶನದಿಂದ ತನ್ನ ಕ್ರಿಕೆಟ್‌ ಕೆರಿಯರ್‌ನ್ನು ಉಳಿಸಿಕೊಂಡಿದ್ದಾನೆ ಎನ್ನಬಹುದು. 

ಇದನ್ನೂ ಓದಿ: ʼಜನತೆ ಕಷ್ಟದಲ್ಲಿರುವಾಗ ನನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಮನಸ್ಸು ಒಪ್ಪುತ್ತಿಲ್ಲ'

ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಅವೇಶ್ ಖಾನ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವೇಶ್ ಖಾನ್ ತಮ್ಮ ಉತ್ತಮ ಆಟದ ಮೂಲಕ ವಿಮರ್ಶಕರಿಗೆ ತಕ್ಕ ಉತ್ತರ ನೀಡಿದ್ದಾರೆ. ಅವೇಶ್ ಖಾನ್ ನಾಲ್ಕು ಓವರ್‌ಗಳಲ್ಲಿ 17 ರನ್‌ಗಳಿಗೆ ಎರಡು ಪ್ರಮುಖ ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರ ಅಪಾಯಕಾರಿ ಪ್ರದರ್ಶನವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಸಹ ನೀಡಲಾಗಿದೆ. ಟೀಂ ಇಂಡಿಯಾಗೆ ಈ ಪಂದ್ಯವನ್ನು ಗೆದ್ದುಕೊಡುವ ಮೂಲಕ ಹೀರೋ ಆಗಿ ಹೊರಹೊಮ್ಮಿದರು.

ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ವಿರುದ್ಧ ಅವೇಶ್ ಖಾನ್ ಪ್ರದರ್ಶನ ನಿರಾಶಾದಾಯಕವಾಗಿತ್ತು. ಎರಡನೇ ಪಂದ್ಯದಲ್ಲಿ ಈ ಆಟಗಾರ 31 ರನ್ ಬಿಟ್ಟುಕೊಟ್ಟಿದ್ದರು. ಮೂರನೇ ಟಿ20 ಪಂದ್ಯದಲ್ಲಿ ಈ ಆಟಗಾರ 3 ಓವರ್‌ಗಳಲ್ಲಿ 47 ರನ್ ನೀಡಿ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಕಳಪೆ ಪ್ರದರ್ಶನದ ಹೊರತಾಗಿಯೂ, ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವೇಶ್ ಖಾನ್ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳಲಿಲ್ಲ. ಇದೀಗ ಅವರ ನಿರೀಕ್ಷೆಗೆ ಆಟವಾಡಿದ ಆವೇಶ್‌ ಟೀಂ ಇಂಡಿಯಾದಲ್ಲಿ ಭರ್ಜರಿ ಆಟ ಪ್ರದರ್ಶನ ತೋರಿದ್ದಾರೆ. 

ಇದನ್ನೂ ಓದಿ: Viral Video: ತರಗತಿಯಲ್ಲಿಯೇ ಜುಟ್ಟು ಹಿಡಿದು ಜಗಳವಾಡಿದ ವಿದ್ಯಾರ್ಥಿನಿಯರು

ಇನ್ನು ಗಾಯದ ಸಮಸ್ಯೆಯಿಂದಾಗಿ ಹರ್ಷಲ್ ಪಟೇಲ್ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಆಯ್ಕೆದಾರರು ಏಷ್ಯಾಕಪ್‌ನಲ್ಲಿ ಅವೇಶ್ ಖಾನ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ. ಅವೇಶ್ ಖಾನ್ ಡೆತ್ ಓವರ್‌ಗಳಲ್ಲಿ ವಿಕೆಟ್ ಪಡೆಯುವಲ್ಲಿ ಪರಿಣತಿ ಹೊಂದಿದ್ದಾರೆ. ಅವೇಶ್ ಖಾನ್ ಟೀಂ ಇಂಡಿಯಾ ಪರ 10 ಟಿ-20 ಪಂದ್ಯಗಳಲ್ಲಿ 11 ವಿಕೆಟ್ ಪಡೆದಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News