Team India : ಈ ಸ್ಟಾರ್ ಆಟಗಾರನ ವೃತ್ತಿಜೀವನಕ್ಕೆ ಮುಳುವಾದ ಇಶಾನ್ ಕಿಶನ್!  

Team India : ಟೀಂ ಇಂಡಿಯಾದ ವಿಕೆಟ್ ಕೀಪರ್ ಓಪನರ್ ಇಶಾನ್ ಕಿಶನ್ ಬಾಂಗ್ಲಾದೇಶ ವಿರುದ್ಧ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದಲ್ಲಿ 131 ಎಸೆತಗಳಲ್ಲಿ 210 ರನ್ ಗಳಿಸಿ ಸಂಚಲನ ಮೂಡಿಸಿದ್ದಾರೆ. ಇಶಾನ್ ಕಿಶನ್ ಅವರ ಕಿಲ್ಲರ್ ಇನ್ನಿಂಗ್ಸ್‌ನಲ್ಲಿ 24 ಬೌಂಡರಿ ಮತ್ತು 10 ಸಿಕ್ಸರ್‌ಗಳನ್ನೂ ಸಿಡಿಸಿದ್ದಾರೆ.

Written by - Channabasava A Kashinakunti | Last Updated : Dec 11, 2022, 04:09 PM IST
  • ಇಶಾನ್ ಕಿಶನ್ ಬಗ್ಗೆ ಬಿಗ್ ಹೇಳಿಕೆ ನೀಡಿದ ದಿನೇಶ್ ಕಾರ್ತಿಕ್
  • ಈ ಸ್ಟಾರ್ ಆಟಗಾರನ ವೃತ್ತಿಜೀವನಕ್ಕೆ ಮುಳುವಾದ ಇಶಾನ್
  • ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವುದು ಕಷ್ಟ
Team India : ಈ ಸ್ಟಾರ್ ಆಟಗಾರನ ವೃತ್ತಿಜೀವನಕ್ಕೆ ಮುಳುವಾದ ಇಶಾನ್ ಕಿಶನ್!   title=

Team India : ಟೀಂ ಇಂಡಿಯಾದ ವಿಕೆಟ್ ಕೀಪರ್ ಓಪನರ್ ಇಶಾನ್ ಕಿಶನ್ ಬಾಂಗ್ಲಾದೇಶ ವಿರುದ್ಧ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದಲ್ಲಿ 131 ಎಸೆತಗಳಲ್ಲಿ 210 ರನ್ ಗಳಿಸಿ ಸಂಚಲನ ಮೂಡಿಸಿದ್ದಾರೆ. ಇಶಾನ್ ಕಿಶನ್ ಅವರ ಕಿಲ್ಲರ್ ಇನ್ನಿಂಗ್ಸ್‌ನಲ್ಲಿ 24 ಬೌಂಡರಿ ಮತ್ತು 10 ಸಿಕ್ಸರ್‌ಗಳನ್ನೂ ಸಿಡಿಸಿದ್ದಾರೆ. ಇಶಾನ್ ಕಿಶನ್ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗದ ದ್ವಿಶತಕ ಸಿಡಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇಶಾನ್ ಕಿಶನ್ ಬಗ್ಗೆ ಬಿಗ್ ಹೇಳಿಕೆ ನೀಡಿದ ದಿನೇಶ್ ಕಾರ್ತಿಕ್

ಭಾರತದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಇಶಾನ್ ಕಿಶನ್ ಬಗ್ಗೆ ಬಿಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಇಶಾನ್ ಕಿಶನ್ ಏಕದಿನ ಕ್ರಿಕೆಟ್‌ನಲ್ಲಿ ಈ ದ್ವಿಶತಕ ಬಾರಿಸುವ ಮೂಲಕ ಟೀಂ ಇಂಡಿಯಾದ ದೊಡ್ಡ ಸ್ಟಾರ್ ಕ್ರಿಕೆಟಿಗನ ವೃತ್ತಿಜೀವನಕ್ಕೆ ಮುಳುವಾಗಿದ್ದರೆ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ. ವಾಸ್ತವವಾಗಿ, ದಿನೇಶ್ ಕಾರ್ತಿಕ್ ಪ್ರಕಾರ, ಇಶಾನ್ ಕಿಶನ್ ODI ಕ್ರಿಕೆಟ್‌ನಲ್ಲಿ ತಮ್ಮ ಮೊದಲ ದ್ವಿಶತಕವನ್ನು ಗಳಿಸುವ ಮೂಲಕ ಅನುಭವಿ ಆರಂಭಿಕ ಶಿಖರ್ ಧವನ್ ಅವರ ODI ವೃತ್ತಿಜೀವನಕ್ಕೆ ಕಾಂತವಾಗಿದ್ದರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Ishan Kishan: 190 ರನ್ ಗಳಿಸಿದ್ದ ವೇಳೆ ಕೊಹ್ಲಿಗೆ ಗುಟ್ಟಾಗಿ ಇಶಾನ್ ಕಿಶನ್ ಹೇಳಿದ್ರು ಆ ಒಂದು ಮಾತು!!

ಈ ಸ್ಟಾರ್ ಆಟಗಾರನ ವೃತ್ತಿಜೀವನಕ್ಕೆ ಮುಳುವಾದ ಇಶಾನ್

ಇಶಾನ್ ಕಿಶನ್ ದ್ವಿಶತಕದ ನಂತರ ಶಿಖರ್ ಧವನ್ ವೃತ್ತಿ ಜೀವನ ಅಪಾಯದಲ್ಲಿದೆ ಎಂದು ದಿನೇಶ್ ಕಾರ್ತಿಕ್ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ದಿನೇಶ್ ಕಾರ್ತಿಕ್, 'ಈ ದ್ವಿಶತಕದ ನಂತರ ಟೀಂ ಇಂಡಿಯಾದ ಪ್ಲೇಯಿಂಗ್ XI ನಿಂದ ಇಶಾನ್ ಕಿಶನ್ ಅವರನ್ನು ಹೇಗೆ ಹೊರಗಿಡುತ್ತಾರೆ ಎಂಬುದು ಈಗ ಕುತೂಹಲಕಾರಿಯಾಗಿದೆ. ಮುಂಬರುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶಿಖರ್ ಧವನ್ ಸ್ಥಾನ ಎಲ್ಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವುದು ಕಷ್ಟ

ಶ್ರೀಲಂಕಾ ವಿರುದ್ಧದ ಈ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಆಡಿದರೆ, ಶಿಖರ್ ಧವನ್ ಟೀಮ್ ಇಂಡಿಯಾದ ಪ್ಲೇಯಿಂಗ್ XI ನಿಂದ ಹೊರಗುಳಿಯಬೇಕಾಗುತ್ತದೆ ಮತ್ತು ಇದು ಅವರ ವೃತ್ತಿಜೀವನಕ್ಕೆ ದುಃಖದ ಅಂತ್ಯವಾಗಬಹುದು ಎಂದು ದಿನೇಶ್ ಕಾರ್ತಿಕ್ ಕ್ರಿಕ್‌ಬಜ್‌ನಲ್ಲಿ ಸಂವಾದದಲ್ಲಿ ಹೇಳಿದರು. ಬಾಂಗ್ಲಾದೇಶ ವಿರುದ್ಧ ಇತ್ತೀಚೆಗೆ ಆಡಿದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶಿಖರ್ ಧವನ್ 7, 8 ಮತ್ತು 3 ರನ್ ಗಳಿಸಿದ್ದಾರೆ. ಈ ಫ್ಲಾಪ್ ಪ್ರದರ್ಶನದ ನಂತರ ಶಿಖರ್ ಧವನ್ ಮತ್ತೊಮ್ಮೆ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಲ್ಲಿ ಸ್ಥಾನ ಪಡೆಯುವುದು ಕಷ್ಟವಾಗಿದೆ.

ಇದನ್ನೂ ಓದಿ : Team India: ಟೀಂ ಇಂಡಿಯಾಕ್ಕೆ ಮಾರಕವಾಗುತ್ತಿದೆ ರೋಹಿತ್-ದ್ರಾವಿಡ್ ಜೋಡಿ! ಇದುವೇ ಅತಿ ದೊಡ್ಡ ಕಾರಣ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News