ಮುಂಬೈ ಇಂಡಿಯನ್ಸ್ ಗೆ ಬಿಗ್ ಶಾಕ್ ! ಇಡೀ ಸೀಸನ್ ತಂಡದಿಂದ ಹೊರಗುಳಿಯಲಿದ್ದಾರೆ ಈ ಮ್ಯಾಚ್ ವಿನ್ನರ್ !

Hardik Pandya Injury:ಇದೀಗ ಮುಂಬರುವ ಋತುವಿನಲ್ಲಿ ಹಾರ್ದಿಕ್ ಆಡುವ ಬಗ್ಗೆಯೇ ಅನುಮಾನ ಎದ್ದಿದೆ. ವಿಶ್ವಕಪ್‌ನಲ್ಲಿ ಕಾಣಿಸಿಕೊಂಡ ಗಾಯದ ಸಮಸ್ಯೆಯಿಂದ ಹಾರ್ದಿಕ್ ಇನ್ನೂ ಸಂಪೂರ್ಣವಾಗಿ  ಚೇತರಿಸಿಕೊಂಡಿಲ್ಲ ಎನ್ನಲಾಗಿದೆ.   

Written by - Ranjitha R K | Last Updated : Dec 23, 2023, 04:51 PM IST
  • ಗಾಯದ ಸಮಸ್ಯೆಯಿಂದಾಗಿ ವಿಶ್ವಕಪ್‌ನಿಂದ ಹೊರಗುಳಿದಿದ್ದ ಪಾಂಡ್ಯ
  • ಜನವರಿಯಲ್ಲಿ ಭಾರತ-ಅಫ್ಘಾನಿಸ್ತಾನ ಟಿ20 ಸರಣಿ
  • ಮುಂಬೈ ಇಂಡಿಯನ್ಸ್‌ನ ಐಪಿಎಲ್ ತಂಡ
ಮುಂಬೈ ಇಂಡಿಯನ್ಸ್ ಗೆ ಬಿಗ್ ಶಾಕ್ ! ಇಡೀ ಸೀಸನ್ ತಂಡದಿಂದ ಹೊರಗುಳಿಯಲಿದ್ದಾರೆ ಈ ಮ್ಯಾಚ್ ವಿನ್ನರ್ ! title=

Hardik Pandya Injury: ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ  ಗಾಯದ ಸಮಸ್ಯೆಯಿಂದಾಗಿ 2023 ರ ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಇದೀಗ IPL ಫ್ರಾಂಚೈಸಿ ಮುಂಬೈ ಇಂಡಿಯನ್ಸ್  ಹರಾಜಿಗೂ ಮುಂಚೆಯೇ, ಅವರನ್ನು ಗುಜರಾತ್ ಟೈಟಾನ್ಸ್‌ ನಿಂದ ಟ್ರೇಡ್ ಮಾಡಿಕೊಂಡು ತಮ್ಮ ತಂಡಕ್ಕೆ ಸೇರಿಸಿಕೊಂಡಿತ್ತು. ಇದಾದ ಕೆಲವು ದಿನಗಳ ನಂತರ, ಹಾರ್ದಿಕ್ ಪಾಂಡ್ಯ   ಮುಂಬೈ ಇಂಡಿಯನ್ಸ್‌ನ ಹೊಸ ನಾಯಕನಾಗಿ ನೇಮಕಗೊಂಡಿದ್ದಾರೆ  ಎನ್ನುವ ಸುದ್ದಿ ಕೂಡಾ ಕೇಳಿ ಬಂತು. ಆದರೆ ಇದೀಗ ಮುಂಬರುವ ಋತುವಿನಲ್ಲಿ ಹಾರ್ದಿಕ್ ಆಡುವ ಬಗ್ಗೆಯೇ ಅನುಮಾನ ಎದ್ದಿದೆ. ವಿಶ್ವಕಪ್‌ನಲ್ಲಿ ಕಾಣಿಸಿಕೊಂಡ ಗಾಯದ ಸಮಸ್ಯೆಯಿಂದ ಹಾರ್ದಿಕ್ ಇನ್ನೂ ಸಂಪೂರ್ಣವಾಗಿ  ಚೇತರಿಸಿಕೊಂಡಿಲ್ಲ ಎನ್ನಲಾಗಿದೆ. 

