IND vs AUS: 6-6-6-6 ‘ಸೂರ್ಯ’ನ ಅಬ್ಬರ! ಆಸೀಸ್‍ಗೆ 400 ಟಾರ್ಗೆಟ್ ನೀಡಿದ ಭಾರತ

India vs Australia, 2nd ODI: ಆಸ್ಟ್ರೇಲಿಯಾ ವಿರುದ್ಧ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಭರ್ಜರಿ ಅರ್ಧಶತಕ ಸಿಡಿಸಿದರು. ಆಸೀಸ್ ಬೌಲರ್‍ಗಳ ಬೆವರಳಿಸಿದ ‘ಸ್ಕೈ’ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಮಿಂಚಿದರು. ​

Written by - Puttaraj K Alur | Last Updated : Sep 24, 2023, 07:15 PM IST
  • ಆಸ್ಟ್ರೇಲಿಯಾ ವಿರುದ್ಧ ಸೂರ್ಯಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್
  • ಒಂದೇ ಓವರ್‍ನಲ್ಲಿ 4 ಸಿಕ್ಸರ್, 24 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದ ‘ಸ್ಕೈ’!
  • ಶುಭಮನ್‍ ಗಿಲ್ & ಶ್ರೇಯಸ್ ಅಯ್ಯರ್ ಭರ್ಜರಿ ಶತಕ, ಆಸೀಸ್‍ಗೆ 400 ಟಾರ್ಗೆಟ್
IND vs AUS: 6-6-6-6 ‘ಸೂರ್ಯ’ನ ಅಬ್ಬರ! ಆಸೀಸ್‍ಗೆ 400 ಟಾರ್ಗೆಟ್ ನೀಡಿದ ಭಾರತ title=
ಸೂರ್ಯಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್!

ನವದೆಹಲಿ: ಕ್ಯಾಮರೂನ್ ಗ್ರೀನ್ ಎಸೆದ 44ನೇ ಓವರ್‍ನಲ್ಲಿ ಟೀಂ ಇಂಡಿಯಾದ ಸ್ಫೋಟಕ ಆಟಗಾರ ಸೂರ್ಯಕುಮಾರ್ 4 ಹ್ಯಾಟ್ರಿಕ್ ಸಿಕ್ಸ್ ಬಾರಿಸುವ ಮೂಲಕ ಆಸ್ಟ್ರೇಲಿಯಾಗೆ ನಡುಕ ಹುಟ್ಟಿಸಿದ್ದಾರೆ. ‘ಸ್ಕೈ’ ಅಬ್ಬರಕ್ಕೆ ಆಸೀಸ್ ಕಂಗಾಲಾಗಿ ಹೋಗಿದೆ.

ಇಂದೋರ್‍ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಭಾರತದ ಬಾಟ್ಸ್ ಮನ್‍ಗಳು ಅಬ್ಬರದ ಬ್ಯಾಟಿಂಗ್ ನಡೆಸಿದ್ದು, ಆಸೀಸ್‍ಗೆ ಬೃಹತ್ ಮೊತ್ತದ ಟಾರ್ಗೆಟ್ ನೀಡಿದೆ. ಟಾಸ್ ಗೆದ್ದು ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 399 ರನ್‍ಗಳ ಬೃಹತ್ ಮೊತ್ತ ಪೇರಿಸಿದೆ.

ಭಾರತದ ಪರ ಅಬ್ಬರದ ಬ್ಯಾಟಿಂಗ್ ನಡೆಸಿದ ಆರಂಭಿಕ ಆಟಗಾರ ಶುಭ್‍ಮನ್‍ ಗಿಲ್(104) ಮತ್ತು ಶ್ರೇಯಸ್ ಅಯ್ಯರ್(105) ಭರ್ಜರಿ ಶತಕ ಸಿಡಿಸಿ ಮಿಂಚಿದರು. ನಂತರ ಬಂದ ಕನ್ನಡಿಗ ಕೆ.ಎಲ್.ರಾಹುಲ್(52) ಆಕರ್ಷಕ ಅರ್ಧಶತಕ ಸಿಡಿಸಿದ್ರೆ, ಇಶಾನ್ ಕಿಶನ್(31) ರನ್ ಗಳಿಸಿದರು.

