ಈ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲಲ್ಲಿದೆ: ಪಂದ್ಯ ಆರಂಭಕ್ಕೂ ಮುನ್ನ ಕ್ರಿಕೆಟ್ ದಿಗ್ಗಜ ರಿಕಿ ಪಾಂಟಿಂಗ್ ಭವಿಷ್ಯ

Ricky Ponting prediction: T20 ವಿಶ್ವಕಪ್ 2024 ರ ಅಂತಿಮ ಪಂದ್ಯ ಇಂದು ಅಂದರೆ ಜೂನ್ 29 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಲಿದೆ.

Written by - Bhavishya Shetty | Last Updated : Jun 29, 2024, 02:47 PM IST
    • ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅಭಿಪ್ರಾಯ
    • ದಕ್ಷಿಣ ಆಫ್ರಿಕಾ ಅತ್ಯುತ್ತಮ ಪ್ರದರ್ಶನವನ್ನು ನೀಡಬೇಕಾಗಿದೆ
    • ಐಸಿಸಿಯ ಡಿಜಿಟಲ್ ದೈನಿಕ ಶೋನಲ್ಲಿ ಮಾತನಾಡಿದ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್
ಈ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲಲ್ಲಿದೆ: ಪಂದ್ಯ ಆರಂಭಕ್ಕೂ ಮುನ್ನ ಕ್ರಿಕೆಟ್ ದಿಗ್ಗಜ ರಿಕಿ ಪಾಂಟಿಂಗ್ ಭವಿಷ್ಯ title=
ricky ponting

Ricky Ponting prediction: T20 ವಿಶ್ವಕಪ್‌ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿಶೇಷವಾದ ಏನನ್ನೂ ಮಾಡುವ ಅಗತ್ಯವಿಲ್ಲ, ಅದು ತನ್ನ ಅತ್ಯುತ್ತಮ ಪ್ರದರ್ಶನವನ್ನು ನೀಡಬೇಕಾಗಿದೆ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಭಾರತ vs ದ.ಆಫ್ರಿಕಾ ಫೈನಲ್ ಫೈಟ್’ಗೆ ಬಾರ್ಬಡೋಸ್ ರೆಡಿ: ಈ ಪಿಚ್ ಯಾರಿಗೆ ಸಹಕಾರಿ?

T20 ವಿಶ್ವಕಪ್ 2024 ರ ಅಂತಿಮ ಪಂದ್ಯ ಇಂದು ಅಂದರೆ ಜೂನ್ 29 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಲಿದೆ. ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಅಫ್ಘಾನಿಸ್ತಾನವನ್ನು ಸೋಲಿಸಿ ಫೈನಲ್’ಗೆ ಎಂಟ್ರಿ ಪಡೆದರೆ, ಭಾರತವು ಇಂಗ್ಲೆಂಡ್ ಅನ್ನು ಸೋಲಿಸಿ ಅಂತಿಮ ಹಂತಕ್ಕೆ ಪ್ರವೇಶಿಸಿದೆ.

2024ರ ಟಿ 20 ವಿಶ್ವಕಪ್‌’ನಲ್ಲಿ ಇಲ್ಲಿಯವರೆಗೆ ಅಜೇಯವಾಗಿ ಉಳಿದಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡೂ ಫೈನಲ್‌ಗೆ ಪ್ರವೇಶಿಸಿವೆ.

ಐಸಿಸಿಯ ಡಿಜಿಟಲ್ ದೈನಿಕ ಶೋನಲ್ಲಿ ಮಾತನಾಡಿದ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, “ದಕ್ಷಿಣ ಆಫ್ರಿಕಾವು ಭಾರತದೊಂದಿಗೆ ಫೈನಲ್‌’ನಲ್ಲಿ ಸ್ಪರ್ಧಿಸುವ ಸಾಮಾರ್ಥ್ಯವನ್ನು ಹೊಂದಿದೆ. ಭಾರತದ ವಿರುದ್ಧ ಉತ್ತಮವಾಗಿ ಆಡುವ ಭರವಸೆಯೂ ಇದೆ” ಎಂದು ಹೇಳಿದ್ದಾರೆ.

17 ವರ್ಷಗಳ ನಂತರ ಟೀಂ ಇಂಡಿಯಾಗೆ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಅವಕಾಶ ಸಿಕ್ಕಿದೆ. ಭಾರತ ಕೊನೆಯ ಬಾರಿಗೆ 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿತ್ತು. ಮತ್ತೊಂದೆಡೆ, ದಕ್ಷಿಣ ಆಫ್ರಿಕಾಕ್ಕೆ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್ ಪ್ರಶಸ್ತಿ ಗೆಲ್ಲುವ ಅವಕಾಶವಿದೆ. ಐಸಿಸಿ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾದ ಏಕೈಕ ಗೆಲುವು 1998 ರ ಚಾಂಪಿಯನ್ಸ್ ಟ್ರೋಫಿಯಲ್ಲಿ... ಆಗ ಅದನ್ನು ಐಸಿಸಿ ನಾಕ್-ಔಟ್ ಟ್ರೋಫಿ ಎಂದು ಕರೆಯಲಾಗುತ್ತಿತ್ತು.

ಇದನ್ನೂ ಓದಿ: ಮಳೆಗಾಲದಲ್ಲಿ ಕೀಟಗಳ ನಿವಾರಣೆ ಮಾಡುವುದು ಹೇಗೆ..? ಇಲ್ಲಿವೆ ನೋಡಿ ಸೂಕ್ತ ಸಲಹೆಗಳು

ದಕ್ಷಿಣ ಆಫ್ರಿಕಾ ತಂಡವು ತಮ್ಮ 'ಚೋಕರ್ಸ್' ಹಣೆಪಟ್ಟಿಯನ್ನು ತೊರೆದು ಫೈನಲ್‌ ತಲುಪಿದೆ. ಟಿ20 ವಿಶ್ವಕಪ್‌’ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇದುವರೆಗೆ ಒಟ್ಟು 6 ಪಂದ್ಯಗಳು ನಡೆದಿವೆ. ಟಿ20 ವಿಶ್ವಕಪ್‌’ನಲ್ಲಿ ಭಾರತ 4 ಬಾರಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

 

Trending News