India Playing XI: ಈ ಮೂವರು ದಿಗ್ಗಜ ಆಟಗಾರರಿಗೆ ನಾಯಕ ರೋಹಿತ್‌ ಶರ್ಮಾ ಗೇಟ್‌ಪಾಸ್?

India vs Bangladesh 1st Test: ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೂವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯಬಹುದು. ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ 11ರಲ್ಲಿ ಯಾರು ಅವಕಾಶ ಪಡೆಯಲಿದ್ದಾರೆ..?

Written by - Puttaraj K Alur | Last Updated : Sep 16, 2024, 02:48 PM IST
  • ಭಾರತ vs ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಸೆ.19ರಿಂದ ಚೆನ್ನೈನಲ್ಲಿ ನಡೆಯಲಿದೆ
  • ನಾಯಕ ರೋಹಿತ್ ಶರ್ಮಾ ಜೊತೆಗೆ ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಬಹುದು
  • ಮೊದಲ ಟೆಸ್ಟ್‌ಗೆ ಕೆ.ಎಲ್.ರಾಹುಲ್ ಅವರಿಗೆ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಜವಾಬ್ದಾರಿ
India Playing XI: ಈ ಮೂವರು ದಿಗ್ಗಜ ಆಟಗಾರರಿಗೆ ನಾಯಕ ರೋಹಿತ್‌ ಶರ್ಮಾ ಗೇಟ್‌ಪಾಸ್?    title=
ಸೆ.19ರಿಂದ ಮೊದಲ ಟೆಸ್ಟ್‌ ಪಂದ್ಯ!

India vs Bangladesh 1st Test: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 19ರಿಂದ ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡವು ಟರ್ನಿಂಗ್ ಪಿಚ್ ಅನ್ನು ಸಿದ್ಧಪಡಿಸಬಹುದು. ಇಂತಹ ಪರಿಸ್ಥಿತಿಯಲ್ಲಿ ಬಾಂಗ್ಲಾದೇಶ ಬ್ಯಾಟ್ಸ್‌ಮನ್‌ಗಳು ಟೀಂ ಇಂಡಿಯಾದ ಸ್ಪಿನ್ನರ್‌ಗಳ ವಿರುದ್ಧ ಸೆಣಸುತ್ತಿರುವುದನ್ನು ಕಾಣಬಹುದು. ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಸ್ಪಿನ್ ಬೌಲಿಂಗ್ ದೊಡ್ಡ ಅಂಶವಾಗಿದೆ, ಇದು ಸರಣಿಯ ಚಿತ್ರವನ್ನು ಹೆಚ್ಚಿನ ಮಟ್ಟಿಗೆ ಸ್ಪಷ್ಟಪಡಿಸುತ್ತದೆ. ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೂವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯಬಹುದು. ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ 11ರಲ್ಲಿ ಯಾರ್ಯಾರು ಆಡಬಹುದು? ಟೀಂ ಇಂಡಿಯಾದ ಸ್ಕ್ವಾಡ್‌ ಹೇಗಿರಲಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ. 

ಆರಂಭಿಕ ಆಟಗಾರರು: ಚೆನ್ನೈನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಬಹುದು. ರೋಹಿತ್ ಮತ್ತು ಜೈಸ್ವಾಲ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾಕ್ಕೆ ಆಕ್ರಮಣಕಾರಿ ಆರಂಭವನ್ನು ನೀಡಬಲ್ಲರು.

ಇದನ್ನೂ ಓದಿ: ಅನಿಲ್​ ಕುಂಬ್ಳೆ ಮಗ ಯಾರು ಗೊತ್ತೇ? ಕ್ರಿಕೆಟಿಗನಾಗದಿದ್ದರೂ.. ತಂದೆಯ ಹಾದಿಯಲ್ಲೇ ನಡೆಯುತ್ತಿದ್ದಾನೆ ಪುತ್ರ!!