ಇದನ್ನೂ ಓದಿ: ಆಸೀಸ್ ವಿರುದ್ಧದ 2ನೇ ಏಕದಿನಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ! ಈ ಆಟಗಾರನ ಬದಲು ಸಿರಾಜ್’ಗೆ ಅವಕಾಶ

ಸೂರ್ಯಕುಮಾರ್ ಅಬ್ಬರದ ಬ್ಯಾಟಿಂಗ್..!

ಆಸ್ಟ್ರೇಲಿಯಾ ವಿರುದ್ಧ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಭರ್ಜರಿ ಅರ್ಧಶತಕ ಸಿಡಿಸಿದರು. ಆಸೀಸ್ ಬೌಲರ್‍ಗಳ ಬೆವರಳಿಸಿದ ‘ಸ್ಕೈ’ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಮಿಂಚಿದರು. 37 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ತಲಾ 6 ಬೌಂಡರಿ ಮತ್ತು 6 ಸಿಕ್ಸರ್ ಇದ್ದ ಅಜೇಯ 72 ರನ್ ಗಳಿಸಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕ್ಯಾಮರೂನ್ ಗ್ರೀನ್ ಎಸೆದ 44ನೇ ಓವರ್‍ನ ಮೊದಲ 4 ಎಸೆತಗಳನ್ನು ಸಿಕ್ಸರ್‍ಗೆ ಅಟ್ಟುವ ಮೂಲಕ ಸೂರ್ಯಕುಮಾರ್ ಆಸೀಸ್‍ ತಂಡಕ್ಕೆ ನಡುಕವನ್ನುಂಟು ಮಾಡಿದರು.

ಆಸ್ಟ್ರೇಲಿಯಾಗೆ ಆರಂಭಿಕ ಆಘಾತ!

400 ರನ್‍ಗಳ ಗೆಲುವಿನ ಗುರಿ ಪಡೆದಿರುವ ಆಸ್ಟ್ರೇಲಿಯಾ ಆರಂಭಿಕ ಆಘಾತ ಅನುಭವಿಸಿದೆ. 2ನೇ ಓವರ್ ಎಸೆಯಲು ಬಂದ ಪ್ರಸಿದ್ ಕೃಷ್ಣ 2ನೇ ಎಸೆತದಲ್ಲಿ ಮ್ಯಾಥ್ಯೂ ಶಾರ್ಟ್ ಮತ್ತು 3ನೇ ಎಸೆತದಲ್ಲಿ ಸ್ಟೀವ್ ಸ್ಮಿತ್ ವಿಕೆಟ್ ಕಬಳಿಸುವ ಮೂಲಕ ಆಸೀಸ್‍ಗೆ ಮರ್ಮಾಘಾತ ನೀಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಆಸ್ಟ್ರೇಲಿಯಾ 7 ಓವರ್‍ಗಳಲ್ಲಿ 2 ವಿಕೆಟ್ ನಷ್ಟಕ್ಕೆ 48 ರನ್ ಗಳಿಸಿದ್ದು, ಡೇವಿಡ್ ವಾರ್ನರ್ ಮತ್ತು ಮಾರ್ನಸ್ ಲ್ಯಾಬುಶೇನ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಾಯಕ ರೋಹಿತ್ ಶರ್ಮಾರ ಅತ್ಯಂತ ನೆಚ್ಚಿನ ಓಪನಿಂಗ್ ಬ್ಯಾಟ್ಸ್’ಮನ್ ಯಾರು ಗೊತ್ತಾ?

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News