Celebrity Cricket League 2024: ಚೆನ್ನೈ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಕರ್ನಾಟಕ ಬುಲ್ಡೋಜರ್ಸ್

Celebrity Cricket League 2024: ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನ 11ನೇ ಪಂದ್ಯದಲ್ಲಿ ಚೆನ್ನೈ ರೈನೋಸ್​ ತಂಡವನ್ನು 67 ರನ್​ಗಳಿಂದ ಮಣಿಸಿದ ಕರ್ನಾಟಕ ಬುಲ್ಡೋಜರ್ಸ್​ ತಂಡ ಲೀಗ್​ನಲ್ಲಿ ಸತತ 3ನೇ ಗೆಲುವು ದಾಖಲಿಸಿದೆ.

Written by - Puttaraj K Alur | Last Updated : Mar 4, 2024, 12:04 AM IST
  • ಚೆನ್ನೈ ರೈನೋಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಕರ್ನಾಟಕ ಬುಲ್ಡೋಜರ್ಸ್
  • ಲೆಬ್ರಿಟಿ ಕ್ರಿಕೆಟ್ ಲೀಗ್​ನಲ್ಲಿ ಸತತ 3 ನೇ ಗೆಲುವು ದಾಖಲಿಸಿದ ಕಿಚ್ಚ ಸುದೀಪ್‌ ಬಳಗ
  • ಭರ್ಜರಿ ಅರ್ಧಶತಕ ಸಿಡಿಸಿ ಮಿಂಚಿದ ಡಾರ್ಲಿಂಗ್‌ ಕೃಷ್ಣ, ಪ್ರದೀಪ್‌ ಮತ್ತು ರಾಜೀವ್‌
Celebrity Cricket League 2024: ಚೆನ್ನೈ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಕರ್ನಾಟಕ ಬುಲ್ಡೋಜರ್ಸ್ title=
ಭರ್ಜರಿ ಗೆಲುವು ದಾಖಲಿಸಿದ ಕರ್ನಾಟಕ ಬುಲ್ಡೋಜರ್ಸ್!

Celebrity Cricket League 2024: ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನ 11ನೇ ಪಂದ್ಯದಲ್ಲಿ ಚೆನ್ನೈ ರೈನೋಸ್​ ತಂಡವನ್ನು 67 ರನ್​ಗಳಿಂದ ಮಣಿಸಿದ ಕರ್ನಾಟಕ ಬುಲ್ಡೋಜರ್ಸ್​ ತಂಡ ಲೀಗ್​ನಲ್ಲಿ ಸತತ 3ನೇ ಗೆಲುವು ದಾಖಲಿಸಿದೆ.

ಗೆಲುವಿಗೆ 60 ಎಸೆತಗಳಲ್ಲಿ 149 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ರೈನೋಸ್ ತಂಡವು 3 ವಿಕೆಟ್ ಕಳೆದುಕೊಂಡು 134 ರನ್ ಗಳಿಸಲಷ್ಟೇ ಶಕ್ತವಾಯಿತು. ಇತ್ತ ಕರ್ನಾಟಕ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಡಾರ್ಲಿಂಗ್ ಕೃಷ್ಣ(57), ಪ್ರದೀಪ್‌(66) ಆಕರ್ಷಕ ಅರ್ಧಶತಕ ಸಿಡಿಸಿದರೆ, 2ನೇ ಇನ್ನಿಂಗ್ಸ್‌ನಲ್ಲಿ ರಾಜೀವ್‌(63) ಅರ್ಧಶತಕದ ಸಿಡಿಸಿ ತಂಡದ ಗೆಲುವಿಗೆ ಉತ್ತಮ ಕೊಡುಗೆ ನೀಡಿದರು.  

