ICC Mens T20 World Cup 2022 : ಬಾಂಗ್ಲಾ ವಿರುದ್ಧ ಭಾರತಕ್ಕೆ 5 ರನ್ ಗಳ ರೋಚಕ ಗೆಲುವು

ಇಲ್ಲಿನ ಓವರ್ ಮೈದಾನದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶದ ವಿರುದ್ಧ ಐದು ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.

Written by - Zee Kannada News Desk | Last Updated : Nov 2, 2022, 06:16 PM IST
  • ಟಾಸ್ ಗೆದ್ದ ಬಾಂಗ್ಲಾದೇಶ ತಂಡವು ಭಾರತಕ್ಕೆ ಮೊದಲು ಬ್ಯಾಟಿಂಗ್ ಅವಕಾಶವನ್ನು ನೀಡಿತು.
  • ಈ ಅವಕಾಶವನ್ನು ಪಡೆದ ಭಾರತ ತಂಡವು ತಂಡದ ಮೊತ್ತ 11 ರನ್ ಗಳಾಗುವಷ್ಟರಲ್ಲಿ ರೋಹಿತ್ ಶರ್ಮಾ ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ಆಘಾತವನ್ನು ಅನುಭವಿಸಿತು.
  • ಆರ್ಶ್ದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಎರಡು ವಿಕೆಟ್ ಗಳನ್ನು ಪಡೆಯುವ ಮೂಲಕ ಬಾಂಗ್ಲಾದೇಶದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.
ICC Mens T20 World Cup 2022  : ಬಾಂಗ್ಲಾ ವಿರುದ್ಧ ಭಾರತಕ್ಕೆ 5 ರನ್ ಗಳ ರೋಚಕ ಗೆಲುವು  title=
Photo Courtsey: Twitter

ಅಡಿಲೇಡ್: ಇಲ್ಲಿನ ಓವೆಲ್ ಮೈದಾನದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶದ ವಿರುದ್ಧ ಐದು ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.

ಟಾಸ್ ಗೆದ್ದ ಬಾಂಗ್ಲಾದೇಶ ತಂಡವು ಭಾರತಕ್ಕೆ ಮೊದಲು ಬ್ಯಾಟಿಂಗ್ ಅವಕಾಶವನ್ನು ನೀಡಿತು.ಈ ಅವಕಾಶವನ್ನು ಪಡೆದ ಭಾರತ ತಂಡವು ತಂಡದ ಮೊತ್ತ 11 ರನ್ ಗಳಾಗುವಷ್ಟರಲ್ಲಿ ರೋಹಿತ್ ಶರ್ಮಾ ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ಆಘಾತವನ್ನು ಅನುಭವಿಸಿತು.ಇದೆ ವೇಳೆ ಕೆ.ಎಲ್.ರಾಹುಲ್ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ನೆರವಿನಿಂದ 32 ಎಸೆತಗಳಲ್ಲಿ 50 ರನ್ ಗಳಿಸುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿದರು.

ಇದನ್ನೂ ಓದಿ : TET Exam 2022 : ಇದೆ ತಿಂಗಳ 6 ರಂದು ಟಿಇಟಿ ಪರೀಕ್ಷೆ : ಅಭ್ಯರ್ಥಿಗಳಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ 

ಇನ್ನೊಂದೆಡೆಗೆ ಮಧ್ಯಮ ಕ್ರಮಾಂಕದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಸಮಯೋಚಿತ ಜೊತೆಯಾಟ ಆಡುವ ಮೂಲಕ ತಂಡವನ್ನು ಆಘಾತದಿಂದ ಪಾರು ಮಾಡಿದರು.ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ  64 ರನ್ ಗಳಿಸುವ ಮೂಲಕ ಅಜೇಯವಾಗಿ ಉಳಿದರು. ಇನ್ನೊಂದೆದೆಡೆಗೆ ಸೂರ್ಯಕುಮಾರ್ ಯಾದವ್ ಕೇವಲ 16 ಎಸೆತಗಳಲ್ಲಿ 30 ರನ್ ಗಳಿಸಿದರು.

ಅಂತಿಮವಾಗಿ ಭಾರತ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 184 ರನ್ ಗಳನ್ನು ಗಳಿಸಿತು.ಬಾಂಗ್ಲಾದೇಶದ ಪರವಾಗಿ ಹಸನ್ ಮೊಹಮ್ಮದ್ ಮೂರು ವಿಕೆಟ್ ಗಳನ್ನು ಪಡೆಯುವ ಮೂಲಕ ಗಮನ ಸೆಳೆದರು.

ಭಾರತ ತಂಡವು ನೀಡಿದ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶಕ್ಕೆ ಡಕ್ವರ್ತ್ ಲೂಯಿಸ್ ನಿಮಯದ ಪ್ರಕಾರ 151 ರನ್ ಗಳ ಗುರಿಯನ್ನು ನಿಗದಿಪಡಿಸಲಾಯಿತು. ಆದರೆ ಭಾರತದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಆರ್ಶ್ದೀಪ್ ಸಿಂಗ್  ಹಾಗೂ ಹಾರ್ದಿಕ್ ಪಾಂಡ್ಯ ತಲಾ ಎರಡು ವಿಕೆಟ್ ಗಳನ್ನು ಪಡೆಯುವ ಮೂಲಕ ಬಾಂಗ್ಲಾದೇಶದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

ಇದನ್ನೂ ಓದಿ : Wildlife Service Award 2022: ನವೆಂಬರ್ 5 ರಂದು ಅರಣ್ಯ ವೀಕ್ಷಕ ಫೈರೋಜ್ ವಿವಿಎಎಸ್ ರಿಂದ ಸನ್ಮಾನ

ಬಾಂಗ್ಲಾದೇಶದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಲಿಟ್ಟನ್ ದಾಸ್ ಕೇವಲ 27 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ ಏಳು ಬೌಂಡರಿ ಮೂಲಕ 60 ಗಳಿಸಿ ರನ್ ಔಟ್ ಗೆ ಬಲಿಯಾಗಿದ್ದರಿಂದ ಆಘಾತವನ್ನು ಎದುರಿಸಿತು. ಇದಾದ ನಂತರ ಮಧ್ಯಮ ಕ್ರಮಾಂಕದಲ್ಲಿ ಬೇಗನೆ ವಿಕೆಟ್ ಕಳೆದುಕೊಳ್ಳುವ ಮೂಲಕ ಸೋಲಿನ ಭೀತಿಯನ್ನು ಎದುರಿಸಿತು.ಅಂತಿಮವಾಗಿ ನುರುಲ್ ಹಸನ್ 14 ಎಸೆತಗಳಲ್ಲಿ 25 ಗಳಿಸುವ ಮೂಲಕ ಗೆಲುವಿನ ನಿರೀಕ್ಷೆಯನ್ನು ಮೂಡಿಸಿದ್ದಾದರೂ ಕೂಡ ಅಂತಿಮವಾಗಿ ಬಾಂಗ್ಲಾದೇಶವು 16 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 145 ರನ್ ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News