BCCI Awards: 2023 ರ ಅತ್ಯುತ್ತಮ ಕ್ರಿಕೆಟಿಗರಾದ ಶುಭಮಲ್ ಗಿಲ್, ರವಿಶಾಸ್ತ್ರಿಗೆ ಜೀವಮಾನ ಸಾಧನೆ ಪ್ರಶಸ್ತಿ

BCCI Awards: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಶಸ್ತಿಗಳಲ್ಲಿ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್  ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ವರದಿಯಾಗಿದೆ. 

Written by - Yashaswini V | Last Updated : Jan 23, 2024, 07:50 AM IST
  • ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಾರ್ಷಿಕ ಪ್ರಶಸ್ತಿ ಕಾರ್ಯಕ್ರಮವನ್ನು ಇಂದು ಹೈದರಾಬಾದ್‌ನಲ್ಲಿ ಆಯೋಜಿಸಲಾಗಿದೆ.
  • ಈ ಕಾರ್ಯಕ್ರಮದಲ್ಲಿ ಭಾರತದ ಮಾಜಿ ದಿಗ್ಗಜ ರವಿಶಾಸ್ತ್ರಿ ಮತ್ತು ಹಾಲಿ ತಂಡದ ಸ್ಟಾರ್ ಓಪನರ್ ಶುಭಮನ್ ಗಿಲ್ ಅವರನ್ನು ಸನ್ಮಾನಿಸಲಾಗುವುದು.
  • ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ನಂತರ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ನಾಲ್ಕನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ.
BCCI Awards: 2023 ರ ಅತ್ಯುತ್ತಮ ಕ್ರಿಕೆಟಿಗರಾದ ಶುಭಮಲ್ ಗಿಲ್, ರವಿಶಾಸ್ತ್ರಿಗೆ   ಜೀವಮಾನ ಸಾಧನೆ ಪ್ರಶಸ್ತಿ title=

BCCI Awards: ಇಂದು (ಜನವರಿ 23) ಭಾರತೀಯ ಕ್ರಿಕೆಟಿಗರಿಗೆ ವಿಶೇಷ ದಿನವಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೈದರಾಬಾದ್‌ನಲ್ಲಿ ಇಂದು ತಂಡದ ಸ್ಟಾರ್ ಓಪನರ್ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಮತ್ತು ಮಾಜಿ ಕೋಚ್ ರವಿಶಾಸ್ತ್ರಿ ಅವರನ್ನು ಗೌರವಿಸಲಿದೆ. 61 ವರ್ಷ ವಯಸ್ಸಿನ ರವಿಶಾಸ್ತ್ರಿ ಅವರಿಗೆ 'ಜೀವಮಾನ ಸಾಧನೆ ಪ್ರಶಸ್ತಿ' ನೀಡಿ ಗೌರವಿಸಲಿರುವ ಬಿಸಿಸಿಐ, ಇದೇ ಸಂದರ್ಭದಲ್ಲಿ ಶುಭಮನ್ ಗಿಲ್ ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿ ಪ್ರಧಾನ ಮಾಡಲಿದೆ. 

ಗಮನಾರ್ಹವಾಗಿ,  2019 ರ ನಂತರ ಮೊದಲ ಬಾರಿಗೆ ಬಿಸಿಸಿಐ ಪ್ರಶಸ್ತಿಗಳನ್ನು ಆಯೋಜಿಸಲಾಗುತ್ತಿದೆ. ಬಿಸಿಸಿಐನ ಈ ಕಾರ್ಯಕ್ರಮದಲ್ಲಿ ಇಂಗ್ಲೆಂಡ್‌ನ ಟೆಸ್ಟ್ ತಂಡ ಕೂಡ ಭಾಗವಹಿಸುವ ನಿರೀಕ್ಷೆಯಿದೆ. ಭಾರತ ಪ್ರವಾಸದಲ್ಲಿ ಇಂಗ್ಲೆಂಡ್ ತಂಡ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕಿದೆ. ಇದರ ಮೊದಲ ಪಂದ್ಯ ಜನವರಿ 25 ರಿಂದ ಹೈದರಾಬಾದ್‌ನಲ್ಲಿ ನಡೆಯಲಿದ್ದು, ಇದಕ್ಕೂ ಮುನ್ನ ಈ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ. 

