IND Vs BAN T20 : ಹೈದರಾಬಾದ್‌ನ ಉಪ್ಪಲ್ ಮೈದಾನದಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಟಿ20 ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಮೂರನೇ ಓವರ್ ನಲ್ಲಿ ನಿರಾಸೆ ಮೂಡಿಸಿತು. ಆದರೆ, ಸಂಜು ಸ್ಯಾಮ್ಸನ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಫಾರ್ಮ್‌ಗೆ ಬಂದ ನಂತರ ಆಟದ ವೈಖರಿ ಬದಲಾಯಿತು.
ಹೌದು.. ಆ ಬಳಿಕ ಇಬ್ಬರೂ ಬ್ಯಾಟ್ಸ್ ಮನ್ ಗಳು ಬಾಂಗ್ಲಾದೇಶದ ಬೌಲರ್ ಗಳನ್ನು ಅಟ್ಟಾಡಿಸಿ ಹೊಡೆದರು. ಸ್ಕೋರ್ ಬೋರ್ಡ್ ಕೇವಲ 7.1 ಓವರ್‌ಗಳಲ್ಲಿ ರನ್ ಆಗಿತ್ತು. 7 ಓವರ್‌ಗಳಲ್ಲಿ 100 ರನ್ ಗಳಿಸಿದರು. ಈ ವೇಳೆ ನಾಯಕ ಸೂರ್ಯಕುಮಾರ್ ಯಾದವ್ 31 ರನ್ ಗಳಿಸಿ ಇತಿಹಾಸ ನಿರ್ಮಿಸಿದರು.
🚨 Milestone Alert 🚨
2⃣5⃣0⃣0⃣ runs and counting in T20I Cricket for Captain Suryakumar Yadav! 👏👏
Live - https://t.co/ldfcwtHGSC#TeamIndia | #INDvBAN | @IDFCFIRSTBank pic.twitter.com/iJZ9VhjvxS
— BCCI (@BCCI) October 12, 2024
ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 2500 ರನ್ ಗಡಿ ತಲುಪಿದ್ದಾರೆ. ಟ್ವೆಂಟಿ-20ಯಲ್ಲಿ ಅತಿವೇಗದ 2500 ರನ್ ಗಳಿಸಿದ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸೂರ್ಯ ಮುರಿದಿದ್ದಾರೆ. ಈ ಸಾಧನೆ ಮಾಡಿದ ಎರಡನೇ ಅತಿ ವೇಗದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅಲ್ಲದೆ, ವೇಗವಾಗಿ ಅತೀ ಹೆಚ್ಚು ಸ್ಕೋರ್ ಮಾಡಿದ ವಿಶ್ವದ ನಾಲ್ಕನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ.. ಸೂರ್ಯ ಕೇವಲ 71 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರೆ, ರೋಹಿತ್ 2500 ರನ್ ಪೂರ್ಣಗೊಳಿಸಲು 92 ಇನ್ನಿಂಗ್ಸ್ ತೆಗೆದುಕೊಂಡರು. ಬಾಬರ್ ಅಜಮ್ ಟಿ20ಯಲ್ಲಿ ವೇಗವಾಗಿ 2500 ರನ್ ಪೂರೈಸಿದ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ.
ಬಾಬರ್ 62 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಆ ಬಳಿಕ ಮೊಹಮ್ಮದ್ ರಿಜ್ವಾನ್ ದ್ವಿತೀಯ ಹಾಗೂ ವಿರಾಟ್ ಕೊಹ್ಲಿ ತೃತೀಯ ಸ್ಥಾನ ಪಡೆದರು. ರಿಜ್ವಾನ್ 65 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರೆ, ವಿರಾಟ್ 68 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಟಿ20ಯಲ್ಲಿ ವೇಗವಾಗಿ 2500 ರನ್ ಪೂರೈಸಿದ ಬ್ಯಾಟ್ಸ್‌ಮನ್
ಬಾಬರ್ ಆಜಮ್ - 62
ಮೊಹಮ್ಮದ್ ರಿಜ್ವಾನ್- 65
ವಿರಾಟ್ ಕೊಹ್ಲಿ- 68
ಸೂರ್ಯಕುಮಾರ್ ಯಾದವ್- 71
ಸೂರ್ಯಕುಮಾರ್ ಯಾದವ್ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಟೀಂ ಇಂಡಿಯಾ ಸ್ಕೋರ್ ಬೋರ್ಡ್ ನಲ್ಲಿ 11 ಓವರ್ ಗಳಲ್ಲಿ 166 ರನ್ ಗಳಿಸಿತು. 35 ಎಸೆತಗಳಲ್ಲಿ 75 ರನ್ ಗಳಿಸಿದ್ದ ಸೂರ್ಯ 15ನೇ ಓವರ್ ನಲ್ಲಿ ಪೆವಿಲಿಯನ್ ತಲುಪಿದರು. ಸೂರ್ಯ ತಮ್ಮ ಇನ್ನಿಂಗ್ಸ್‌ನಲ್ಲಿ 5 ಸಿಕ್ಸರ್ ಮತ್ತು 8 ಬೌಂಡರಿಗಳನ್ನು ಬಾರಿಸಿದರು. ಭಾರತ ಕೇವಲ 15 ಓವರ್‌ಗಳಲ್ಲಿ 200 ರನ್‌ಗಳ ಗಡಿ ದಾಟಿತು.
ಅಂದಹಾಗೆ ಈ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ ಒಟ್ಟು 297 ರನ್ ಕಲೆಹಾಕಿದ್ದು, ಇದು ಟಿ20 ಕ್ರಿಕೆಟ್ ಚರಿತ್ರೆಯಲ್ಲೇ ಅತ್ಯಧಿಕ ಸ್ಕೋರ್ ಆಗಿದೆ. ಇದಕ್ಕೂ ಮುನ್ನ ಅಫ್ಘಾನಿಸ್ತಾನ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು. ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 86 ರನ್‌ಗಳಿಂದ ಸೋಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.