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಪ್ರಿ-ವೆಡ್ಡಿಂಗ್’ನಲ್ಲಿ ಧೋನಿ ಡ್ಯಾನ್ಸ್; ಸಾಥ್ ಕೊಟ್ಟ ಪತ್ನಿ ಸಾಕ್ಷಿ, ಕ್ರಿಕೆಟಿಗ ಡ್ವೇನ್ ಬ್ರಾವೋ

ಕರ್ನಾಟಕದ ಮೊದಲ ಇನ್ನಿಂಗ್ಸ್: ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ರೈನೋಸ್ ಫೀಲ್ಡಿಂಗ್‌ ಆಯ್ದುಕೊಂಡಿತು. ಅದರಂತೆ ಮೊದಲ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡವು ಮೊದಲ 10 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 137 ರನ್ ಕಲೆಹಾಕಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಪ್ರದೀಪ್(66) ಮತ್ತು ಡಾರ್ಲಿಂಗ್ ಕೃಷ್ಣ(57) ಭರ್ಜರಿ ಅರ್ಧಶತಕ ಬಾರಿಸಿ ಮಿಂಚಿದರು. ಈ ಇಬ್ಬರ ಸ್ಫೋಟಕ ಬ್ಯಾಟಿಂಗ್‌ನಿಂದ ತಂಡವನ್ನು 137 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು.   

ಚೆನ್ನೈ ರೈನೋಸ್ ಮೊದಲ ಇನ್ನಿಂಗ್ಸ್: ಮೊದಲ ಇನ್ನಿಂಗ್ಸ್​ನಲ್ಲಿ 138 ರನ್​ಗಳ ಗುರಿ ಬೆನ್ನಟ್ಟಿದ ಚೆನ್ನೈ ರೈನೋಸ್​ ತಂಡ ಮೊದಲ 10 ಓವರ್​ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 84 ರನ್‌ ಗಳಿಸಲಷ್ಟೇ ಶಕ್ತವಾಯಿತು. 

ಕರ್ನಾಟಕದ 2ನೇ ಇನ್ನಿಂಗ್ಸ್: 53 ರನ್​ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ಪರ ರಾಜೀವ್‌(63) ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದರು. ಇನ್ನುಳಿದಂತೆ ಮಂಜುನಾಥ್(‌28) ಮತ್ತು ಡಾರ್ಲಿಂಗ್‌ ಕೃಷ್ಣ(20) ರನ್‌ ಗಳಿಸಿ ತಂಡ ಬೃಹತ್‌ ಮೊತ್ತ ಪೇರಿಸಲು ನೆರವಾದರು. ಕೊನೆಯ 10 ಓವರ್​ಗಳ ಇನ್ನಿಂಗ್ಸ್​ನಲ್ಲಿ ಕರ್ನಾಟಕ ತಂಡ 3 ವಿಕೆಟ್ ಕಳೆದುಕೊಂಡು 148 ರನ್ ಕಲೆಹಾಕಿತು.

ಇದನ್ನೂ ಓದಿ: IND vs ENG 5th Test: ವಿರಾಟ್‌ ಕೊಹ್ಲಿ ಟೆಸ್ಟ್​ ಆಡದಿರುವುದು ನಾಚಿಕೆಗೇಡಿನ ಸಂಗತಿ- ಅ್ಯಂಡರ್ಸನ್

ಚೆನ್ನೈ ರೈನೋಸ್ 2ನೇ ಇನ್ನಿಂಗ್ಸ್:  2ನೇ ಇನ್ನಿಂಗ್ಸ್​ನಲ್ಲಿ 202 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಚೆನ್ನೈ ರೈನೋಸ್ ಕೊನೆಯ 10 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 134 ರನ್‌ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಕರ್ನಾಟಕ ಬುಲ್ಡೋಜರ್ಸ್ ಲೀಗ್‌ನಲ್ಲಿ 3ನೇ ಗೆಲುವು ದಾಖಲಿಸಿತು. ಕರ್ನಾಟಕ ಪರ ಎಲ್ಲಾ ಆಟಗಾರರು ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಅತ್ಯುತ್ತಮ ಆಟವಾಡಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News