ಲಂಡನ್: ಇಲ್ಲಿನ ಲಾರ್ಡ್ಸ್ ಮೈದಾನದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭಾರತದ ವಿರುದ್ಧ 100 ರನ್ ಗಳ ಭರ್ಜರಿ ಗೆಲುವನ್ನು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಭಾರತ ತಂಡವು ಇಂಗ್ಲೆಂಡ್ ತಂಡವನ್ನು 49 ಓವರ್ ಗಳಲ್ಲಿ 246 ರನ್ ಗಳಿಗೆ ಕಟ್ಟಿ ಹಾಕಿತು. ಇಂಗ್ಲೆಂಡ್ ತಂಡದ ಪರವಾಗಿ ಮೊಯಿನ್ ಅಲಿ 47 ಹಾಗೂ ವಿಲ್ಲೆ 41 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.ಭಾರತ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಚಹಾಲ್ ನಾಲ್ಕು ವಿಕೆಟ್ ಪಡೆದರೆ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಎರಡು ವಿಕೆಟ್ ಗಳನ್ನು ಕಬಳಿಸಿದರು.
ಇಂಗ್ಲೆಂಡ್ ತಂಡವು ನೀಡಿದ 247 ರನ್ ಗಳ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ರಿಸೇ ತೋಪ್ಲೆ ಬೌಲಿಂಗ್ ದಾಳಿಗೆ ತತ್ತರಿಸಿತು, ಅವರು ಕೇವಲ 9.5 ಓವರ್ ಗಳಲ್ಲಿ ಎರಡು ಮೇಡನ್ ಸೇರಿ 24 ರನ್ ಗಳಿಗೆ 6 ವಿಕೆಟ್ ಕಬಳಿಸುವ ಮೂಲಕ ಭಾರತ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.
ಇದನ್ನೂ ಓದಿ : ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವಿರುದ್ದ ಸಿಎಂಗೆ ದೂರು :ವರ್ಗಾವಣೆಗೆ ಮನವಿ
Reece Topley's stunning spell keeps England alive in the ODI series against India 👊 #ENGvIND | 📝 Scorecard: https://t.co/LUUs4go6H0 pic.twitter.com/wPZBs7mGTd
— ICC (@ICC) July 14, 2022
ತಂಡದ ಮೊತ್ತ 31 ಆಗುವಷ್ಟರಲ್ಲಿ ರೋಹಿತ್ ಶರ್ಮಾ, ಶಿಖರ್ ಧವನ್,ರಿಶಬ್ ಪಂತ್,ಕೊಹ್ಲಿಯಂತಹ ಪ್ರಮುಖ ಆಟಗಾರರ ವಿಕೆಟ್ ಗಳನ್ನು ಕಳೆದುಕೊಂಡ ಭಾರತ ತಂಡವು ನಂತರ ಚೇತರಿಸಿಕೊಳ್ಳಲೇ ಇಲ್ಲ.
ಭಾರತದ ಪರವಾಗಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ತಲಾ 29 ರನ್ ಗಳಿಸಿದ್ದೆ ಗರಿಷ್ಟ ಮೊತ್ತವಾಗಿತ್ತು.ಅಂತಿಮವಾಗಿ ಭಾರತ ತಂಡವು 38.5 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 146 ರನ್ ಗಳನ್ನಷ್ಟೇ ಶಕ್ತವಾಯಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