3ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯದಲ್ಲಿ ಭಾರೀ ಬದಲಾವಣೆ: ಮತ್ತೆ ಕಣಕ್ಕಿಳಿಯಲಿದ್ದಾರೆ ಈ ಸ್ಟಾರ್‌ ಆಟಗಾರ!

ಸರಣಿಯ ಕೊನೆಯ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ಭಾಗವಾಗುವ ಸಾಧ್ಯತೆಯಿದೆ. ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಯಾವುದೇ ಬ್ಯಾಟ್ಸ್‌ಮನ್‌ಗಳು 30 ರನ್ ಗಡಿ ಮುಟ್ಟಲು ಸಾಧ್ಯವಾಗದ ಕಾರಣ ಈ ಬಿಗ್ ಮ್ಯಾಚ್‌ನಲ್ಲಿ ಸೂರ್ಯಕುಮಾರ್ ಯಾದವ್ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 29 ಎಸೆತಗಳಲ್ಲಿ 27 ರನ್ ಗಳಿಸಿದ್ದರು.

Written by - Bhavishya Shetty | Last Updated : Jul 16, 2022, 09:06 AM IST
  • ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿ
  • ಟೀಂ ಇಂಡಿಯಾದ ಪ್ಲೇಯಿಂಗ್‌ Xlನಲ್ಲಿ ಭಾರೀ ಬದಲಾವಣೆ
  • ಶ್ರೇಯಸ್ ಅಯ್ಯರ್ ಮತ್ತೆ ಕಣಕ್ಕಿಳಿಯುವ ಸಾಧ್ಯತೆ
3ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯದಲ್ಲಿ ಭಾರೀ ಬದಲಾವಣೆ: ಮತ್ತೆ ಕಣಕ್ಕಿಳಿಯಲಿದ್ದಾರೆ ಈ ಸ್ಟಾರ್‌ ಆಟಗಾರ! title=
Ind Vs Eng

Ind vs Eng: ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಭಾನುವಾರ (ಜುಲೈ 17) ನಡೆಯಲಿದೆ. ಈ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. 3 ಪಂದ್ಯಗಳ ಈ ಸರಣಿಯು ಸದ್ಯ 1-1ರಲ್ಲಿ ಸಮಬಲಗೊಂಡಿದೆ. ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಎದುರಿಸಬೇಕಾಯಿತು. ಇದೀಗ ನಾಳೆ ನಡೆಯಲಿರುವ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್‌ Xlನನ್ನು ನಾಯಕ ರೋಹಿತ್ ಶರ್ಮಾ ತಯಾರಿ ಮಾಡಿದ್ದು, ಭಾರೀ ಬದಲಾವಣೆ ಮಾಡಿದ್ದಾರೆ. 

ಇದನ್ನೂ ಓದಿ: ಇಂದು ಬುಂದೇಲ್‌ಖಂಡ ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ!

ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಎರಡನೇ ಏಕದಿನ ಪಂದ್ಯದಲ್ಲಿ ತಂಡಕ್ಕೆ ಮರಳಿದ್ದರು. ಗಾಯದ ಸಮಸ್ಯೆಯಿಂದ ಮೊದಲ ಪಂದ್ಯದಲ್ಲಿ ಆಡಲಾಗಲಿಲ್ಲ. ಕೊಹ್ಲಿ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಲಾಗಿತ್ತು. ಆದರೆ ಎರಡನೇ ಪಂದ್ಯದ ಪ್ಲೇಯಿಂಗ್‌ 11 ರಲ್ಲಿ ಅಯ್ಯರ್ ಕಂಡುಬಂದಿಲ್ಲ. ಅಯ್ಯರ್ ಒಬ್ಬ ಅದ್ಭುತ ಯುವ ಬ್ಯಾಟ್ಸ್‌ಮನ್. ಕಳೆದ ಕೆಲವು ವರ್ಷಗಳಲ್ಲಿ ಟೀಮ್ ಇಂಡಿಯಾಕ್ಕಾಗಿ ಅದ್ಭುತವಾಗಿ ಆಟವಾಡಿದ್ದಾರೆ. ಆದರೆ ರೋಹಿತ್ ಶರ್ಮಾ ಎರಡನೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಕೈಬಿಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿತ್ತು. ಜೊತೆಗೆ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು.

ಸರಣಿಯ ಕೊನೆಯ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ಭಾಗವಾಗುವ ಸಾಧ್ಯತೆಯಿದೆ. ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಯಾವುದೇ ಬ್ಯಾಟ್ಸ್‌ಮನ್‌ಗಳು 30 ರನ್ ಗಡಿ ಮುಟ್ಟಲು ಸಾಧ್ಯವಾಗದ ಕಾರಣ ಈ ಬಿಗ್ ಮ್ಯಾಚ್‌ನಲ್ಲಿ ಸೂರ್ಯಕುಮಾರ್ ಯಾದವ್ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 29 ಎಸೆತಗಳಲ್ಲಿ 27 ರನ್ ಗಳಿಸಿದ್ದರು.

ಇದನ್ನೂ ಓದಿ: ದೇಶದಲ್ಲಿ ಈರುಳ್ಳಿ ಕೊರತೆ ನೀಗಲು ಕೇಂದ್ರ ಸರ್ಕಾರದಿಂದ ಭರ್ಜರಿ ಪ್ಲ್ಯಾನ್‌

ಸರಣಿ 1-1ರಲ್ಲಿ ಸಮಬಲ: 
ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಈ ಸರಣಿ ರೋಚಕ ತಿರುವಿಗೆ ಬಂದಿದೆ. ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ 10 ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಪ್ರಾಬಲ್ಯ ಮೆರೆದಿದ್ದರಿಂದ ಇಂಗ್ಲೆಂಡ್ ತಂಡ 110 ರನ್‌ಗಳಿಗೆ ಆಲೌಟ್ ಆಗಿತ್ತು. ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಕಮ್ ಬ್ಯಾಕ್ ಮಾಡಿ ಟೀಂ ಇಂಡಿಯಾವನ್ನು 100 ರನ್‌ಗಳ ಅಂತರದಿಂದ ಸೋಲಿಸಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗಳು ಕೇವಲ 146 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಗರಿಷ್ಠ 29-29 ರನ್ ಗಳಿಸಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News