GT vs PBKS, IPL 2022: ಟೈಟಾನ್ಸ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಪಂಜಾಬ್ ಕಿಂಗ್ಸ್

ಐಪಿಎಲ್ ಟೂರ್ನಿಯ 48ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಗ್ ಕಿಂಗ್ಸ್ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.

Written by - Puttaraj K Alur | Last Updated : May 4, 2022, 12:18 AM IST
  • ಪಂಜಾಬ್ ಕಿಂಗ್ಸ್ ಬೌಲಿಂಗ್ ದಾಳಿಗೆ ನಲುಗಿದ ಗುಜರಾತ್ ಟೈಟಾನ್ಸ್
  • ಶಿಖರ್ ಧವನ್- ಭಾನುಕಾ ರಾಜಪಕ್ಸೆ ಅಬ್ಬರ ಬ್ಯಾಟಿಂಗ್ ಪ್ರದರ್ಶನ
  • ಗುಜರಾತ್ ವಿರುದ್ಧ ಪಂಜಾಬ್ ಕಿಂಗ್ಸ್‍ಗೆ 8 ವಿಕೆಟ್‍ಗಳ ಭರ್ಜರಿ ಗೆಲುವು
GT vs PBKS, IPL 2022: ಟೈಟಾನ್ಸ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಪಂಜಾಬ್ ಕಿಂಗ್ಸ್ title=
ಪಂಜಾಬ್ ಕಿಂಗ್ಸ್ ಗೆ 8 ವಿಕೆಟ್ಗಳ ಭರ್ಜರಿ ಗೆಲುವು

ಮುಂಬೈ: ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ 48ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ನಿಗದಿತ 20 ಓವರ್‍ಗಳಲ್ಲಿ 8 ವಿಕೆಟ್ ಕಳೆದುಕೊಂಡು 145 ರನ್‍ಗಳ ಸಾಧಾರಣ ಮೊತ್ತ ಗಳಿಸಿತು. ಸುಲಭ ಗುರಿ ಬೆನ್ನತ್ತಿದ ಪಂಜಾಬ್ 16 ಓವರ್‍ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.

ಇದನ್ನೂ ಓದಿ: IPL 2022 : 'ಆರೆಂಜ್ ಕ್ಯಾಪ್' ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ ಈ ದಿಗ್ಗಜ ಆಟಗಾರರು!

ಪಂಜಾಬ್ ಬೌಲಿಂಗ್ ದಾಳಿಗೆ ನಲುಗಿದ ಟೈಟಾನ್ಸ್!

ಪಂಜಾಬ್ ಬೌಲರ್‍ಗಳ ಮಾರಕ ಬೌಲಿಂಗ್ ದಾಳಿಗೆ ಗುಜರಾತ್ ತಂಡದ ಆಟಗಾರರು ರನ್ ಗಳಿಸಲು ತಿಣುಕಾಡಿದರು. ಗುಜರಾತ್ ಪರ ಸಾಯಿ ಸುದರ್ಶನ(ಅಜೇಯ 65) ಏಕಾಂಗಿ ಹೋರಾಟ ನಡೆಸಿ ಅರ್ಧಶತಕ ಗಳಿಸಿದರು. ಇನ್ನುಳಿದಂತೆ ವೃದ್ಧಿಮಾನ್ ಸಹಾ(21), ರಾಹುಲ್ ತಿವಾಟಿಯಾ(11) ಮತ್ತು ಡೇವಿಡ್ ಮಿಲ್ಲರ್(11) ರನ್ ಗಳಿಸಿದರು. ಪಂಜಾಬ್ ಪರ ಕಗಿಸೊ ರಬಾಡ 33ಕ್ಕೆ 4 ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. ಹರ್ಷದೀಪ್ ಸಿಂಗ್, ರಿಷಿ ಧವನ್ ಮತ್ತು ಲಿವಿಂಗ್‍ಸ್ಟನ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ಧವನ್-ಭಾನುಕಾ ಅಬ್ಬರ ಬ್ಯಾಟಿಂಗ್

ಸುಲಭ ಗೆಲುವಿನ ಗುರಿ ಬೆನ್ನತ್ತಿದ ಪಂಜಾಬ್ ಪರ ಶಿಖರ್ ಧವನ್ ಮತ್ತು ಭಾನುಕಾ ರಾಜಪಕ್ಷೆ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಧವನ್(ಔಟಾಗದೆ 62), ಭಾನುಕಾ(40) ಮತ್ತು ಲಿಯಾಮ್ ಲಿವಿಂಗ್ಸ್ಟೋನ್ ಅಜೇಯ 30 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಟೈಟಾನ್ಸ್ ಪರ ಮೊಹಮ್ಮದ್ ಶಮಿ ಮತ್ತು ಲಾಕಿ ಫರ್ಗುಸನ್ ತಲಾ ಒಂದೊಂದು ವಿಕೆಟ್ ಕಬಳಿಸಿದರು. ಈ ಗೆಲುವಿನ ಮೂಲಕ ಪಂಜಾಬ್ ಅಂಕಪಟ್ಟಿಯಲ್ಲಿ RCBಯನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಿದೆ. ಪಂದ್ಯ ಸೋತರೂ ಟೈಟಾನ್ಸ್ ಅಗ್ರಸ್ಥಾನ ಕಾಯ್ದುಕೊಂಡಿದೆ.

ಇದನ್ನೂ ಓದಿ: IPL 2022: ಆರ್‌ಸಿಬಿ ಪ್ಲೇ ಆಫ್‌ಗೆ ಹೋಗಲು ಇದೊಂದೇ ದಾರಿ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News