ವಂಚನೆ ಆರೋಪ: ಮಾಜಿ ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ ಪ್ರಕರಣ ದಾಖಲು!

S Sreesanth cheating case: ಕ್ರೀಡಾ ಅಕಾಡೆಮಿ ಸ್ಥಾಪಿಸುವುದಾಗಿ ಹೇಳಿ ಶ್ರೀಶಾಂತ್ ಅವರು 2019ರಲ್ಲಿ ಸುಮಾರು 18.7 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಅಂತಾ ಸರೀಶ್ ಗೋಪಾಲನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

Written by - Puttaraj K Alur | Last Updated : Nov 24, 2023, 09:00 PM IST
  • ಮತ್ತೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿದ ಮಾಜಿ ಕ್ರಿಕೆಟಿಗ ಎಸ್.ಶ್ರೀಶಾಂತ್‍
  • ವಂಚನೆ ಆರೋಪದಡಿ ಶ್ರೀಶಾಂತ್ ವಿರುದ್ಧ ಪ್ರಕರಣ ದಾಖಲಿಸಿದ ಕೇರಳ ಪೊಲೀಸರು
  • ಕ್ರೀಡಾ ಅಕಾಡೆಮಿ ಸ್ಥಾಪಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಆರೋಪ
ವಂಚನೆ ಆರೋಪ: ಮಾಜಿ ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ ಪ್ರಕರಣ ದಾಖಲು! title=
ಶ್ರೀಶಾಂತ್ ವಿರುದ್ಧ ಪ್ರಕರಣ ದಾಖಲು!

ನವದೆಹಲಿ: ಮಾಜಿ ಕ್ರಿಕೆಟಿಗ ಎಸ್.ಶ್ರೀಶಾಂತ್‍ಗೂ ವಿವಾದಗಳಿಗೂ ಬಿಡದ ನಂಟು. ಸ್ಪಾಟ್ ಫಿಕ್ಸಿಂಗ್ ಮೂಲಕ ಸಖತ್ ಸುದ್ದಿಯಾಗಿ ಕ್ರಿಕೆಟ್ ಜೀವನವನ್ನೇ ಹಾಳುಮಾಡಿಕೊಂಡ ಶ್ರೀಶಾಂತ್ ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುತ್ತಾರೆ. ಇದೀಗ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮತ್ತೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿರುವ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಕೇರಳ ಪೊಲೀಸರು ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಸರೀಶ್ ಗೋಪಾಲನ್ ನೀಡಿರುವ ದೂರಿನ ಮೇರೆಗೆ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಪ್ರರಕಣ ದಾಖಲಾಗಿದೆ.

ಇದನ್ನೂ ಓದಿ: ಭಾರತದ ಟಿ20 ಕ್ರಿಕೆಟ್’ಗೆ ಸಿಕ್ಕಾಯ್ತು ಪರ್ಫೆಕ್ಟ್ ಮ್ಯಾಚ್ ವಿನ್ನರ್! ಈತ ಎಂಟ್ರಿಯಾಗ್ತಿದ್ದಂತೆ ಸಿಕ್ಸರ್ ಸುರಿಮಳೆ ಗ್ಯಾರಂಟಿ

ಕ್ರೀಡಾ ಅಕಾಡೆಮಿ ಸ್ಥಾಪಿಸುವುದಾಗಿ ಹೇಳಿ ಶ್ರೀಶಾಂತ್ ಅವರು 2019ರಲ್ಲಿ ಸುಮಾರು 18.7 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಅಂತಾ ಸರೀಶ್ ಗೋಪಾಲನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ‘ಶ್ರೀಶಾಂತ್ ನನಗೆ ಕ್ರೀಡಾ ಅಕಾಡೆಮಿಯಲ್ಲಿ ಪಾಲುದಾರಿಕೆ ಅವಕಾಶ ನೀಡಿದ್ದರು. ನಂತರ ನನ್ನ ಬಳಿ ಹಣ ಪಡೆದು ವಂಚಿಸಿದ್ದಾರೆ. ನನಗೆ ನ್ಯಾಯ ಕೊಡಿಸಬೇಕು’ ಅಂತಾ ಸರೀಶ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಶ್ರೀಶಾಂತ್ ಮತ್ತು ಇತರ ಇಬ್ಬರು ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 420(ವಂಚನೆ) ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಶ್ರೀಶಾಂತ್ ಅವರನ್ನು 3ನೇ ಆರೋಪಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಶ್ರೀಶಾಂತ್ ಪ್ರಸ್ತುತ ನಡೆಯುತ್ತಿರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC)ನಲ್ಲಿ ಗುಜರಾತ್ ಜೈಂಟ್ಸ್ ಪರ ಆಡುತ್ತಿದ್ದಾರೆ.

ಇದನ್ನೂ ಓದಿ: Navdeep Saini: ಆರ್‌ಸಿಬಿ ವೇಗಿ ನವದೀಪ್ ಲವ್‌ ಮ್ಯಾರೇಜ್‌..! ಬಹುಕಾಲದ ಪ್ರಿಯತಮೆ ಯಾರು ಗೊತ್ತಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News