ಈ ವಿಚಾರದಲ್ಲಿ ಫುಟ್ಬಾಲ್ ದಿಗ್ಗಜರಾದ ರೊನಾಲ್ಡೋ-ಮೆಸ್ಸಿಯನ್ನೇ ಹಿಂದಿಕ್ಕಿದ ವಿರಾಟ್-ರೋಹಿತ್!

Most Visited Wikipedia Pages: ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌’ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ 11 ಪಂದ್ಯಗಳಲ್ಲಿ 765 ರನ್ ಗಳಿಸಿದ್ದರೆ, ಭಾರತದ ನಾಯಕ ರೋಹಿತ್ ಶರ್ಮಾ 11 ಪಂದ್ಯಗಳಲ್ಲಿ 597 ರನ್ ಗಳಿಸಿದ್ದರು.

Written by - Bhavishya Shetty | Last Updated : Nov 28, 2023, 09:42 PM IST
    • ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌’ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಗೆ ಅಗ್ರಸ್ಥಾನ
    • ವಿರಾಟ್ ಕೊಹ್ಲಿ ವಿಕಿಪೀಡಿಯಾ ಪುಟಕ್ಕೆ 5 ಮಿಲಿಯನ್‌ಗಿಂತಲೂ ಹೆಚ್ಚು ಜನರು ಭೇಟಿ
    • ರೋಹಿತ್ ಶರ್ಮಾ ಅವರ ಪುಟಕ್ಕೆ 4.7 ಮಿಲಿಯನ್ ಜನರು ಭೇಟಿ
ಈ ವಿಚಾರದಲ್ಲಿ ಫುಟ್ಬಾಲ್ ದಿಗ್ಗಜರಾದ ರೊನಾಲ್ಡೋ-ಮೆಸ್ಸಿಯನ್ನೇ ಹಿಂದಿಕ್ಕಿದ ವಿರಾಟ್-ರೋಹಿತ್!  title=
Most Visited Wikipedia Page

Most Visited Wikipedia Pages: ಇತ್ತೀಚೆಗೆ ಟೀಂ ಇಂಡಿಯಾ ವಿಶ್ವಕಪ್ ಫೈನಲ್‌’ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಆದರೆ ಈ ಟೂರ್ನಿಯಲ್ಲಿ ಭಾರತದ ಬ್ಯಾಟ್ಸ್‌ಮನ್‌’ಗಳು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮಾತ್ರವಲ್ಲದೆ ವಿರಾಟ್ ಕೊಹ್ಲಿ ಕೂಡ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

ಇದನ್ನೂ ಓದಿ: “ವಿಕೆಟ್ ಪಡೆಯಲು ಬ್ಯಾಟರ್’ಗಳಿಗೆ ಶಮಿ ಹಣ ಕೊಡ್ತಾರೆ”- ಮಾಜಿ ಪತ್ನಿ ಹಸೀನ್ ಜಹಾನ್

ಇನ್ನು ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌’ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ 11 ಪಂದ್ಯಗಳಲ್ಲಿ 765 ರನ್ ಗಳಿಸಿದ್ದರೆ, ಭಾರತದ ನಾಯಕ ರೋಹಿತ್ ಶರ್ಮಾ 11 ಪಂದ್ಯಗಳಲ್ಲಿ 597 ರನ್ ಗಳಿಸಿದ್ದರು.

ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ವಿಕಿಪೀಡಿಯಾ ಪುಟಕ್ಕೆ 5 ಮಿಲಿಯನ್‌’ಗಿಂತಲೂ ಹೆಚ್ಚು ಜನರು ಭೇಟಿ ನೀಡಿದ್ದಾರೆ. ವಿರಾಟ್ ಕೊಹ್ಲಿ ಪುಟಕ್ಕೆ 5 ಮಿಲಿಯನ್‌ಗಿಂತಲೂ ಹೆಚ್ಚು ಜನರು ಭೇಟಿ ನೀಡಿದ್ದರೆ, ರೋಹಿತ್ ಶರ್ಮಾ ಅವರ ಪುಟಕ್ಕೆ 4.7 ಮಿಲಿಯನ್ ಜನರು ಭೇಟಿ ನೀಡಿದ್ದಾರೆ. ಇದಲ್ಲದೆ, ಹಿರಿಯ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಅವರ ವಿಕಿಪೀಡಿಯಾ ಪುಟವು 4.4 ಮಿಲಿಯನ್ ಬಳಕೆದಾರರನ್ನು ಹೊಂದಿದ್ದು, ಅರ್ಜೆಂಟೀನಾದ ಪ್ರಸಿದ್ಧ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿಗೆ ಪೇಜ್’ಗೆ 4.3 ಮಿಲಿಯನ್ ಬಳಕೆದಾರರು ಭೇಟಿ ನೀಡಿದ್ದಾರೆ. ಈ ಮೂಲಕ ಕ್ರಿಸ್ಟಿಯಾನೋ ರೊನಾಲ್ಡೊ ಮತ್ತು ಲಿಯೋನೆಲ್ ಮೆಸ್ಸಿಗಿಂತ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ವಿಕಿಪೀಡಿಯಾದಲ್ಲಿ ಹೆಚ್ಚು ಜನಪ್ರಿಯರಾಗಿದ್ದಾರೆ.

ಇದನ್ನೂ ಓದಿ: ನನ್ನ ಮದುವೆ ಇದೆ… ನನಗೆ ರಜೆ ಕೊಡಿ: ಬಿಸಿಸಿಐ ಮುಂದೆ ವಿಶೇಷ ಮನವಿಯಿಟ್ಟ ಟೀಂ ಇಂಡಿಯಾದ ಸ್ಟಾರ್ ವೇಗಿ

ವಿಶ್ವಕಪ್‌’ನಲ್ಲಿ ಟೀಂ ಇಂಡಿಯಾ ಅದ್ಭುತವಾಗಿ ಆಡಿದೆ. ಭಾರತ ತಂಡ ಫೈನಲ್‌’ಗೆ ಮುನ್ನ ಸತತ 10 ಪಂದ್ಯಗಳಲ್ಲಿ ಎದುರಾಳಿ ತಂಡಗಳನ್ನು ಸೋಲಿಸಿತು. ಆದರೆ ಪ್ರಶಸ್ತಿ ಪಂದ್ಯದಲ್ಲಿ ಮಾತ್ರ ಎಡವಿತ್ತು ಭಾರತ. ಅಂದಹಾಗೆ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌’ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮೊದಲ 2 ಸ್ಥಾನಗಳನ್ನು ಕಾಯ್ದುಕೊಂಡಿದ್ದಾರೆ. ಇನ್ನೊಂದೆಡೆ ವಿಶ್ವಕಪ್‌’ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಮೊಹಮ್ಮದ್ ಶಮಿ ಹೊರಹೊಮ್ಮಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News