Rain Alert: ಮುಂದಿನ 7 ದಿನಗಳಲ್ಲಿ ಈ ಭಾಗದಲ್ಲಿ ಸುರಿಯಲಿದೆ ಭರ್ಜರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Weather Update in Karnataka: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಮಧ್ಯೆ ಮುಂದಿನ ವಾರದಲ್ಲಿ ಸುಮಾರು 2 ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಬೆಂಗಳೂರು ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ.

Written by - Bhavishya Shetty | Last Updated : Apr 6, 2024, 06:41 PM IST
    • ಮುಂಬರುವ ಕೆಲ ದಿನಗಳಲ್ಲಿ ಭಾರೀ ವರ್ಷಧಾರೆ ಆಗಲಿದೆ ಎಂದು ಹೇಳಿದೆ.
    • ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ
    • ಬೆಂಗಳೂರಿನಲ್ಲಿ ಮುಂದಿನ ಕೆಲ ದಿನಗಳಲ್ಲಿ ಮಳೆಯಾಗಲಿದೆ
Rain Alert: ಮುಂದಿನ 7 ದಿನಗಳಲ್ಲಿ ಈ ಭಾಗದಲ್ಲಿ ಸುರಿಯಲಿದೆ ಭರ್ಜರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ title=
Karnataka Rain Update

Weather Update in Karnataka: ಕಳೆದ ಕೆಲ ತಿಂಗಳಿನಿಂದ ಕರ್ನಾಟಕದ ವಾತಾವರಣ ತೀರಾ ಬದಲಾಗಿದ್ದು, ಬಿಸಿಲಿನ ತಾಪಕ್ಕೆ ಜನ ಕಂಗಾಲಾಗಿದ್ದಾರೆ. ಆದರೆ ಇದೀಗ ಹವಾಮಾನ ಇಲಾಖೆ ಸಂತಸದ ಸುದ್ದಿ ನೀಡಿದ್ದು, ಮುಂಬರುವ ಕೆಲ ದಿನಗಳಲ್ಲಿ ಭಾರೀ ವರ್ಷಧಾರೆ ಆಗಲಿದೆ ಎಂದು ಹೇಳಿದೆ.

ಇದನ್ನೂ ಓದಿ: ‌Ramesh Bhat: ನಟ ರಮೇಶ್ ಭಟ್ ಹೆಂಡ್ತಿ-ಮಕ್ಕಳು ಯಾರು ಗೊತ್ತ? ಇವರ ಮಗ ಸಖತ್ ಫೇಮಸ್!!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಮಧ್ಯೆ ಮುಂದಿನ ವಾರದಲ್ಲಿ ಸುಮಾರು 2 ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಬೆಂಗಳೂರು ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ ಕೆಲ ದಿನಗಳಲ್ಲಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನೀಡಿದೆ.

IMDಯ ಪ್ರಕಾರ, ಯುಗಾದಿ ನಂತರದ ಅಂದರೆ ಏಪ್ರಿಲ್ 13 ಮತ್ತು 14 ರ ಬಳಿಕ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಈ ಮೂಲಕ ಮಳೆಗೆ ಕಾಯುತ್ತಿದ್ದ ಜನರು ನಿಟ್ಟುಸಿರು ಬಿಡುವ ಸಮಯ ಸಮೀಪಿಸಿದೆ ಎಂದೇ ಹೇಳಬಹುದು.

ಆದರೆ ಇವೆಲ್ಲದರ ಮಧ್ಯೆ ಏಪ್ರಿಲ್ 6 ರವರೆಗೂ ಬಿಸಿ ಗಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ದಿನ ಕಲಬುರಗಿಯಲ್ಲಿ 42.8 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ಇದು ರಾಜ್ಯದಲ್ಲಿಯೇ ಅಗ್ರಸ್ಥಾನದಲ್ಲಿದೆ.

ಇದನ್ನೂ ಓದಿ: ದಿನಾ ಬೆಳಗ್ಗೆ ಏಳುತ್ತಿದ್ದಂತೆ ಹಳಸಿದ ಬಾಯಲ್ಲಿ ಈ ಕಾಳನ್ನು ಜಗಿಯಿರಿ: ಕಿಡ್ನಿಯಲ್ಲಿ ಕಲ್ಲು ಇದ್ದರೆ ಸರಾಗವಾಗಿ ಕರಗಿ ಹೋಗುತ್ತೆ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿಗೆ ಜನ ಕಂಗಾಲಾಗಿದ್ದಾರೆ. ಕುಡಿಯಲು ನೀರಿಲ್ಲದೆ ಅನೇಕ ಕಡೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಜಾನುವಾರುಗಳ ಸಹ ತತ್ತರಿಸಿ ಹೋಗಿವೆ. ಈ ಎಲ್ಲದರ ಮಧ್ಯೆ ಇನ್ನಾದರೂ ಮಳೆರಾಯ ಕೃಪೆ ತೋರುತ್ತಾನಾ ಎಂದು ಕಾದು ನೋಡಬೇಕಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News