IPL 2024ರ ನಡುವೆ ಲಕ್ನೋ ತಂಡಕ್ಕೆ ಬಿಗ್ ಶಾಕ್! ಪಂದ್ಯಾವಳಿಯಿಂದ ಹೊರಬಿದ್ದ ಕೋಟಿ ಮೌಲ್ಯದ ಆಟಗಾರ

Lucknow Super Giants: ಡಿಸೆಂಬರ್ 2023 ರಲ್ಲಿ ದುಬೈ ಅರೆನಾದಲ್ಲಿ ನಡೆದ ಐಪಿಎಲ್ 2024ರ ಮಿನಿ ಹರಾಜಿನಲ್ಲಿ ಫ್ರಾಂಚೈಸ್ 6.4 ಕೋಟಿ ರೂಪಾಯಿ ನೀಡಿ ಶಿವಂ ಮಾವಿ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿತ್ತು. ಆದರೆ ಇದೀಗ ಈ ಟೂರ್ನಿಯಲ್ಲಿ ಆಡುತ್ತಿಲ್ಲ. ಲಕ್ನೋ ಫ್ರಾಂಚೈಸ್ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಈ ಮಾಹಿತಿಯನ್ನು ನೀಡಿದೆ.

Written by - Bhavishya Shetty | Last Updated : Apr 3, 2024, 07:09 PM IST
    • ಡಿಸೆಂಬರ್ 2023 ರಲ್ಲಿ ದುಬೈ ಅರೆನಾದಲ್ಲಿ ನಡೆದ ಐಪಿಎಲ್ ಹರಾಜು
    • ಶಿವಂ ಮಾವಿ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದಿದ್ದಾರೆ
    • ಲಕ್ನೋ ಸೂಪರ್ ಜೈಂಟ್ಸ್‌’ಗೆ ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ
IPL 2024ರ ನಡುವೆ ಲಕ್ನೋ ತಂಡಕ್ಕೆ ಬಿಗ್ ಶಾಕ್! ಪಂದ್ಯಾವಳಿಯಿಂದ ಹೊರಬಿದ್ದ ಕೋಟಿ ಮೌಲ್ಯದ ಆಟಗಾರ title=
Lucknow Super Giants

Lucknow Super Giants: ಐಪಿಎಲ್ 2024ರ ನಡುವೆ ಲಕ್ನೋ ಸೂಪರ್ ಜೈಂಟ್ಸ್‌’ಗೆ ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ತಂಡದ ವೇಗದ ಬೌಲರ್ ಶಿವಂ ಮಾವಿ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಡಿಸೆಂಬರ್ 2023 ರಲ್ಲಿ ದುಬೈ ಅರೆನಾದಲ್ಲಿ ನಡೆದ ಐಪಿಎಲ್ 2024ರ ಮಿನಿ ಹರಾಜಿನಲ್ಲಿ ಫ್ರಾಂಚೈಸ್ 6.4 ಕೋಟಿ ರೂಪಾಯಿ ನೀಡಿ ಶಿವಂ ಮಾವಿ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿತ್ತು. ಆದರೆ ಇದೀಗ ಈ ಟೂರ್ನಿಯಲ್ಲಿ ಆಡುತ್ತಿಲ್ಲ. ಲಕ್ನೋ ಫ್ರಾಂಚೈಸ್ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಈ ಮಾಹಿತಿಯನ್ನು ನೀಡಿದೆ.

ಇದನ್ನೂ ಓದಿ: ಐಪಿಎಲ್ ನಡುವೆ T20 ತಂಡ ಪ್ರಕಟ: ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಮರಳಿದ ಸ್ಟಾರ್ ಆಟಗಾರ

ಲಕ್ನೋ ಸೂಪರ್ ಜೈಂಟ್ಸ್ ತನ್ನ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌’ನಲ್ಲಿ ವೀಡಿಯೊವನ್ನು ಹಂಚಿಕೊಂಡಿದೆ. ಇದರಲ್ಲಿ ಶಿವಂ ಮಾವಿ ಅವರು ತಮ್ಮ ಗಾಯದ ಬಗ್ಗೆ ವಿವರಿಸುತ್ತಿದ್ದಾರೆ. ಶಿವಂ ಮಾವಿ, “ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ.ನನಗೆ ತಂಡಕ್ಕಾಗಿ ಆಡಲು ಅವಕಾಶ ಸಿಗುತ್ತದೆ ಎಂದು ಭಾವಿಸಿದೆ.. ಆದರೆ ಗಾಯಗೊಂಡಿದ್ದರಿಂದ ನಾನು ಹೋಗಬೇಕಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: IPLನಲ್ಲಿ ಭಾರೀ ಅಬ್ಬರಿಸುತ್ತಿದ್ದಾನೆ ಬಾಲಿವುಡ್ ಸೂಪರ್ ಸ್ಟಾರ್ ಗೋವಿಂದ ಸೋದರಳಿಯ! ಯಾರು ಗೊತ್ತಾ ಆ ಆಟಗಾರ?

2018 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಶಿವಂ ಮಾವಿ ಇದುವರೆಗೆ 32 ಪಂದ್ಯಗಳನ್ನು ಆಡಿದ್ದಾರೆ. ಕೆಕೆಆರ್ ಅವರನ್ನು 3 ಕೋಟಿ ರೂ.ಗೆ ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು. 2023 ರ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್‌’ನ ಭಾಗವಾಗಿದ್ದರು. ಆದರೆ, ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಗಲಿಲ್ಲ. ಇದೀಗ ಗಾಯದ ಸಮಸ್ಯೆಯಿಂದಾಗಿ ಈ ಋತುವಿನಿಂದಲೂ ಹೊರಗುಳಿದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News