ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಲು ನಿರ್ಧಾರಿಸಿದ್ದಾರೆಯೇ ಧೋನಿ ?-ವೀಡಿಯೋ ನೋಡಿ

   

Last Updated : Jul 19, 2018, 10:07 AM IST
ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಲು ನಿರ್ಧಾರಿಸಿದ್ದಾರೆಯೇ ಧೋನಿ ?-ವೀಡಿಯೋ ನೋಡಿ title=
Photo courtesy:pti

ನವದೆಹಲಿ: ಏಕದಿನ ಕ್ರಿಕೆಟ್ ಗೆ ಧೋನಿ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದಾರೆ ಎನ್ನುವ ಊಹಾಪೋಹ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ವೀಡಿಯೋ ಮೂಲಕ ಹಬ್ಬಿದೆ. 

ವೈರಲ್ ಆಗಿರುವ ವೀಡಿಯೋವೊಂದರಲ್ಲಿ ಧೋನಿ ಅಂಪೈರ್ ನಿಂದ ಬಾಲನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ವಿಡಿಯೋಗೆ ಈಗ ಸಾಕಷ್ಟು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದು.ಧೋನಿ ಸಧ್ಯದಲ್ಲೇ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ಭಾವಿಸಿದ್ದಾರೆ. ಈ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳಬೇಡಿ ಎಂದು ಧೋನಿಗೆ ಅವರು ವಿನಂತಿಸಿಕೊಂಡಿದ್ದಾರೆ.

ಧೋನಿ ಇಂಗ್ಲೆಂಡ್ ಸರಣಿಯಲ್ಲಿ ಏಕದಿನ ಕ್ರಿಕೆಟ್ ನಲ್ಲಿ 10 ಸಾವಿರ ರನ್ನು ಗಳಿಸಿದ ಸಾಧನೆಯನ್ನು ಮಾಡಿದ್ದಾರೆ. ಆ ಮೂಲಕ ಸಚಿನ್, ಗಂಗೂಲಿ, ದ್ರಾವಿಡ್ ನಂತರ ಧೋನಿ ಈ ಮೈಲುಗಲ್ಲನ್ನು ದಾಟಿದ್ದರು. ಇಂಗ್ಲೆಂಡ್ ವಿರುದ್ದ ಪಂದ್ಯದಲ್ಲಿ ಧೋನಿ 59 ಎಸೆತಗಳಲ್ಲಿ 37 ರನ್ ಗಳಿಸಿ ಸಾಕಷ್ಟು ಟೀಕೆಗೆ ಒಳಗಾಗಿದ್ದರು.
 

Trending News