IND vs AUS : ಪ್ಲೇಯಿಂಗ್ 11ನಿಂದ ಇಬ್ಬರು ದಿಗ್ಗಜ್ಜರು ಔಟ್ ! ಈ ಓಪನರ್ ಗೆ ತಂಡದಲ್ಲಿ ಸ್ಥಾನ

Playing 11, IND vs AUS 1st ODI : ಇಬ್ಬರು ಆಟಗಾರರು ಪ್ಲೇಯಿಂಗ್-11ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಮೊದಲ 2 ಪಂದ್ಯಗಳಲ್ಲಿ ಕೆಎಲ್ ರಾಹುಲ್ ಟೀಂ ಇಂಡಿಯಾ ನಾಯಕತ್ವವನ್ನು ವಹಿಸಲಿದ್ದಾರೆ. 

Written by - Ranjitha R K | Last Updated : Sep 22, 2023, 10:17 AM IST
  • ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಸರಣಿಯ ಮೊದಲ ಪಂದ್ಯ
  • ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ
  • ಪ್ಲೇಯಿಂಗ್ 11ನಿಂದ ಇಬ್ಬರು ದಿಗ್ಗಜ್ಜರು ಔಟ್
IND vs AUS : ಪ್ಲೇಯಿಂಗ್ 11ನಿಂದ ಇಬ್ಬರು ದಿಗ್ಗಜ್ಜರು ಔಟ್ ! ಈ ಓಪನರ್ ಗೆ ತಂಡದಲ್ಲಿ ಸ್ಥಾನ  title=

Playing 11, IND vs AUS 1st ODI : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಮೊದಲ ಪಂದ್ಯ ಇಂದು ಅಂದರೆ ಸೆಪ್ಟೆಂಬರ್ 22 ರಂದು ನಡೆಯಲಿದೆ. ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಮಧ್ಯೆ, ಇಬ್ಬರು ಆಟಗಾರರು ಪ್ಲೇಯಿಂಗ್-11ನಲ್ಲಿ ಸ್ಥಾನ ಪಡೆದಿಲ್ಲ. ಮೊದಲ 2 ಪಂದ್ಯಗಳಲ್ಲಿ ಕೆಎಲ್ ರಾಹುಲ್ ಟೀಂ ಇಂಡಿಯಾ ನಾಯಕತ್ವವನ್ನು ವಹಿಸಲಿದ್ದಾರೆ. 

ವಿಶ್ವಕಪ್‌ಗೂ ಮುನ್ನ ಅಭ್ಯಾಸ ಪಂದ್ಯ : 
ODI ವಿಶ್ವಕಪ್ ಅಕ್ಟೋಬರ್ 5 ರಿಂದ ಭಾರತದ ಆತಿಥ್ಯದಲ್ಲಿ ನಡೆಯಲಿದೆ. ಈ ಐಸಿಸಿ ಟೂರ್ನಮೆಂಟ್‌ಗೂ ಮುನ್ನ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪರಸ್ಪರ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿವೆ. ಈ ಸರಣಿಯನ್ನು ವಿಶ್ವಕಪ್‌ಗೂ ಮೊದಲ ಅಭ್ಯಾಸ ಪಂದ್ಯವಾಗಿ ನೋಡಲಾಗುತ್ತಿದೆ. ಇನ್ನೊಂದು ವಿಷಯ ಏನೆಂದರೆ, ಈ ಸರಣಿಯಲ್ಲಿ ಆಸ್ಟ್ರೇಲಿಯಾವನ್ನುಮಣಿಸಿದರೆ ಟೀಂ ಇಂಡಿಯಾ ICC  rankingನಲ್ಲಿ ನಂಬರ್-1 ಪಟ್ಟಕ್ಕೆ ಏರಲಿದೆ. 

ಇದನ್ನೂ ಓದಿ : Ind vs Aus 1st ODI: ವಿರಾಟ್ ಬದಲಿಗೆ 3ನೇ ಸ್ಥಾನದಲ್ಲಿ ಆಡಲಿದ್ದಾರೆ ಈ ವಿಧ್ವಂಸಕ ಬ್ಯಾಟ್ಸ್‌ಮನ್

ಇಬ್ಬರು ಆಟಗಾರರು  ತಂಡದಿಂದ ಔಟ್ : 
ಮೊಹಾಲಿಯಲ್ಲಿ ನಡೆಯಲಿರುವ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದಲ್ಲಿ ಇಬ್ಬರು ಬಲಿಷ್ಠ ಆಟಗಾರರು ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಮಿಚೆಲ್ ಸ್ಟಾರ್ಕ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಪ್ಲೇಯಿಂಗ್ 11 ನಿಂದ ಹೊರಗುಳಿದಿದ್ದಾರೆ. ಮ್ಯಾಕ್ಸ್‌ವೆಲ್‌ಗೆ ವಿಶ್ರಾಂತಿ ನೀಡಲಾಗುವುದು ಮತ್ತು ಮಿಚೆಲ್ ಸ್ಟಾರ್ಕ್ ಕೂಡ ಪ್ಲೇಯಿಂಗ್-11ನಲ್ಲಿ ಇರುವುದಿಲ್ಲ ಎನ್ನುವುದನ್ನು ಪ್ಯಾಟ್ ಕಮ್ಮಿನ್ಸ್ ಮೊಹಾಲಿ ODIಗೂ ಮುನ್ನ ದೃಢಪಡಿಸಿದ್ದಾರೆ. 

ಈ ಆರಂಭಿಕ ಆಟಗಾರನಿಗೆ ಸ್ಥಾನ : 
ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಈಗಾಗಲೇ ಪ್ರಕಟಿಸಲಾಗಿತ್ತು. 18 ಸದಸ್ಯರ ತಂಡದಲ್ಲಿ ಟ್ರಾವಿಸ್ ಹೆಡ್ ಗೆ ಸ್ಥಾನ ನೀಡಲಾಗಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದ ವೇಳೆ ಎಡಗೈ  ಮೂಳೆ ಮುರಿತದ ಕಾರಣದಿಂದ ಹೆಡ್ ಬದಲಿಗೆ ಓಪನರ್ ಮ್ಯಾಥ್ಯೂ ಶಾರ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 

ಇದನ್ನೂ ಓದಿ : ನಾಕ್‌-ಔಟ್‌ಗೆ ಎಂಟ್ರಿ : ಏಷಿಯನ್‌ ಗೇಮ್ಸ್‌ ವಾಲಿಬಾಲ್‌ನಲ್ಲಿ ದಕ್ಷಿಣ ಕೊರಿಯಾ ವಿರುದ್ಧ ಭಾರತ ಪುರುಷರ ತಂಡ ಗೆಲವು

ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ತಂಡ: 
ಮ್ಯಾಥ್ಯೂ ಶಾರ್ಟ್, ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್ , ತನ್ವೀರ್ ಸಂಘ, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಝಂಪಾ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News