Rahul Dravid On Rishabh Pant : ಟೀಂ ಇಂಡಿಯಾ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಡಿಸೆಂಬರ್ 30 ರಂದು ಬೆಳಿಗ್ಗೆ ದೆಹಲಿಯಿಂದ ರೂರ್ಕಿಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದರು. ಸಧ್ಯ ಅವರು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಈಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಇದೀಗ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮತ್ತು ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಸೇರಿದಂತೆ ತಂಡದ ಇತರ ಆಟಗಾರರು ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ಪಂತ್ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಇದರ ವಿಡಿಯೋವನ್ನು ಬಿಸಿಸಿಐ ಟ್ವೀಟ್ ಮೂಲಕ ಶೇರ್ ಮಾಡಿದೆ.
ಟ್ವೀಟ್ ಮೂಲಕ ಈ ವಿಡಿಯೋ ಶೇರ್ ಮಾಡಿದ ಬಿಸಿಸಿಐ
ಬಿಸಿಸಿಐ ಶೇರ್ ಮಾಡಿರುವ ವಿಡಿಯೋದಲ್ಲಿ ಭಾರತ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್, 'ಹಲೋ ರಿಷಬ್. ನಿಮಗೆ ಶೀಘ್ರ ಗುಣವಾಗಲಿ ಎಂದು ಆಷಿಸುವೆ. ಕಳೆದ ಒಂದು ವರ್ಷದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಕೆಲವು ಅತ್ಯುತ್ತಮ ಇನ್ನಿಂಗ್ಸ್‌ಗಳನ್ನು ನೋಡುವ ಅದೃಷ್ಟ ನನ್ನದಾಗಿದೆ. ಕಷ್ಟದ ಸಂದರ್ಭಗಳಿಂದ ಹೊರಬರುವ ಸಾಮರ್ಥ್ಯ ನಿಮ್ಮಲ್ಲಿದೆ.
💬 💬 You are a fighter. Get well soon 🤗 #TeamIndia wish @RishabhPant17 a speedy recovery 👍 👍 pic.twitter.com/oVgp7TliUY
— BCCI (@BCCI) January 3, 2023
ಇದನ್ನೂ ಓದಿ : Team India : ಟೀಂ ಇಂಡಿಯಾಗೆ ಈ 5 ಸ್ಪೀಡ್ ಬೌಲರ್‌ಗಳ ಎಂಟ್ರಿ : Playing 11 ನಲ್ಲಿ ಸಿಗುತ್ತಾ ಚಾನ್ಸ್!
ಹಾರ್ದಿಕ್ ಪಾಂಡ್ಯಗೆ ಹೇಳಿದ್ದ ಹೀಗೆ
ಶ್ರೀಲಂಕಾ ವಿರುದ್ಧದ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ, ರಿಷಬ್, ನೀನು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ನೀನು ಹೋರಾಟಗಾರನೆಂದು ನನಗೆ ಗೊತ್ತು ಮತ್ತು ಶೀಘ್ರದಲ್ಲೇ ಚೇತರಿಸಿಕೊಂಡು ಟೀಂಗೆ ಹಿಂತಿರುಗಿ. ಇಡೀ ತಂಡ ಮತ್ತು ಇಡೀ ದೇಶ ನಿಮ್ಮೊಂದಿಗಿದೆ ಎಂದು ಹೇಳಿದ್ದಾರೆ.
'ರಿಷಭ್ ಬೇಗ ಗುಣಮುಖರಾಗಿ'
ಸೂರ್ಯಕುಮಾರ್ ಯಾದವ್, ರಿಷಭ್ ನೀವು ಬೇಗ ಗುಣಮುಖರಾಗಲಿ ಎಂದು ನಾನು ಬಯಸುತ್ತೇನೆ, ಆದರೆ ಈಗ ಪರಿಸ್ಥಿತಿ ಹೇಗಿದೆ ಎಂದು ನನಗೆ ಗೊತ್ತಿದೆ. ನಾವು ಇಲ್ಲಿ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಮತ್ತು ನಿಮ್ಮ ಸಹೋದರನನ್ನು ನೋಡಿಕೊಳ್ಳಿ. ಯುಜ್ವೇಂದ್ರ ಚಹಾಲ್, ಬ್ರದರ್ ಬೇಗ ಗುಣಮುಖರಾಗಲಿ ಎಂದು ಹೇಳಿದ್ದಾರೆ. ಒಟ್ಟಿಗೆ ಬೌಂಡರಿ ಹಾಗೂ ಸಿಕ್ಸರ್ ಸಿಡಿಸಿದ್ದ, ಇಶಾನ್ ಕಿಶನ್ ಮತ್ತು ಶುಭಮನ್ ಗಿಲ್ ಕೂಡ ರಿಷಬ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.
ಭಾರತಕ್ಕಾಗಿ ಎಲ್ಲಾ ಮೂರು ಮಾದರಿಗಳನ್ನು ಆಡಿದ್ದಾರೆ ಪಂತ್
ರಿಷಬ್ ಪಂತ್ ಟೀಂ ಇಂಡಿಯಾ ಪರ ಎಲ್ಲಾ ಮೂರು ಮಾದರಿಯ ಕ್ರಿಕೆಟ್ ಆಡಿದ್ದಾರೆ. ಸ್ಫೋಟಕ ಬ್ಯಾಟಿಂಗ್ ನಲ್ಲಿ ಪರಿಣಿತ ಆಟಗಾರರಾಗಿರುವ ಇವರು ಕ್ರೀಸ್ ಗೆ ಕಾಲಿಟ್ಟ ತಕ್ಷಣ ಆಕ್ರಮಣಕಾರಿ ಬ್ಯಾಟಿಂಗ್ ಗೆ ಫೇಮಸ್. ಅವರು ಏಕಾಂಗಿಯಾಗಿ ಆಸ್ಟ್ರೇಲಿಯಾದಲ್ಲಿ ಭಾರತ ತಂಡವನ್ನು ಗೆದ್ದರು. ಪಂತ್ ಭಾರತ ಪರ 33 ಟೆಸ್ಟ್ ಪಂದ್ಯಗಳು, 30 ODIಗಳು ಮತ್ತು 66 T20 ಪಂದ್ಯಗಳನ್ನು ಆಡಿದ್ದಾರೆ.
ಇದನ್ನೂ ಓದಿ : IND vs SL: ಟಿ20 ಸರಣಿಗೆ ಮುನ್ನ ಟೀಂ ಇಂಡಿಯಾಗೆ ಎಂಟ್ರಿ ನೀಡಿದ ಈ ಮಾರಕ ವೇಗದ ಬೌಲರ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.