ವಿರಾಟ್ ಕೊಹ್ಲಿ ಶತಕದ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐಯಿಂದ ಗೌರವ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂದು 100ನೇ ಟೆಸ್ಟ್ ಕ್ರಿಕೆಟ್ ಆಡುತ್ತಿದ್ದು ಈ ಪ್ರಯುಕ್ತ ಬಿಸಿಸಿಐ ಕೊಹ್ಲಿಗೆ ಗೌರವ ಸಲ್ಲಿಸುವ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ.

Written by - Zee Kannada News Desk | Last Updated : Mar 3, 2022, 12:49 AM IST
  • ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂದು 100ನೇ ಟೆಸ್ಟ್ ಕ್ರಿಕೆಟ್ ಆಡುತ್ತಿದ್ದು ಈ ಪ್ರಯುಕ್ತ ಬಿಸಿಸಿಐ ಕೊಹ್ಲಿಗೆ ಗೌರವ ಸಲ್ಲಿಸುವ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ.
ವಿರಾಟ್ ಕೊಹ್ಲಿ ಶತಕದ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐಯಿಂದ ಗೌರವ  title=

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂದು 100ನೇ ಟೆಸ್ಟ್ ಕ್ರಿಕೆಟ್ ಆಡುತ್ತಿದ್ದು ಈ ಪ್ರಯುಕ್ತ ಬಿಸಿಸಿಐ ಕೊಹ್ಲಿಗೆ ಗೌರವ ಸಲ್ಲಿಸುವ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಕನ್ನಡಿಗ ಕೆ.ಎಲ್.ರಾಹುಲ್ ಪಾಕ್ ಗೆ ಅಪಾಯಕಾರಿಯಾಗಲಿದ್ದಾರೆ ಎಂದ ಮ್ಯಾಥ್ಯೂ ಹೇಡನ್

ಈ ವಿಡಿಯೋ ಭಾರತದ ಮಾಜಿ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ಸೌರವ್ ಗಂಗೂಲಿ ಹಾಗೂ ರಾಹುಲ್ ದ್ರಾವಿಡ್ ಅವರು ಕೊಹ್ಲಿ (Virat Kohli) ಅವರ ಆಟವನ್ನು ಕೊಂಡಾಡಿದ್ದಾರೆ.ಶುಕ್ರವಾರದಂದು ಮೊಹಾಲಿಯಲ್ಲಿ ಶ್ರೀಲಂಕಾ ವಿರುದ್ದ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ನೂರನೇ ಟೆಸ್ಟ್ ಪಂದ್ಯ ಆಡಲಿದ್ದು, ಈ ಕ್ಷಣಕ್ಕಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.ಈ ಬಗ್ಗೆ ಭಾರತ ಕ್ರಿಕೆಟ್ ಮಂಡಳಿ (Team India) ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ಸೇರಿದಂತೆ ಅನೇಕ ದಿಗ್ಗಜರು ಶುಭಾಶಯ ಕೋರಿದ್ದಾರೆ. ಜೊತೆಗೆ 100 ಪಂದ್ಯಗಳನ್ನಾಡಿದ ಆಟಗಾರರ ಬಳಗಕ್ಕೆ ಸ್ವಾಗತ ಕೋರಿದ್ದಾರೆ.

ಇದನ್ನೂ ಓದಿ: ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ OnePlus Nord 2 5G...!

ವಿರಾಟ್ ಕೊಹ್ಲಿ ಇದುವರೆಗೆ 99 ಟೆಸ್ಟ್ ಪಂದ್ಯಗಳಿಂದ ಕೊಹ್ಲಿ 50.39 ರನ್ ಸರಾಸರಿಯಲ್ಲಿ ಒಟ್ಟು 7962 ರನ್ ಗಳನ್ನು ಗಳಿಸಿದ್ದಾರೆ.ಇದರಲ್ಲಿ ಒಟ್ಟು 27 ಶತಕ ಹಾಗೂ 28 ಅರ್ಧಶತಕಗಳು ಸೇರಿವೆ.ಇನ್ನೊಂದೆಡೆಗೆ ಈ ಮಹತ್ವದ ಘಟನೆಗೆ ಸಾಕ್ಷಿಯಾಗಲು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೊಹಾಲಿಯಲ್ಲಿ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿದೆ.ಆ ಮೂಲಕ ಈಗ ಪ್ರೇಕ್ಷಕರ ಸಮ್ಮುಖದಲ್ಲಿ ಕೊಹ್ಲಿ ಅವರ 100 ನೇ ಟೆಸ್ಟ್ ಪಂದ್ಯ ನಡೆಯಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News