ಮಧ್ಯಮ ಕ್ರಮಾಂಕ: ಮೊದಲ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ವಿರಾಟ್ ಕೊಹ್ಲಿ 4ನೇ ಸ್ಥಾನದಲ್ಲಿರುತ್ತಾರೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ 5ನೇ ಕ್ರಮಾಂಕದಲ್ಲಿ ಅವಕಾಶ ಪಡೆಯಬಹುದು. ರಿಷಬ್ ಪಂತ್ ವಿಕೆಟ್ ಕೀಪರ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ಆಡುವ ಹನ್ನೊಂದರಿಂದ ಹೊರಗುಳಿಯಬೇಕಾಗುತ್ತದೆ. ನಾಯಕ ರೋಹಿತ್ ಶರ್ಮಾ ಧ್ರುವ್ ಜುರೆಲ್ ತ್ಯಾಗ ಮಾಡುವಂತೆ ಒತ್ತಾಯಿಸಲಾಗುತ್ತದೆ.

6ನೇ ಕ್ರಮಾಂಕ: ಮೊದಲ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ಅವರಿಗೆ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಜವಾಬ್ದಾರಿ ನೀಡಲಾಗುವುದು. ರಾಹುಲ್ ಸ್ಪೆಷಲಿಸ್ಟ್ ಬ್ಯಾಟ್ಸ್‌ಮನ್ ಆಗಿ ಆಡಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಫರಾಜ್ ಖಾನ್ ಆಡುವ 11ರಿಂದ ಹೊರಗುಳಿಯಬೇಕಾಗುತ್ತದೆ. ಸರ್ಫರಾಜ್ ಖಾನ್‌ಗೆ ನಾಯಕ ರೋಹಿತ್ ಶರ್ಮಾ ಗೇಟ್‌ಪಾಸ್‌ ನೀಡುವ ಸಾಧ್ಯತೆ ಇದೆ.   

ಆಲ್ರೌಂಡರ್: ಮೊದಲ ಟೆಸ್ಟ್ ಪಂದ್ಯದಲ್ಲಿ ಆಲ್‌ರೌಂಡರ್ ರವೀಂದ್ರ ಜಡೇಜಾ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದು, ಬೌಲಿಂಗ್ ಹಾಗೂ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾಗೆ ಶಕ್ತಿ ತುಂಬಲಿದ್ದಾರೆ.

ಸ್ಪಿನ್ನರ್: ಕುಲದೀಪ್ ಯಾದವ್ ಮತ್ತು ಆರ್.ಅಶ್ವಿನ್ ಅವರಿಗೆ ಪ್ಲೇಯಿಂಗ್ 11ರಲ್ಲಿ ಅವಕಾಶ ನೀಡಬಹುದು. ಕುಲದೀಪ್ ಮತ್ತು ಅಶ್ವಿನ್ ಮಾರಕ ಸ್ಪಿನ್ ಬೌಲಿಂಗ್‌ನಲ್ಲಿ ನಿಪುಣರು. ಇವರಿಗೆ ಅವಕಾಶ ಸಿಕ್ಕರೆ ರೋಹಿತ್ ಶರ್ಮಾ ಅವರು ಅಕ್ಷರ್ ಪಟೇಲ್‌ಗೆ ಬೆಂಚ್‌ ಕಾಯಿಸಲಿದ್ದಾರೆ. 

ವೇಗದ ಬೌಲರ್: ಮೊದಲ ಟೆಸ್ಟ್ ಪಂದ್ಯದಲ್ಲಿ ವೇಗದ ಬೌಲರ್‌ಗಳಾಗಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ.

ಇದನ್ನೂ ಓದಿ: ಏಷ್ಯನ್‌ಹಾಕಿ ಚಾಂಪಿಯನ್ಸ್‌ ಟ್ರೋಫಿ: ಪಾಕ್‌ಬಗ್ಗು ಬಡಿದ ಭಾರತ

ಮೊದಲ ಟೆಸ್ಟ್‌ಗೆ ಭಾರತದ ಸಂಭಾವ್ಯ ತಂಡ

ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಕೆ.ಎಲ್.ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News