Guess Who: ವಿರಾಟ್ ಕೊಹ್ಲಿ ಜೊತೆ ಕಾಣಿಸಿಕೊಂಡ ಈ ಆಟಗಾರ ಯಾರು ಗೊತ್ತಾ? ಗೆಸ್ ಮಾಡಿ ನೋಡೋಣ!

Virat Kohli Viral Photo: ವಿರಾಟ್ ಕೊಹ್ಲಿಯ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ಫೋಟೋದಲ್ಲಿ, ವಿರಾಟ್ ಮತ್ತು ಅವರ ಸಹ ಆಟಗಾರ ಬಸ್ಸಿನಲ್ಲಿ ಕುಳಿತಿರುವುದು ಕಂಡುಬರುತ್ತದೆ. ಈ ಫೋಟೋವನ್ನು 19 ವರ್ಷದೊಳಗಿನವರ ವಿಶ್ವಕಪ್ ಸಮಯದಲ್ಲಿ ತೆಗೆಯಲಾಗಿದೆ.

Written by - Bhavishya Shetty | Last Updated : Apr 8, 2023, 12:31 AM IST
    • ವಿರಾಟ್ ಕೊಹ್ಲಿಯ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.
    • ಈ ಫೋಟೋದಲ್ಲಿ, ವಿರಾಟ್ ಮತ್ತು ಅವರ ಸಹ ಆಟಗಾರ ಬಸ್ಸಿನಲ್ಲಿ ಕುಳಿತಿರುವುದು ಕಂಡುಬರುತ್ತದೆ.
    • ಈ ಫೋಟೋವನ್ನು 19 ವರ್ಷದೊಳಗಿನವರ ವಿಶ್ವಕಪ್ ಸಮಯದಲ್ಲಿ ತೆಗೆಯಲಾಗಿದೆ.
Guess Who: ವಿರಾಟ್ ಕೊಹ್ಲಿ ಜೊತೆ ಕಾಣಿಸಿಕೊಂಡ ಈ ಆಟಗಾರ ಯಾರು ಗೊತ್ತಾ? ಗೆಸ್ ಮಾಡಿ ನೋಡೋಣ! title=
virat kohli photo

 Virat Kohli Viral Photo: ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್‌ ತಂಡದ ಪ್ರಮುಖ ಆಟಗಾರ. ತಮ್ಮ ಆಟದ ಆಧಾರದ ಮೇಲೆಯೇ  ಜಗತ್ತಿನಾದ್ಯಂತ ಅನೇಕ ಅಭಿಮಾನಿಗಳನ್ನು ಅವರು ಹೊಂದಿದ್ದಾರೆ. ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಅನ್ನು ಇಷ್ಟಪಡುತ್ತಾರೆ. ಇತ್ತೀಚೆಗೆ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ವಿಶೇಷವೆಂದರೆ ಈ ಚಿತ್ರ ಅವರ ಬಾಲ್ಯದ್ದು. ಅಷ್ಟೇ ಅಲ್ಲ ಈ ಚಿತ್ರದಲ್ಲಿ ಜನರು ಅವರನ್ನು ಸುಲಭವಾಗಿ ಗುರುತಿಸುತ್ತಿದ್ದಾರೆ. ಆದರೆ ಅವರೊಂದಿಗೆ ಇರುವ ಮತ್ತೊಬ್ಬ ಆಟಗಾರನನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: IPL ಮಧ್ಯೆಯೇ ಟೀಂ ಇಂಡಿಯಾದ ಈ ಸ್ಫೋಟಕ ಆರಂಭಿಕ ಆಟಗಾರ ಮೇಲೆ ಕೇಸು ದಾಖಲು!

ವಿರಾಟ್ ಕೊಹ್ಲಿಯ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ಫೋಟೋದಲ್ಲಿ, ವಿರಾಟ್ ಮತ್ತು ಅವರ ಸಹ ಆಟಗಾರ ಬಸ್ಸಿನಲ್ಲಿ ಕುಳಿತಿರುವುದು ಕಂಡುಬರುತ್ತದೆ. ಈ ಫೋಟೋವನ್ನು 19 ವರ್ಷದೊಳಗಿನವರ ವಿಶ್ವಕಪ್ ಸಮಯದಲ್ಲಿ ತೆಗೆಯಲಾಗಿದೆ. ಇದರಲ್ಲಿ ವಿರಾಟ್‌ ನನ್ನು ಎಲ್ಲರೂ ಸುಲಭವಾಗಿ ಗುರುತಿಸುತ್ತಿದ್ದಾರೆ. ಆದರೆ ಜನರು ಅವರ ಸಹ ಆಟಗಾರನ ಬಗ್ಗೆ ವಿವಿಧ ಹೆಸರುಗಳನ್ನು ಹೇಳುತ್ತಿದ್ದಾರೆ. ಜನರು ಕೂಡ ಈ ಚಿತ್ರವನ್ನು ತೀವ್ರವಾಗಿ ಶೇರ್ ಮಾಡುತ್ತಿದ್ದಾರೆ. ಜೊತೆಗೆ ಕೆಲವೊಂದು ಹೆಸರುಗಳನ್ನು ನೆಟ್ಟಿಗರು ಹೇಳುತ್ತಿದ್ದು ಆ ಹೆಸರನ್ನು ನೀವೊಮ್ಮ ನೋಡಿ.

 

ಇದನ್ನೂ ಓದಿ: IPL 2023: ಹೀನಾಯ ಸೋಲಿನ ಬಳಿಕ RCBಯಿಂದ ಹೊರಬಿದ್ದ ಆಟಗಾರ: ಈ ಮಾರಕ ಬೌಲರ್ ಗ್ರ್ಯಾಂಡ್ ಎಂಟ್ರಿ!

ಸದ್ಯ ಈ ಸಮಯದಲ್ಲಿ ವಿರಾಟ್ ಕೊಹ್ಲಿ ಐಪಿಎಲ್ 2023 ರಲ್ಲಿ ಆಡುತ್ತಿದ್ದಾರೆ. ಈ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿದ್ದಾರೆ. ತಂಡದ ಮೊದಲ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 49 ಎಸೆತಗಳಲ್ಲಿ ಅಜೇಯ 82 ರನ್ ಗಳಿಸಿ ತಂಡವನ್ನು ಗೆದ್ದುಕೊಂಡರು. ಇದಲ್ಲದೇ ನಾಯಕ ಫಾಫ್ ಡು ಪ್ಲೆಸಿಸ್ ಕೂಡ 43 ಎಸೆತಗಳಲ್ಲಿ 73 ರನ್ ಗಳಿಸಿ ಅರ್ಧಶತಕ ಸಿಡಿಸಿದ್ದರು.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News