IND vs ENG 4th Test: ಟೀಮ್ ಇಂಡಿಯಾದ ಪ್ರಚಂಡ ಕಮ್ ಬ್ಯಾಕ್, ಇಂಗ್ಲೆಂಡ್ ನ ಮೂರು ವಿಕೆಟ್ ಪತನ

IND vs ENG 4th Test: ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆ ನಾಲ್ಕನೇ ಟೆಸ್ಟ್ ನಡೆಯುತ್ತಿದೆ. ಮೊದಲ ದಿನದ ಆಟ ಮುಗಿದಿದೆ.

Written by - Yashaswini V | Last Updated : Sep 3, 2021, 07:01 AM IST
  • ಭಾರತ vs ಇಂಗ್ಲೆಂಡ್ 4 ನೇ ಟೆಸ್ಟ್
  • ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಮಾಡಿತು
  • ಸರಣಿಯು 1-1ರಲ್ಲಿ ಸಮನಾಗಿದೆ
IND vs ENG 4th Test: ಟೀಮ್ ಇಂಡಿಯಾದ ಪ್ರಚಂಡ ಕಮ್ ಬ್ಯಾಕ್, ಇಂಗ್ಲೆಂಡ್ ನ ಮೂರು ವಿಕೆಟ್ ಪತನ title=
IND vs ENG 4th test

ನವದೆಹಲಿ: ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಓವಲ್ ನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಲು ಬಂದ ಟೀಮ್ ಇಂಡಿಯಾ ಅತ್ಯಂತ ಕಳಪೆ ಆರಂಭವನ್ನು ಹೊಂದಿತ್ತು ಮತ್ತು ಆರಂಭಿಕ ಜೋಡಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ವಿರಾಟ್ ಕೊಹ್ಲಿ ಹೊರತುಪಡಿಸಿ, ಯಾವುದೇ ಬ್ಯಾಟ್ಸ್‌ಮನ್‌ ವಿಶೇಷವಾದದ್ದನ್ನು ಮಾಡಲು ಸಾಧ್ಯವಿಲ್ಲ. ಅರ್ಧಶತಕ ಗಳಿಸಿದ ನಂತರ ವಿರಾಟ್ ಪೆವಿಲಿಯನ್ ಗೆ ಮರಳಿದರು. ಅದರ ನಂತರ ಟೀಮ್ ಇಂಡಿಯಾದ ಆಟಗಾರರು ಕಾರ್ಡ್ ಗಳಂತೆ ಚದುರಿದರು ಮತ್ತು ಇಡೀ ತಂಡ ಕೇವಲ 190 ರನ್ ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ತಂಡಕ್ಕೂ ಕೂಡ ಉತ್ತಮವಾಗಿ ಆರಂಭಿಸಲು ಸಾಧ್ಯವಾಗಲಿಲ್ಲ ಮತ್ತು ಶೀಘ್ರದಲ್ಲೇ 2 ವಿಕೆಟ್ ಕಳೆದುಕೊಂಡಿತು. ಮೊದಲ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 53 ರನ್ ಗಳಿಸಿತು.

ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಸರಣಿಯು ಪ್ರಸ್ತುತ 1-1ರಲ್ಲಿ ಸಮನಾಗಿದೆ. ಈ ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ಡ್ರಾ ಆಗಿತ್ತು. ಅದರ ನಂತರ ಲಾರ್ಡ್ಸ್ ನಲ್ಲಿ ನಡೆದ ಎರಡನೇ ಟೆಸ್ಟ್ ನಲ್ಲಿ ಭಾರತ ಇಂಗ್ಲೆಂಡ್ (IND vs ENG) ಅನ್ನು ಸೋಲಿಸಿತು. ಆದಾಗ್ಯೂ, ಮೂರನೇ ಟೆಸ್ಟ್ ನಲ್ಲಿ, ಇಂಗ್ಲೆಂಡ್ ಮರಳಿ ಬಂದು ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿತು ಮತ್ತು ಸರಣಿಯು 1-1ರಲ್ಲಿ ಸಮಬಲಗೊಂಡಿತು. ಈಗ ಎರಡೂ ತಂಡಗಳು ನಾಲ್ಕನೇ ಟೆಸ್ಟ್ ನಲ್ಲಿ ಮುನ್ನಡೆ ಸಾಧಿಸಲು ಪ್ರಯತ್ನಿಸುತ್ತವೆ. 

ಎರಡೂ ತಂಡಗಳು :
ಭಾರತ: ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (Virat Kohli) (ಕ್ಯಾಪ್ಟನ್), ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ. 

ಇದನ್ನೂ ಓದಿ- IPL 15th Season Update: IPL ಹೊಸ ತಂಡಗಳಿಗಾಗಿ Tender ಜಾರಿ, BCCI ಷರತ್ತುಗಳೇನು? ಇಲ್ಲಿದೆ ವರದಿ

ಪೂರ್ಣ ಭಾರತ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಅಕ್ಷರ ಪಟೇಲ್, ವೃದ್ಧಿಮಾನ್ ಸಹಾ, ಉಮೇಶ್ ಯಾದವ್, ಹನುಮ ವಿಹಾರಿ, ಅಭಿಮನ್ಯು ಈಶ್ವರನ್, ಪ್ರಸಿದ್ಧ ಕೃಷ್ಣ

ಇಂಗ್ಲೆಂಡ್: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ಕ್ಯಾಪ್ಟನ್), ಜಾನಿ ಬೈರ್‌ಸ್ಟೊ, ಒಲ್ಲಿ ಪೋಪ್, ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಓಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್

ಇದನ್ನೂ ಓದಿ- Tokyo Paralympics: ಸುಮಿತ್ ಆಂಟಿಲ್ ಗೆ ಜಾವಲಿನ್ ನಲ್ಲಿ ಚಿನ್ನದ ಪದಕ

ಪೂರ್ಣ ಇಂಗ್ಲೆಂಡ್ ತಂಡ: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ಕ್ಯಾಪ್ಟನ್), ಜಾನಿ ಬೈರ್‌ಸ್ಟೊ, ಮೊಯೀನ್ ಅಲಿ, ಸ್ಯಾಮ್ ಕುರ್ರನ್, ಒಲ್ಲಿ ರಾಬಿನ್ಸನ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್, ಕ್ರೇಗ್ ಓವರ್‌ಟನ್, ಡೇನಿಯಲ್ ಲಾರೆನ್ಸ್, ಒಲ್ಲಿ ಪೋಪ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News