ಶುಭಮನ್ ಗಿಲ್ ಅವರಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ:
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಶಸ್ತಿಗಳಲ್ಲಿ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿಯನ್ನು ನೀಡಲಾಗುವುದು. 2023 ರ ವರ್ಷವು ಶುಭಮನ್ ಗಿಲ್‌ಗೆ ತುಂಬಾ ಅದ್ಭುತವಾಗಿತ್ತು. ಅವರು ಈ ವರ್ಷದ ಅತ್ಯಂತ ಯಶಸ್ವಿ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟಿಗರಾಗಿದ್ದರು. ಈ ಒಂದು ಕ್ಯಾಲೆಂಡರ್ ವರ್ಷದಲ್ಲಿ, ಗಿಲ್ ಏಕದಿನ ಅಂತರಾಷ್ಟೀಯ ಮಾದರಿಯಲ್ಲಿ 5 ಶತಕಗಳನ್ನು ಗಳಿಸಿದರು. ಅಲ್ಲದೆ, ಅದೇ ವರ್ಷ ಗಿಲ್ ಏಕದಿನದಲ್ಲಿ ವೇಗವಾಗಿ 2 ಸಾವಿರ ರನ್ ಗಳಿಸಿದ ದಾಖಲೆಯನ್ನೂ ಬರೆದಿದ್ದರು.  

ಇದನ್ನೂ ಓದಿ- Virat Kohli OUT! ಇಂಗ್ಲೆಂಡ್ ಟೆಸ್ಟ್ ಸರಣಿಯ 2 ಪಂದ್ಯಗಳಿಂದ ವಿರಾಟ್ ಕೊಹ್ಲಿ ಔಟ್.!‌

ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ನಂತರ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ನಾಲ್ಕನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ. 

ಶುಭಮನ್ ಗಿಲ್  ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ ಭಾರತಕ್ಕಾಗಿ 20 ಟೆಸ್ಟ್, 44 ODI ಮತ್ತು 14 T20 ಪಂದ್ಯಗಳನ್ನು ಆಡಿದ್ದಾರೆ. ಅವರು ಎಲ್ಲಾ ಮೂರು ಮಾದರಿಗಳಲ್ಲಿ ಶತಕಗಳನ್ನು ಗಳಿಸಿದ ಕೆಲವೇ ಕ್ರಿಕೆಟಿಗರಲ್ಲಿ ಒಬ್ಬರು. 

ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ: 
ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ಹೈದರಾಬಾದ್‌ನಲ್ಲಿ ಬಿಸಿಸಿಐನ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. 61 ವರ್ಷದ ರವಿಶಾಸ್ತ್ರಿ  80 ಟೆಸ್ಟ್ ಮತ್ತು 150 ODIಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ನಿವೃತ್ತಿಯ ನಂತರ ಕಾಮೆಂಟೇಟರ್ ಆಗಿ ತಮ್ಮದೇ ಛಾಪು ಮೂಡಿಸಿದರು. ಶಾಸ್ತ್ರಿ ಎರಡು ಬಾರಿ ರಾಷ್ಟ್ರೀಯ ತಂಡದ ಕೋಚ್ ಆಗಿದ್ದರು. ಅವರು 2014 ರಿಂದ 2016 ರವರೆಗೆ ತಂಡದ ನಿರ್ದೇಶಕರಾಗಿ ರಾಷ್ಟ್ರೀಯ ತಂಡದ ಭಾಗವಾಗಿದ್ದರು.  ನಂತರ 2017 ರಿಂದ 2021 ರಲ್ಲಿ ಟಿ 20 ವಿಶ್ವಕಪ್ ವರೆಗೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಮುಖ್ಯ ಕೋಚ್ ಪಾತ್ರವನ್ನು ನಿರ್ವಹಿಸಿದರು. 

ಇದನ್ನೂ ಓದಿ- ಈ ದಿನ ಆರಂಭವಾಗಲಿದೆ IPL 2024 : ಫೈನಲ್ ಪಂದ್ಯದ ದಿನಾಂಕವೂ ಪ್ರಕಟ

ರವಿಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ಭಾರತ ಆಸ್ಟ್ರೇಲಿಯಾದಲ್ಲಿ ಸತತ ಎರಡು ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿತು. ಆದರೆ, ಅವರ ಮಾರ್ಗದರ್ಶನದಲ್ಲಿ ತಂಡಕ್ಕೆ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. ಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ಭಾರತವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪಿತು ಆದರೆ ನ್ಯೂಜಿಲೆಂಡ್ ವಿರುದ್ಧ ಸೋತಿತು. 2019ರ ಏಕದಿನ ವಿಶ್ವಕಪ್‌ನಲ್ಲೂ ಭಾರತ ಸೆಮಿಫೈನಲ್ ತಲುಪಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News