IPL 2022 : ಸೋಲಿನ ಸುಳಿಯಲ್ಲಿರುವ ಚೆನ್ನೈಗೆ ಇಂದು ಗುಜರಾತ್‌ ಸವಾಲು

ಹಾರ್ದಿಕ್‌ ಪಾಂಡ್ಯ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಗುಜರಾತ್‌ ಟೈಟಾನ್ಸ್‌ ತಂಡ 5 ಪಂದ್ಯಗಳನ್ನಾಡಿದ್ದು, ನಾಲ್ಕರಲ್ಲಿ ಜಯ ಗಳಿಸಿ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. 

Written by - Bhavishya Shetty | Last Updated : Apr 17, 2022, 11:05 AM IST
  • ಇಂದು ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಗುಜರಾತ್‌ ಟೈಟಾನ್ಸ್‌ ಮುಖಾಮುಖಿ
  • ಮಹಾರಾಷ್ಟ್ರದಲ್ಲಿ ನಡೆಯಲಿರುವ ಪಂದ್ಯ
  • ಸೋಲಿನ ಸುಳಿಯಿಂದ ಹೊರಬರಲು ಚೆನ್ನೈ ಸರ್ಕಸ್‌
IPL 2022 : ಸೋಲಿನ ಸುಳಿಯಲ್ಲಿರುವ ಚೆನ್ನೈಗೆ ಇಂದು ಗುಜರಾತ್‌ ಸವಾಲು title=
Indian Premier League

ಬೆಂಗಳೂರು: ಐಪಿಎಲ್‌ 2022ರ ಆವೃತ್ತಿಯ 29ನೇ ಆಟದಲ್ಲಿ ಇಂದು ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಗುಜರಾತ್‌ ಟೈಟಾನ್ಸ್‌ ಮುಖಾಮುಖಿಯಾಗಲಿದೆ. ಈಗಾಗಲೇ ಸೋಲಿನ ಸುಳಿಯಲ್ಲಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ಗುಜರಾತ್‌ ಟೈಟಾನ್ಸ್‌ ತಂಡ ಸವಾಲು ನೀಡಲಿದೆ. 

ಇದನ್ನು ಓದಿ: IPL 2022: ಅಬ್ಬರಿಸುತ್ತಿರುವ ಆರ್‌ಸಿಬಿಗೆ ಅಂಕಪಟ್ಟಿಯಲ್ಲಿದೆ ಈ ಸ್ಥಾನ...

ಹಾರ್ದಿಕ್‌ ಪಾಂಡ್ಯ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಗುಜರಾತ್‌ ಟೈಟಾನ್ಸ್‌ ತಂಡ 5 ಪಂದ್ಯಗಳನ್ನಾಡಿದ್ದು, ನಾಲ್ಕರಲ್ಲಿ ಜಯ ಗಳಿಸಿ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ಬಾರಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ವಿರುದ್ಧ ಸೋಲು ಕಂಡಿದ್ದು ಹೊರತಾಗಿ, ಗುಜರಾತ್‌ ಪಡೆ ಈ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. 

ಇನ್ನೊಂದೆಡೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ರವೀಂದ್ರ ಜಡೇಜ ನೇತೃತ್ವದಲ್ಲಿ ಮುನ್ನಡೆಯುತ್ತಿದೆ. ಐಪಿಎಲ್‌ನ  ಈ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ತೋರುತ್ತಿರುವ ತಂಡ ಆಡಿರುವ 5 ಪಂದ್ಯಗಳಲ್ಲಿ 4ರಲ್ಲಿ ಸೋತು 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನ ಪಡೆದುಕೊಂಡಿದೆ. ಇಂದು ನಡೆಯಲಿರುವ ಪಂದ್ಯದಲ್ಲಿ ಯಾವ ತಂಡಕ್ಕೆ ಜಯ ಲಭಿಸಲಿದೆ ಎಂಬುದನ್ನು ಕಾದುನೋಡಬೇಕಿದೆ. 

ಇದನ್ನು ಓದಿ: DC vs RCB: ದಿನೇಶ್ ಕಾರ್ತಿಕ್ ಭರ್ಜರಿ ಪ್ರದರ್ಶನದ ಹಿಂದಿನ ಗುಟ್ಟೇನು ಗೊತ್ತೇ?

‘ರಾಕೆಟ್ ಥ್ರೋ’ ಮೂಲಕ ಸ್ಟಂಪ್ ಮುರಿದ ಹಾರ್ದಿಕ್:
ಈ ಹಿಂದೆ ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ನಾಯಕ ಹಾರ್ದಿಕ್‌ ಪಾಂಡ್ಯ ರಾಕೆಟ್ ಥ್ರೋ ಎಸೆಯುವ ಮೂಲಕ ಸಂಜು ಸ್ಯಾಮ್ಸನ್ ಅವರನ್ನು ರನ್ ಔಟ್ ಮಾಡಿದ್ದರು. ಮಾತ್ರವಲ್ಲದೆ ಸ್ಟಂಪ್ ಅನ್ನು ಮುರಿದಿದ್ದರು. ಈ ದೃಶ್ಯವನ್ನು ಕಂಡು ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರೆಲ್ಲರೂ ಪುಳಕಿತರಾದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News