ICC World Cup 2023: ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕ್ ತಂಡಕ್ಕೆ ಐಸಿಸಿಯಿಂದ ದೊಡ್ಡ ಶಿಕ್ಷೆ!

ದಕ್ಷಿಣ ಆಫ್ರಿಕಾ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್‌ಗಾಗಿ ಪಾಕಿಸ್ತಾನ ಆಟಗಾರರಿಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಶುಕ್ರವಾರ ನಡೆದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 1 ವಿಕೆಟ್‌ನಿಂದ ರೋಚಕ ಜಯ ದಾಖಲಿಸಿತ್ತು.    

Written by - Puttaraj K Alur | Last Updated : Oct 28, 2023, 11:36 PM IST
  • ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ಐಸಿಸಿಯಿಂದ ಬಹುದೊಡ್ಡ ಶಿಕ್ಷೆ
  • ದಕ್ಷಿಣ ಆಫ್ರಿಕಾ ವಿರುದ್ಧ ನಿಧಾನಗತಿಯ ಓವರ್ ರೇಟ್‌ಗಾಗಿ ಪಾಕ್ ಆಟಗಾರರಿಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ
  • ಸತತ 4 ಸೋಲುಗಳಿಂದ ವಿಶ್ವಕಪ್ ಟೂರ್ನಿಯಿಂದ ಬಹುತೇಕ ಹೊರಬಿದ್ದಿರುವ ಪಾಕಿಸ್ತಾನ
ICC World Cup 2023: ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕ್ ತಂಡಕ್ಕೆ ಐಸಿಸಿಯಿಂದ ದೊಡ್ಡ ಶಿಕ್ಷೆ!    title=
ಪಾಕಿಸ್ತಾನಕ್ಕೆ ಐಸಿಸಿಯಿಂದ ಬಹುದೊಡ್ಡ ಶಿಕ್ಷೆ!

ನವದೆಹಲಿ: ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕಿಸ್ತಾನ ತಂಡಕ್ಕೆ ಐಸಿಸಿ ದೊಡ್ಡ ಶಿಕ್ಷೆ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ನಿಧಾನಗತಿಯ ಓವರ್ ಮಾಡಿದ್ದಕ್ಕಾಗಿ ಪಾಕಿಸ್ತಾನ ಆಟಗಾರರು ತಮ್ಮ ಪಂದ್ಯ ಶುಲ್ಕದ ಶೇ.20ರಷ್ಟು ದಂಡವನ್ನು ವಿಧಿಸಿದ್ದಾರೆ. ಶುಕ್ರವಾರ ನಡೆದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 1 ವಿಕೆಟ್‌ನಿಂದ ರೋಚಕ ಜಯ ದಾಖಲಿಸಿತ್ತು. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಾರ, ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ತಂಡವು ನಿಗದಿತ ಸಮಯದಲ್ಲಿ 4 ಓವರ್ಗಳನ್ನು ಕಡಿತಗೊಳಿಸಿತು, ನಂತರ ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಈ ದಂಡವನ್ನು ವಿಧಿಸಿದರು.

PAK ತಂಡದ ಮೇಲೆ ಸಂಕಷ್ಟಗಳ ಬೆಟ್ಟ!: ಪಾಕಿಸ್ತಾನದ ಆಟಗಾರರು ಮತ್ತು ಅವರ ಸಹಾಯಕ ಸಿಬ್ಬಂದಿಗೆ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22ರ ಪ್ರಕಾರ, ನಿಗದಿತ ಸಮಯದಲ್ಲಿ 1 ಓವರ್ ಕಡಿಮೆ ಮಾಡಿದ ಆಟಗಾರರಿಗೆ ಅವರ ಪಂದ್ಯದ ಶುಲ್ಕದ ಶೇ.5ರಷ್ಟು ದಂಡ ವಿಧಿಸಲಾಗುತ್ತದೆ. ಪಾಕಿಸ್ತಾನದ ನಾಯಕ ಬಾಬರ್ ಅಜಮ್ ತಮ್ಮ ಈ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲವೆಂದು ತಿಳಿದುಬಂದಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾ vs ನ್ಯೂಜಿಲ್ಯಾಂಡ್ ಪಂದ್ಯದಲ್ಲಿ ಬರೋಬ್ಬರಿ 771 ರನ್ ದಾಖಲು: ಇದು ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚು ಸ್ಕೋರ್

