ವಿಶ್ವಕಪ್ 2023ರ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆಯಾಗುತ್ತಾ? ಬಿಸಿಸಿಐ ಉಪಾಧ್ಯಕ್ಷ ಹೇಳಿದ್ದು ಹೀಗೆ…

World Cup 2023 Schedule: ಎಚ್‌’ಸಿಎ 45 ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಮಾತ್ರ ಆಯೋಜಿಸಲಿದೆ. ಈ ಮೂರು ಪಂದ್ಯಗಳು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿವೆ.

Written by - Bhavishya Shetty | Last Updated : Aug 21, 2023, 11:52 AM IST
    • 2023ರ ವಿಶ್ವಕಪ್‌’ನ ವೇಳಾಪಟ್ಟಿಯಲ್ಲಿ ಬದಲಾವಣೆಗಳನ್ನು ಮಾಡುವಂತೆ ಕೇಳಿಕೊಂಡಿದೆ
    • ODI ಕಪ್ ವೇಳಾಪಟ್ಟಿಯನ್ನು ಬದಲಾಯಿಸಲು HCA BCCI ಗೆ ವಿನಂತಿಸಿದೆ
    • ಇದೀಗ ಈ ವಿಚಾರದಲ್ಲಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದು ಹೀಗೆ…
ವಿಶ್ವಕಪ್ 2023ರ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆಯಾಗುತ್ತಾ? ಬಿಸಿಸಿಐ ಉಪಾಧ್ಯಕ್ಷ ಹೇಳಿದ್ದು ಹೀಗೆ… title=
BCCI

BCCI Vice President Rajeev Shukla: ಹೈದರಾಬಾದ್ ಕ್ರಿಕೆಟ್ ಸಂಸ್ಥೆ (ಎಚ್‌’ಸಿಎ) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂದೆ ಮನವಿ ಸಲ್ಲಿಸಿದ್ದು, 2023ರ ವಿಶ್ವಕಪ್‌’ನ ವೇಳಾಪಟ್ಟಿಯಲ್ಲಿ ಬದಲಾವಣೆಗಳನ್ನು ಮಾಡುವಂತೆ ಕೇಳಿಕೊಂಡಿದೆ. ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ಪಂದ್ಯಗಳು ಸೇರಿದಂತೆ ಬ್ಯಾಕ್-ಟು-ಬ್ಯಾಕ್ ಪಂದ್ಯಗಳಿವೆ. ಹೀಗಿರುವಾಗ ಹೈದರಾಬಾದ್ ಪೊಲೀಸರು ಭದ್ರತಾ ವ್ಯವಸ್ಥೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ODI ಕಪ್ ವೇಳಾಪಟ್ಟಿಯನ್ನು ಬದಲಾಯಿಸಲು HCA BCCI ಗೆ ವಿನಂತಿಸಿದೆ

ಇದನ್ನೂ ಓದಿ:   18 ವರ್ಷಗಳ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ 34ರ ಹರೆಯದ ಬಲಗೈ ಫಾಸ್ಟ್ ಬೌಲರ್

ಇದೀಗ ಈ ವಿಚಾರದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿಕೆ ನೀಡಿದ್ದಾರೆ. “2023ರ ವಿಶ್ವಕಪ್‌’ನಲ್ಲಿ ಬದಲಾವಣೆ ಮಾಡುವಂತೆ ಹೈದರಾಬಾದ್ ಕ್ರಿಕೆಟ್ ಸಂಸ್ಥೆ (ಎಚ್‌ಸಿಎ) ಮಾಡಿರುವ ಮನವಿ ಸಾಧ್ಯವಿಲ್ಲ. ವಿಶ್ವಕಪ್‌’ಗಾಗಿ ಹೈದರಾಬಾದ್ ಸ್ಥಳದ ಉಸ್ತುವಾರಿ ವಹಿಸಿದ್ದೇನೆ. ಯಾವುದೇ ಸಮಸ್ಯೆ ಇದ್ದರೆ, ನಾವು ಅದನ್ನು ಪರಿಹರಿಸಲು ಪ್ರಯತ್ನಿಸುತ್ತೇವೆ. ವಿಶ್ವಕಪ್ ವೇಳಾಪಟ್ಟಿಯನ್ನು ಬದಲಾಯಿಸುವುದು ಸುಲಭವಲ್ಲ ಮತ್ತು ಅದು ಸಂಭವಿಸುವ ಸಾಧ್ಯತೆಯೂ ಇಲ್ಲ” ಎಂದಿದ್ದಾರೆ.

