ನವದೆಹಲಿ: 49 ಕೆಜಿ ಮಹಿಳೆಯರ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಮೀರಾ ಬಾಯಿ ಚಾನು ಚಿನ್ನದ ಪದಕವನ್ನು ಕೊರಳಿಗೆರೆಸಿದ್ದಾರೆ. ಆ ಮೂಲಕ ಭಾರತವು ಈಗ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಚಿನ್ನದ ಖಾತೆಯನ್ನು ತೆರೆದಿದೆ.
ಟೋಕಿಯೊ ಒಲಿಂಪಿಕ್ಸ್ ನ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಸ್ನ್ಯಾಚ್‌ನಲ್ಲಿ 88 ಕೆಜಿ ಹಾಗೂ ಕ್ಲೀನ್ ಅಂಡ್ ಜರ್ಕ್ ನಲ್ಲಿ 113 ಕೆ.ಜಿ.ಭಾರ ಎತ್ತುವ ಮೂಲಕ ಅವರು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.ಈಗ ಅವರ ಸಾಧನೆಗೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
The exceptional @mirabai_chanu makes India proud once again! Every Indian is delighted that she’s won a Gold and set a new Commonwealth record at the Birmingham Games. Her success inspires several Indians, especially budding athletes. pic.twitter.com/e1vtmKnD65
— Narendra Modi (@narendramodi) July 30, 2022
'ಅಸಾಧಾರಣ ಪ್ರದರ್ಶನದ ಮೂಲಕ ಮೀರಾಬಾಯಿ ಚಾನು ಭಾರತದ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.ಬರ್ಮಿಂಗ್ಹ್ಯಾಮ್ ಕ್ರೀಡಾಕೂಟದಲ್ಲಿ ಅವರು ಚಿನ್ನ ಗೆಲ್ಲುವುದರ ಮೂಲಕ ಈಗ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದಾಖಲೆಯನ್ನು ನಿರ್ಮಿಸಿರುವುದಕ್ಕೆ ಭಾರತೀಯರು ಸಂತಸ ವ್ಯಕ್ತಪಡಿಸುತ್ತಾರೆ, ವಿಶೇಷವಾಗಿ ಈ ಸಾಧನೆ ಉದಯೋನ್ಮುಖ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ" ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮೊದಲು ಮೀರಾಬಾಯಿ ಚಾನು ಗೋಲ್ಡ್ ಕೋಸ್ಟ್‌ನಲ್ಲಿ ನಡೆದ 2018 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ 2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದರು. ಇದೀಗ ಮೀರಾಬಾಯಿ ಚಾನು ಬರ್ಮಿಂಗ್ ಹ್ಯಾಮ್ ಗೇಮ್ಸ್ ನಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ವೇಟ್ ಲಿಫ್ಟಿಂಗ್ ಕ್ರೀಡೆಗೆ ಹೊಸ ದಿಕ್ಕನ್ನು ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.