IBSA World Games ಭಾರತ ಮಹಿಳಾ ತಂಡಕ್ಕೆ ಚಿನ್ನ, ಪ್ರಧಾನಿ ಮೋದಿ ಅಭಿನಂದನೆ!

IBSA World Games 2023: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

Written by - Puttaraj K Alur | Last Updated : Aug 27, 2023, 02:09 PM IST
  • ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡ
  • ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‌ಗಳಿಂದ ಭರ್ಜರಿ ಗೆಲವು ಸಾಧಿಸಿ ಭಾರತದಿಂದ ಚಾರಿತ್ರಿಕ ಸಾಧನೆ
  • ಭಾರತ ಮಹಿಳಾ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ!
IBSA World Games ಭಾರತ ಮಹಿಳಾ ತಂಡಕ್ಕೆ ಚಿನ್ನ, ಪ್ರಧಾನಿ ಮೋದಿ ಅಭಿನಂದನೆ!  title=
ಭಾರತೀಯ ಮಹಿಳಾ ತಂಡದ ‘ಚಿನ್ನ’ದ ಸಾಧನೆ!

ನವದೆಹಲಿ: ಐಬಿಎಸ್‌ಎ ವಿಶ್ವ ಕ್ರೀಡಾಕೂಟ(IBSA World Games)ದಲ್ಲಿ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವು ಚಿನ್ನದ ಪದಕ ಗೆದ್ದು ಚಾರಿತ್ರಿಕ ಸಾಧನೆ ಮಾಡಿದೆ. ಕರ್ನಾಟಕದ ಆಟಗಾರ್ತಿ ವರ್ಷಾ ಉಮಾಪತಿ ನಾಯಕತ್ವದ ಭಾರತ ತಂಡವು ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‌ಗಳಿಂದ ಭರ್ಜರಿ ಗೆಲವು ಸಾಧಿಸಿತು.  ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 114 ರನ್ ಗಳಿಸಿತ್ತು.

ಮಳೆ ಕಾರಣ ಡಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ಗೆಲುವಿಗೆ 9 ಓವರ್‍ಗೆ 42 ರನ್‍ಗಳ ಗುರಿ ನೀಡಲಾಗಿತ್ತು. ಆದರೆ ಭಾರತ ತಂಡವು ಕೇವಲ 3.3 ಓವರ್‌ಗಳಲ್ಲಿ 42 ರನ್‌ ಬಾರಿಸಿ ಭರ್ಜರಿ ಗೆಲುವು ಸಾಧಿಸಿತು. ವಿಶ್ವ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಅಂಧರ ಕ್ರಿಕೆಟ್ ಆಡಿಸಲಾಗಿತ್ತು. ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಹೊಸ ಇತಿಹಾಸ ಸೃಷ್ಟಿಸಿತು.

ಇದನ್ನೂ ಓದಿ: ತಿಂಗಳೊಳಗೆ ಜಾಮೀನು ಸಿಗದಿದ್ದರೆ ಕ್ರಿಕೆಟಿಗ ಮೊಹಮ್ಮದ್ ಶಮಿ ಬಂಧನ..!

 ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಅಭಿನಂದನೆ

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ‘ಅಂಧರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು! IBSA ವಿಶ್ವ ಕ್ರೀಡಾಕೂಟದಲ್ಲಿ ಅಂಧರ ಕ್ರಿಕೆಟ್‌ನ ಮೊದಲ ಆವೃತ್ತಿಯಲ್ಲಿ ಐತಿಹಾಸಿಕ ಮತ್ತು ಸ್ಪೂರ್ತಿದಾಯಕ ಪ್ರದರ್ಶನಕ್ಕಾಗಿ ರಾಷ್ಟ್ರವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಮ್ಮ ಕ್ರೀಡಾಪಟುಗಳ ಅದಮ್ಯ ಸ್ಫೂರ್ತಿ ಮತ್ತು ಪ್ರತಿಭೆಯನ್ನು ಉದಾಹರಿಸುವ ಮೂಲಕ ಚಾರಿತ್ರಿಕ ಸಾಧನೆ ಮಾಡಿದ್ದಾರೆ. ಇದರಿಂದ ಭಾರತ ಹೆಮ್ಮೆ ಪಡುತ್ತಿದೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 8ನೇ ವಯಸ್ಸಿನಲ್ಲೇ ವಿಶ್ವದ ಗಮನ ಸೆಳೆದಿದ್ದ ʼಭಾರತದ ಭರವಸೆʼ ಪ್ರಗ್ನಾನಂದ್‌ ಅತ್ಯತ್ತಮ ಸಾಧನೆಗಳು..!

ಸಿಎಂ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿದ್ದು, ‘ಐಬಿಎಸ್‌ಎ ವಿಶ್ವ ಕ್ರೀಡಾಕೂಟದ ಅಂಧರ ಕ್ರಿಕೆಟ್ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದ ಭಾರತ ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಕ್ರೀಡಾಪಟುಗಳ ಐತಿಹಾಸಿಕ ಗೆಲುವು ಮತ್ತು ಸ್ಪೂರ್ತಿದಾಯಕ ಪ್ರದರ್ಶನಕ್ಕೆ ಇಡೀ ದೇಶವೇ ಹೆಮ್ಮೆಪಡುತ್ತಿದೆ' ಎಂದು ಹೇಳಿದ್ದಾರೆ.

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News