ICC World Cup 2023: ಅ.14ರಂದು ಭಾರತ vs ಪಾಕ್ ಮುಖಾಮುಖಿ, ಭದ್ರತೆ ಹೇಗಿದೆ ಗೊತ್ತಾ..?

IND vs PAK, ICC World Cup 2023: ಅ.14ರ ಶನಿವಾರ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯವು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯಲಿದೆ. ಹೀಗಾಗಿ ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Written by - Puttaraj K Alur | Last Updated : Oct 12, 2023, 06:34 PM IST
  • ಅ.14ರಂದು ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮುಖಾಮುಖಿ
  • ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯಕ್ಕೆ ಬಿಗಿ ಭದ್ರತೆ
  • NDRF, SDRF, RAF ಮತ್ತು NSG ಕಮಾಂಡೋ ಸಹಿತ 7,000ಕ್ಕೂ ಪೊಲೀಸರ ನಿಯೋಜನೆ
ICC World Cup 2023: ಅ.14ರಂದು ಭಾರತ vs ಪಾಕ್ ಮುಖಾಮುಖಿ, ಭದ್ರತೆ ಹೇಗಿದೆ ಗೊತ್ತಾ..? title=
ಹೈವೋಲ್ಟೇಜ್ ಪಂದ್ಯಕ್ಕೆ ಬಿಗಿ ಭದ್ರತೆ!

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಆರಂಭವಾಗಿ ಒಂದು ವಾರವಾಗಿದೆ. ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನವನ್ನು ಸೋಲಿಸಿರುವ ಟೀಂ ಇಂಡಿಯಾ 2 ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಅಕ್ಟೋಬರ್‌ 14ರಂದು ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ.

ಬದ್ಧವೈರಿ ಪಾಕಿಸ್ತಾನ ವಿರುದ್ಧದ ಸೆಣಸಾಟವನ್ನು ವೀಕ್ಷಿಸಲು ಇಡೀ ಕ್ರಿಕೆಟ್ ಅಭಿಮಾನಿಗಳು ತುದಿಗಾಲ ಮೇಲೆ ನಿಂತು ಕಾಯುತ್ತಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಡೀ ವಿಶ್ವವೇ ಕಾದು ಕುಳಿತಿದೆ. ಈಗಾಗಲೇ ಈ ಪಂದ್ಯದ ಟಿಕೆಟ್‌ ಸೋಲ್ಡ್‌ ಔಟ್‌ ಆಗಿದೆ. ಉಭಯ ತಂಡಗಳೂ ಈಗಾಗಲೇ ಅಹಮದಾಬಾದ್‌ ತಲುಪಿವೆ.

ಇದನ್ನೂ ಓದಿ: PAK ವಿರುದ್ಧದ ಹೋರಾಟ ಸುಲಭವಲ್ಲ, ಈ 3 ಆಟಗಾರರು ಟೀಮ್ ಇಂಡಿಯಾಕ್ಕೆ ದುಃಸ್ವಪ್ನವಾಗಬಹುದು.!

ಅ.14ರ ಶನಿವಾರ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯವು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯಲಿದೆ. ಹೀಗಾಗಿ ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. NDRF, SDRF, RAF ಮತ್ತು NSG ಕಮಾಂಡೋ ಸಹಿತ 7,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.   

ಹೈವೋಲ್ಟೇಜ್ ಪಂದ್ಯವಾಗಿರುವುದರಿಂದ ಬಿಗಿ ಭದ್ರತೆಗಾಗಿ 4 IG-DIG, 21 DCP, 47 ACP, 131 PI, 369 PS ಸೇರಿದಂತೆ 7,000ಕ್ಕೂ ಹೆಚ್ಚು ಪೊಲೀಸರು ಭದ್ರತೆ ಕೈಗೊಳ್ಳಲಿದ್ದಾರೆ. ಭದ್ರತೆಗಾಗಿ 4,000ಕ್ಕೂ ಹೆಚ್ಚು ಗೃಹ ರಕ್ಷಕರನ್ನು ಸಹ ನಿಯೋಜಿಸಲಾಗಿದೆ. ಈಗಾಗಲೇ ಕ್ರೀಡಾಂಗಣ ಮತ್ತು ನಗರದ ಸುತ್ತಮುತ್ತ ಹಾಗೂ ಪ್ರಮುಖ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ.

ಇದನ್ನೂ ಓದಿ: ICC World Cup 2023: ಕ್ವಿಂಟನ್ ಡಿ ಕಾಕ್ ಭರ್ಜರಿ ಶತಕ, ಆಸ್ಟ್ರೇಲಿಯಾಗೆ 312 ಟಾರ್ಗೆಟ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News