ಸಿಸ್ಟೋಬಾಲ್ ಪಂದ್ಯಾವಳಿಗೆ ಚಿಕ್ಕಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಆಯ್ಕೆ..!

Cestoball: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಎ ವ್ಯಾಸಂಗ ಮಾಡುತ್ತಿರುವ ಎಸ್.ಸಚಿನ್ ಸಿಸ್ಟೋಬಾಲ್ ಕ್ರೀಡೆಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಎರಡನೇ ಬಾರಿಗೆ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಮೂಲಕ ಕಾಲೇಜಿಗೆ ಮತ್ತು ಚಿಕ್ಕಬಳ್ಳಾಪುರಕ್ಕೆ ಹೆಮ್ಮೆ ತಂದಿದ್ದಾರೆ. 

Written by - Savita M B | Last Updated : Oct 19, 2023, 09:51 AM IST
  • ಶ್ರೀಲಂಕಾದಲ್ಲಿ ನಡೆಯುವ ಅಂತರರಾಷ್ಟ್ರೀಯ ಸಿಸ್ಟೋಬಾಲ್ ಪಂದ್ಯಾವಳಿ
  • ಸಚಿನ್ ಸತತವಾಗಿ ಮೂರು ವರ್ಷಗಳಿಂದ ಸಿಸ್ಟೋಬಾಲ್ ಅಭ್ಯಾಸ ಮಾಡುತ್ತಿದ್ದಾರೆ.
  • ಈ ಮುನ್ನ ಬಾಸ್ಕೆಟ್ ಬಾಲ್ ಕ್ರೀಡಾಪಟುವಾಗಿದ್ದರು.
ಸಿಸ್ಟೋಬಾಲ್ ಪಂದ್ಯಾವಳಿಗೆ ಚಿಕ್ಕಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಆಯ್ಕೆ..!  title=

ಚಿಕ್ಕಬಳ್ಳಾಪುರ: ನ.7ರಿಂದ 13ರವರೆಗೆ ಥಾಯ್ಲೆಂಡ್‌ ಹಾಗೂ ಶ್ರೀಲಂಕಾದಲ್ಲಿ ನಡೆಯುವ ಅಂತರರಾಷ್ಟ್ರೀಯ ಸಿಸ್ಟೋಬಾಲ್ ಪಂದ್ಯಾವಳಿಯಲ್ಲಿ ಸಚಿನ್ ಭಾಗಿ ಆಗುತ್ತಿದ್ದಾರೆ. ಸಚಿನ್ ಸತತವಾಗಿ ಮೂರು ವರ್ಷಗಳಿಂದ ಸಿಸ್ಟೋಬಾಲ್ ಅಭ್ಯಾಸ ಮಾಡುತ್ತಿದ್ದಾರೆ. ಈ ಮುನ್ನ ಬಾಸ್ಕೆಟ್ ಬಾಲ್ ಕ್ರೀಡಾಪಟುವಾಗಿದ್ದರು. 

ಗುರುಗಳಾದ ಮೊಹಮ್ಮದ್ ಅಕಿಬ್ ಅವರಿಗೆ ಈ ಕ್ರೀಡೆಯ ಬಗ್ಗೆ ಪ್ರೋತ್ಸಾಹ ನೀಡಿದರು. ತರಬೇತುದಾರರಾದ ಅಮಿತ್ ಬೆಳಗಾಂ, ನವದೆಹಲಿಯ ಅಂಕುರ್ ಹಾಗೂ ಮಹಾರಾಷ್ಟ್ರದ ಅಂಕಿತ್ ಸಹಕಾರದಲ್ಲಿ ಸಚಿನ್ ನಿತ್ಯ ಕ್ರೀಡಾ ಅಭ್ಯಾಸ ನಡೆಸಿದರು. 

ಇದನ್ನೂ ಓದಿ-ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಬಳಸದಂತೆ ಸರ್ಕಾರ ಆದೇಶ

ಸಿಸ್ಟೋಬಾಲ್ ಕರ್ನಾಟಕ ತಂಡದಲ್ಲಿ ಸ್ಥಾನ ಪಡೆದರು. ರಾಜ್ಯಮಟ್ಟದ ಸಿಸ್ಟೋಬಾಲ್ ಕ್ರೀಡಾಕೂಟದಲ್ಲಿ ಸತತ ಮೂರು ವರ್ಷ ಭಾಗವಹಿಸಿದರು. ಅನಂತಪುರ ಹಾಗೂ ಬೆಂಗಳೂರಿನಲ್ಲಿ ನಡೆದ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದರು. 

ಥಾಯ್ಲೆಂಡ್‌ನಲ್ಲಿ ಈ ಹಿಂದೆ ನಡೆದ ಅಂತರರಾಷ್ಟ್ರೀಯ ಸಿಸ್ಟೋಬಾಲ್ ಪಂದ್ಯದಲ್ಲಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಿಸ್ಟೋಬಾಲ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಸಹ ಸಚಿನ್ ಭಾಗಿ ಆಗಿದ್ದಾರೆ.

ಇದನ್ನೂ ಓದಿ-ಬೆಂಗಳೂರಲ್ಲಿ ಐಟಿ ದಾಳಿ ವೇಳೆ ಕೋಟಿ ಕೋಟಿ ಪತ್ತೆ ಪ್ರಕರಣ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News