ಸೆಮಿಫೈನಲ್‌ ರೇಸ್‌ನಿಂದ ಬಹುತೇಕ ಹೊರಬಿದ್ದ ಪಾಕ್!: 2023ರ ವಿಶ್ವಕಪ್‌ನ ಸೆಮಿಫೈನಲ್‌ಗೆ ತಲುಪುವ ಪಾಕಿಸ್ತಾನದ ಕನಸು ನುಚ್ಚುನೂರಾಗಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 1 ವಿಕೆಟ್‌ನಿಂದ ಪಾಕಿಸ್ತಾನದ ವಿರುದ್ಧ ರೋಚಕ ಜಯ ದಾಖಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 46.4 ಓವರ್‌ಗಳಲ್ಲಿ 270 ರನ್‌ಗಳಿಗೆ ಆಲೌಟಾಯಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ 47.2 ಓವರ್‌ಗಳಲ್ಲಿ 9 ವಿಕೆಟ್‌ಗೆ 271 ರನ್ ಗಳಿಸಿ ಜಯ ಸಾಧಿಸಿತು.

ದಕ್ಷಿಣ ಆಫ್ರಿಕಾಗೆ ಅಗ್ರಸ್ಥಾನ: ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ 6 ಪಂದ್ಯಗಳಿಂದ 10 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಭಾರತವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಪಾಕಿಸ್ತಾನಕ್ಕೆ ಇದು ಸತತ 4ನೇ ಸೋಲಾಗಿದ್ದು, 6 ಪಂದ್ಯಗಳಲ್ಲಿ ಕೇವಲ 4 ಅಂಕಗಳನ್ನು ಹೊಂದಿದೆ. ಇದು ಸೆಮಿಫೈನಲ್ ತಲುಪುವ ಭರವಸೆಗೆ ಭಾರಿ ಹೊಡೆತ ನೀಡಿದೆ. ಮಾರ್ಕ್ರಾಮ್ ಪಾಕಿಸ್ತಾನಕ್ಕೆ ದೊಡ್ಡ ವಿಲನ್ ಆದರು. 93 ಎಸೆತಗಳಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 91 ರನ್ ಗಳಿಸಿದ ಅವರು ತಂಡದ ಗೆಲುವಿಗೆ ಉತ್ತಮ ಕೊಡುಗೆ ನೀಡಿದರು. ಮಾರ್ಕ್ರಾಮ್ ಔಟಾದ ನಂತರ, ಕೇಶವ್ ಮಹಾರಾಜ್ ಹೆಚ್ಚುಹೊತ್ತು ಕ್ರೀಸ್‍ನಲ್ಲಿ ನಿಂತು ತಂಡಕ್ಕೆ ಅದ್ಭುತ ಗೆಲುವು ತಂದುಕೊಟ್ಟರು. 21 ಎಸೆತಗಳಲ್ಲಿ ಕೇವಲ 7 ರನ್ ಗಳಿಸಿದರೂ ಅವರು ಹೀರೋ ಆದರು. ಮೊಹಮ್ಮದ್ ನವಾಜ್ ಎಸೆವನ್ನು ಫೋರ್ ಹೊಡೆಯುವ ಮೂಲಕ ತಂಡದ ರೋಚಕ ಗೆಲುವಿಗೆ ಕಾರಣರಾದರು.

ಇದನ್ನೂ ಓದಿ: ನೆದರ್ಲ್ಯಾಂಡ್ಸ್-ಆಸೀಸ್ ಗೆಲುವಿನಿಂದ ಪಾಯಿಂಟ್ಸ್ ಟೇಬಲ್’ನಲ್ಲಿ ಬದಲಾವಣೆ! ಈಗ ಎಷ್ಟನೇ ಸ್ಥಾನದಲ್ಲಿದೆ ಭಾರತ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News