Nitish Rana: ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ, ಇಬ್ಬರ ಬಂಧನ!

Cricketer Nitish Rana's wife Harassed In Delhi: ದೆಹಲಿಯ ಕೀರ್ತಿ ನಗರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಸಾಚಿ ಮಾರ್ವಾರನ್ನು ಹಿಂಬಾಲಿಸಿದ್ದಾರೆ.

Written by - Puttaraj K Alur | Last Updated : May 6, 2023, 10:49 PM IST
  • ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೀದಿ ಕಾಮಣ್ಣರು ಅಟ್ಟಹಾಸ ಮೆರೆದಿದ್ದಾರೆ
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ನಿತೀಶ್ ರಾಣಾ ಪತ್ನಿಗೆ ಕಿರುಕುಳ
  • ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ ದೆಹಲಿ ಪೊಲೀಸರು
Nitish Rana: ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ, ಇಬ್ಬರ ಬಂಧನ! title=
ನಿತೀಶ್ ರಾಣಾ ಪತ್ನಿಗೆ ಕಿರುಕುಳ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೀದಿ ಕಾಮಣ್ಣರು ಅಟ್ಟಹಾಸ ಮೆರೆದಿದ್ದಾರೆ. ಖ್ಯಾತ ಕ್ರಿಕೆಟಿಗ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ನಿತೀಶ್ ರಾಣಾ ಪತ್ನಿಗೆ ಕಿರುಕುಳ ನೀಡಲಾಗಿದೆ.   ಹಿಂಬಾಲಿಸಿ ಕಿರುಕುಳ ನೀಡಿದ ಘಟನೆ ವರದಿಯಾಗಿದೆ.  

ನಿತೀಶ್ ರಾಣಾರ ಪತ್ನಿ ಸಾಚಿ ಮಾರ್ವಾರನ್ನು ಹಿಂಬಾಲಿಸಿದ ಕಾಮುಕರು ಕಿರುಕುಳ ನೀಡಿದ್ದಾರೆಂದು ವರದಿಯಾಗಿದೆ. ದೆಹಲಿಯ ಕೀರ್ತಿ ನಗರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಸಾಚಿ ಮಾರ್ವಾರನ್ನು ಹಿಂಬಾಲಿಸಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಸಿದ್ದಾರೆ. ಈ ಕೃತ್ಯವನ್ನು ಸಾಚಿಯವರು ತಮ್ಮ ಮೊಬೈಲ್‍ನಲ್ಲಿ ಸೆರೆಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿWrestlers FIR: 'ಉಸಿರು ಪರೀಕ್ಷೆಯ ನೆಪ ಹೇಳಿ ಬೃಜ್ ಭೂಷಣ್ ಎದೆ-ಹೊಟ್ಟೆ ಸ್ಪರ್ಶಿಸುತ್ತಿದ್ದ'

ತಮಗೆ ಕಿರುಕುಳ ನೀಡಿದ ದುಷ್ಕರ್ಮಿಗಳ ವಿರುದ್ಧ ಸಾಚಿ ಮಾರ್ವಾ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ‘ಈ ಬಗ್ಗೆ ನಾನು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದಾಗ, ನೀವು ಸುರಕ್ಷಿತವಾಗಿ ಮನೆ ತಲುಪಿದ್ದೀರಾ? ಹೋಗಲಿ ಬಿಡಿ, ಮುಂದಿನ ಬಾರಿ ಇದೇ ರೀತಿ ನಡೆದರೆ ನಂಬರ್ ನೋಟ್ ಮಾಡಿಕೊಳ್ಳುವಂತೆ ಹೇಳಿದರು’ ಅಂತಾ ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಾಚಿ, ‘ಆಯ್ತು ನಾನು ಮುಂದಿನ ಬಾರಿ ಅವರ ಫೋನ್ ನಂಬರ್‍ಗಳನ್ನು ತೆಗೆದುಕೊಳ್ಳುತ್ತೇನೆ’ ಎಂದು ಇನ್ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ. ಸಾಚಿಯವರು ಆರ್ಕಿಟೆಕ್ಚರಲ್ ಡಿಸೈನರ್ ಆಗಿದ್ದಾರೆ.

ಇದನ್ನೂ ಓದಿ: IPL 2023: ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಸೂಪರ್ ದಾಖಲೆ, ಈ ಸಾಧನೆ ಮಾಡಿದ ಏಕೈಕ ಬ್ಯಾಟ್ಸ್‌ಮನ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News