ವಿಶ್ವಕಪ್‌ನಲ್ಲಿ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ : 
ಭಾರತದ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಹಾರ್ದಿಕ್ ಪಾಂಡ್ಯ ಅವರು ವಿಶ್ವಕಪ್ 2023 ರ ಪಂದ್ಯವೊಂದರಲ್ಲಿ ಪಾದದ ಗಾಯದಿಂದಾಗಿ ಉಳಿದ ಪಂದ್ಯಾವಳಿಯಿಂದ ಹೊರಗುಳಿದಿದ್ದರು. ವಿಶ್ವಕಪ್ ನಂತರ, ಆಸ್ಟ್ರೇಲಿಯಾ ವಿರುದ್ಧದ ತವರಿನಲ್ಲಿ ನಡೆದ ಸರಣಿಯಲ್ಲೂ ಅವರು ಭಾಗವಹಿಸಿರಲಿಲ್ಲ. ಇದಾದ ಬಳಿಕ ಫಿಟ್ ಇಲ್ಲದ ಕಾರಣ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ತೆರಳಲು ಸಾಧ್ಯವಾಗಿರಲಿಲ್ಲ. ಜನವರಿ ಆರಂಭದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ 20 ಸರಣಿಯ ಮೊದಲು ಅವರು ಚೇತರಿಸಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅವರು ಈ ಸರಣಿಯಿಂದಲೂ ಹೊರಗುಳಿಯುತ್ತಾರೆ  ಎನ್ನುವ ಬಗ್ಗೆ ವರದಿಯಾಗಿದೆ. ಇದೀಗ ಐಪಿಎಲ್ ವೇಳೆಯೂ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದೇ ಹೇಳಲಾಗುತ್ತಿದೆ. 

ಇದನ್ನೂ ಓದಿ : ಟೀಮ್‌ ಇಂಡಿಯಾಕೆ ಇನ್ನೋದು ಬಿಗ್‌ ಶಾಕ್‌ ! ಟೆಸ್ಟ್‌ ಸರಣಿಯಿಂದ ಹೊರಗುಳಿದ "ಇಶಾನ್‌ ಕಿಶನ್‌"

ಜನವರಿಯಲ್ಲಿ ಭಾರತ-ಅಫ್ಘಾನಿಸ್ತಾನ ಟಿ20 ಸರಣಿ :
ಭಾರತವು ಜನವರಿ 11 ರಿಂದ 17 ರವರೆಗೆ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಜೂನ್‌ನಲ್ಲಿ ನಡೆಯಲಿರುವ ವಿಶ್ವಕಪ್‌ಗೂ ಮುನ್ನ ಭಾರತ ಆಡುವ ಕೊನೆಯ ಟಿ20 ಸರಣಿ ಇದಾಗಿದೆ. ಈ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಆಡುವುದು ಕಷ್ಟ. 

ಮುಂಬೈ ಇಂಡಿಯನ್ಸ್‌ನ ಐಪಿಎಲ್ ತಂಡ :
ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಡೆವಾಲ್ಡ್ ಬ್ರೂವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಾರ್, ಜೇಸನ್ ಬೆಹ್ರೆಂದೋರ್ ರೊಮಾರಿಯೋ ಶೆಫರ್ಡ್, ಜೆರಾಲ್ಡ್ ಕೋಟ್ಜಿ, ದಿಲ್ಶನ್ ಮಧುಶಂಕ, ಶ್ರೇಯಸ್ ಗೋಪಾಲ್, ನುವಾನ್ ತುಷಾರ, ನಮನ್ ಧೀರ್, ಅನ್ಶುಲ್ ಕಾಂಬೋಜ್, ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.

ಇದನ್ನೂ ಓದಿ : “ಧೋನಿ ಭಯ್ಯಾ…ಈ ಸಲ ಕಪ್ ಗೆಲ್ಲೋಕೆ RCBಗೆ ಸಹಾಯ ಮಾಡಿ”- ಅಭಿಮಾನಿಯ ಮನವಿಗೆ ಮಾಹಿ ಕೊಟ್ಟ ಉತ್ತರವೇನು ಗೊತ್ತಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News