ನವದೆಹಲಿ: ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು(PV Sindhu)ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಮಹಿಳೆಯರು ಐತಿಹಾಸಿಕ ಸಾಧನೆ ಮಾಡುವ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ 2016ರ ರಿಯೋ ಒಲಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದಿದ್ದ ಸಿಂಧು ಈ ಬಾರಿ ಕಂಚು ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ. ಈ ಮೂಲಕ ಒಲಂಪಿಕ್ಸ್ ನಲ್ಲಿ ವೈಯಕ್ತಿಕ ವಿಭಾಗದಲ್ಲಿ 2 ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ.
ವೇಟ್ ಲಿಫ್ಟರ್ ಮೀರಾಬಾಯಿ ಚಾನು(Mirabai Chanu)ಮಹಿಳಾ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪಕದ ಗೆದಿದ್ದಾರೆ. ಇದಲ್ಲದೆ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಅವರಿಗೆ ಪದಕ ಖಚಿತವಾಗಿದೆ. ಒಲಂಪಿಕ್ಸ್ ನಲ್ಲಿ ಮಹಿಳೆಯರು ಅತ್ಯುತ್ತಮ ಸಾಧನೆ ಮಾಡುತ್ತಿದ್ದಾರೆ. ಕಂಚಿನ ಪದಕ ಗೆದ್ದು ಟೋಕಿಯೊದಿಂದ ಭಾರತಕ್ಕೆ ಮರಳಿದ ಸಿಂಧು ಖುಷಿ ಹಂಚಿಕೊಂಡಿದ್ದಾರೆ. ‘ಭಾರತೀಯ ಮಹಿಳೆಯರು ಒಲಂಪಿಕ್ಸ್ ನಲ್ಲಿ ಸಾಧನೆ ಮಾಡುತ್ತಿರುವುದು ಎಲ್ಲರಿಗೂ ಹೆಮ್ಮೆಯ ಕ್ಷಣ’ವೆಂದು ಹೇಳಿದ್ದಾರೆ.
ಇದನ್ನೂ ಓದಿ: Olympics Hockey: ಭಾರತಕ್ಕೆ ಕೈತಪ್ಪಿದ ‘ಚಿನ್ನ’ದ ಅವಕಾಶ, ಇನ್ನು ಕಂಚಿಗಾಗಿ ಹೋರಾಟ..!
‘ಟೋಕಿಯೊ ಕ್ರೀಡಾಕೂಟ(Tokyo Olympics 2020)ದಲ್ಲಿ ಭಾರತೀಯ ಮಹಿಳೆಯರು ಸರ್ವಶ್ರೇಷ್ಠ ಪ್ರದರ್ಶನ ನೀಡುತ್ತಿರುವುದು ಎಲ್ಲರಿಗೂ ಹೆಮ್ಮೆಯ ಕ್ಷಣವಾಗಿದೆ. ದೇಶಕ್ಕಾಗಿ ಆಡುತ್ತಿರುವ ಪ್ರತಿಯೊಬ್ಬ ಕ್ರೀಡಾಪಟುವಿಗೂ ನಾನು ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಟೋಕಿಯೊದಲ್ಲಿ ಭಾರತೀಯರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಭಾರತಕ್ಕೆ ಇನ್ನೂ ಹೆಚ್ಚಿನ ಪದಕಗಳು ಬರಲಿ ಎಂದು ಆಶಿಸುತ್ತೇನೆ’ ಎಂದು ಅವರು ತಿಳಿಸಿದ್ದಾರೆ.
ಕಂಚಿನ ಪದಕ ಗೆದ್ದು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸಿಂಧು ಅವರಿಗೆ ಭವ್ಯ ಸ್ವಾಗತ ಕೋರಲಾಗಿತ್ತು. ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಭಾರತೀಯ ಶಟ್ಲರ್ ಅನ್ನು ಸನ್ಮಾನಿಸಿ ಗೌರವಿಸಿದರು. ‘ಪಿ.ವಿ.ಸಿಂಧು(PV Sindhu)ಭಾರತದ ಶ್ರೇಷ್ಠ ಒಲಿಂಪಿಯನ್‌ಗಳಲ್ಲಿ ಒಬ್ಬರು. ಅವರು ಭಾರತದ ಐಕಾನ್ ಮತ್ತು ದೇಶಕ್ಕಾಗಿ ಆಡಲು ಕನಸು ಕಾಣುವ ಪ್ರತಿಯೊಬ್ಬ ಭಾರತೀಯನಿಗೂ ಅವರು ಸ್ಪೂರ್ತಿಯಾಗಿದ್ದಾರೆ’ ಎಂದು ಠಾಕೂರ್ ಹೇಳಿದ್ದಾರೆ.
ಇದನ್ನೂ ಓದಿ: Tokyo Olympics Hockey: ಆಸ್ಟ್ರೇಲಿಯಾಗೆ ಮಣ್ಣುಮುಕ್ಕಿಸಿ ಹೊಸ ಇತಿಹಾಸ ಸೃಷ್ಟಿಸಿದ ಭಾರತದ ವನಿತೆಯರು
‘ಪಿ.ವಿ.ಸಿಂಧು ನಂಬಲಾಗದಂತಹ ಸಾಧನೆ ಮಾಡಿದ್ದಾರೆ. ಸತತ 2 ಒಲಿಂಪಿಕ್ ಕ್ರೀಡಾಕೂಟ(Olympics Games)ಗಳಲ್ಲಿ 2 ಪದಕಗಳನ್ನು ಗೆಲ್ಲುವುದು ಒಂದು ಪೀಳಿಗೆಯ ಉದಯೋನ್ಮುಖ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ’ ಎಂದು ಅವರು ಹೇಳಿದ್ದಾರೆ. ಒಲಂಪಿಕ್ಸ್ ನಲ್ಲಿ ದೇಶಕ್ಕೆ ಪದಕ ತರುವಂತೆ ತಮ್ಮನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಸಿಂಧು ಇದೇ ವೇಳೆ ಧನ್ಯವಾದ ತಿಳಿಸಿದರು. ‘ನನಗೆ ಬೆಂಬಲಿಸಿದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನಾವು ಕ್ರೀಡಾಂಗಣದಲ್ಲಿ ಅಭಿಮಾನಿಗಳಿಲ್ಲದೆ ಆಡಿದರೂ, ಶತಕೋಟಿ ಭಾರತೀಯರು ನನ್ನನ್ನು ಬೆಂಬಲಿಸಿದ್ದಾರೆ. ಈ ಯಶಸ್ಸು ಅವರ ಇಚ್ಛೆಯ ಫಲವಾಗಿದೆ’ ಎಂದು ಹೇಳಿದ್ದಾರೆ.
‘ನನ್ನ ಹೆತ್ತವರ ನಿರಂತರ ಬೆಂಬಲ ಮತ್ತು ತ್ಯಾಗ. ನನಗೆ ತರಬೇತಿ ನೀಡಿದ ನನ್ನ ತರಬೇತುದಾರರಿಗೂ ನಾನು ಧನ್ಯವಾದ ಹೇಳುತ್ತೇನೆ. ಏಕೆಂದರೆ ನನ್ನ ಪದಕ ಗೆಲ್ಲುವ ಕನಸನ್ನು ಅವರು ನನಸಾಗಿಸಿದ್ದಾರೆ. ನನ್ನ ಯಶಸ್ಸಿನಲ್ಲಿ ಅವರದ್ದೂ ಪಾಲಿದೆ’ ಅಂತಾ ಸಿಂಧು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