ನಾಳೆ ರಾಹುಲ್ ದ್ರಾವಿಡ್‍ರನ್ನು ಭೇಟಿಯಾಗಲಿರುವ 'ದಾದಾ'

ಭಾರತೀಯ ಕ್ರಿಕೆಟ್‌ನ ಮುಂದಿನ ದಾರಿ ಕುರಿತು ಚರ್ಚಿಸಲು ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ನಾಳೆ ಎನ್‌ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.  

Last Updated : Oct 29, 2019, 05:11 PM IST
ನಾಳೆ ರಾಹುಲ್ ದ್ರಾವಿಡ್‍ರನ್ನು ಭೇಟಿಯಾಗಲಿರುವ 'ದಾದಾ' title=
Photo Courtesy: WION

ಬೆಂಗಳೂರು: ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೂತನ ಅಧ್ಯಕ್ಷ ಸೌರವ್ ಗಂಗೂಲಿ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್‌ಸಿಎ) ಮುಖ್ಯಸ್ಥ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಬುಧವಾರ ಭೇಟಿ ಮಾಡಿ ಭಾರತೀಯ ಕ್ರಿಕೆಟ್‌ನ ಮುಂದಿನ ದಾರಿ ಕುರಿತು ಚರ್ಚಿಸಲಿದ್ದಾರೆ.

ಭಾರತೀಯ ಕ್ರಿಕೆಟ್‌ನ ಮುಂದಿನ ದಾರಿ ಕುರಿತು ಚರ್ಚಿಸಲು ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ನಾಳೆ ಎನ್‌ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸಭೆಯಲ್ಲಿ ಹೊಸದಾಗಿ ಚುನಾಯಿತರಾದ ಎಲ್ಲಾ ಪದಾಧಿಕಾರಿಗಳು ಮತ್ತು ಎನ್‌ಸಿಎ ಸಿಇಒ ತುಫಾನ್ ಘೋಷ್ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

"ಸಭೆಯನ್ನು ಅಕ್ಟೋಬರ್ 30(ಬುಧವಾರ) ನಿಗದಿಪಡಿಸಲಾಗಿದೆ. ಹೊಸದಾಗಿ ಚುನಾಯಿತರಾದ ಎಲ್ಲಾ ಪದಾಧಿಕಾರಿಗಳು ತುಫಾನ್ ಘೋಷ್ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಲಿದ್ದಾರೆ" ಎಂದು ಮೂಲಗಳು ತಿಳಿಸಿವೆ.

ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರಿಬ್ಬರೂ ನಾಳೆ ಬೆಂಗಳೂರಿನಲ್ಲಿ ಭೇಟಿಯಾಗಲಿದ್ದಾರೆ. ಗಮನಾರ್ಹವಾಗಿ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್ ಕ್ರಿಕೆಟ್ ಟೂರ್ನಿಯಲ್ಲಿ ಡೇ-ನೈಟ್ ಪಂದ್ಯಕ್ಕೆ ಗಂಗೂಲಿ ಒಪ್ಪಿಗೆ ಸೂಚಿಸಿದ್ದಾರೆ. ಈ ಸಂಬಂಧ ಭಾರತ ತಂಡಕ್ಕೆ ಸಂಬಂಧಿಸಿದ ಮಾರ್ಗಸೂಚಿ (ರೋಡ್ ಮ್ಯಾಪ್) ರಚನೆ ಮಾಡಲು ಗಂಗೂಲಿ, ದ್ರಾವಿಡ್‍ರನ್ನು ಭೇಟಿ ಮಾಡುತ್ತಿದ್ದಾರೆ ಎನ್ನಲಾಗಿದೆ.

[With ANI Inputs]

Trending News