ಎಚ್‌’ಸಿಎ 45 ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಮಾತ್ರ ಆಯೋಜಿಸಲಿದೆ. ಈ ಮೂರು ಪಂದ್ಯಗಳು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿವೆ. ಈ ತಿಂಗಳ ಆರಂಭದಲ್ಲಿ, ಬಿಸಿಸಿಐ ಮತ್ತು ಐಸಿಸಿ ಒಂಬತ್ತು ಪಂದ್ಯಗಳ ವೇಳಾಪಟ್ಟಿಯನ್ನು ಬದಲಾಯಿಸಿದ್ದವು. ಇದರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ದೊಡ್ಡ ಪಂದ್ಯವೂ ಸೇರಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಒಂದು ದಿನ ಮುಂಚಿತವಾಗಿ ಅಕ್ಟೋಬರ್ 14 ರಂದು ಆಯೋಜಿಸಲಾಗಿದೆ. ಇದಲ್ಲದೇ ಹೈದರಾಬಾದ್‌’ನಲ್ಲಿ ಶ್ರೀಲಂಕಾ ವಿರುದ್ಧದ ಪಾಕಿಸ್ತಾನದ ಪಂದ್ಯವನ್ನು ಅಕ್ಟೋಬರ್ 12 ರ ಬದಲಿಗೆ ಅಕ್ಟೋಬರ್ 10 ಕ್ಕೆ ಬದಲಾಯಿಸಲಾಯಿತು. ಅಕ್ಟೋಬರ್ 9 ರಂದು ನ್ಯೂಜಿಲೆಂಡ್ ವಿರುದ್ಧ ನೆದರ್ಲ್ಯಾಂಡ್ಸ್ ಪಂದ್ಯವನ್ನು HCA ಆಯೋಜಿಸುತ್ತಿದೆ.

ಸತತ ಎರಡು ಪಂದ್ಯಗಳಿಗೆ ಭದ್ರತೆ ಒದಗಿಸಲು ಹೈದರಾಬಾದ್ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದರು. ಬ್ಯಾಕ್ ಟು ಬ್ಯಾಕ್ ಪಂದ್ಯಗಳನ್ನು ನಡೆಸುವುದರಿಂದ ಪಾಕಿಸ್ತಾನ ತಂಡಕ್ಕೆ ಸೂಕ್ತ ಭದ್ರತೆ ಒದಗಿಸುವಲ್ಲಿ ವಿಫಲರಾಗಬಹುದು ಎಂದು ಹೈದರಾಬಾದ್ ಪೊಲೀಸರು ಎಚ್ ಸಿಎಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಈ ತರಕಾರಿಗಳು ಆರೋಗ್ಯದ ಜೊತೆಗೆ ತ್ವಚೆಯ ಸಮಸ್ಯೆಗಳನ್ನು ಸಹ ಗುಣಪಡಿಸುತ್ತವೆ, ಈ ಫೇಸ್ ಪ್ಯಾಕ್‌ಗಳನ್ನು ಬಳಸಿ!  

ಹಲವಾರು ವರದಿಗಳ ಪ್ರಕಾರ ಪಾಕಿಸ್ತಾನ-ಶ್ರೀಲಂಕಾ ಪಂದ್ಯಗಳನ್ನು ಆಯೋಜನೆ ಮಾಡುವ ಮೊದಲು HCA ಅನ್ನು ಸಂಪರ್ಕಿಸಿರಲಿಲ್ಲ. ವೇಳಾಪಟ್ಟಿಯಲ್ಲಿನ ಮೊದಲ ಬದಲಾವಣೆಗಾಗಿ ಈಗಾಗಲೇ ವಿದೇಶಿ ಮಾಧ್ಯಮಗಳಿಂದ ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಬಿಸಿಸಿಐ ಈ ಮನವಿಗೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News