IND vs ENG: ಪಾದಾರ್ಪಣೆ ಟೆಸ್ಟ್ ಪಂದ್ಯದಲ್ಲಿಯೇ ಅಬ್ಬರಿಸಿದ ಕನ್ನಡಿಗ ದೇವದತ್ ಪಡಿಕಲ್

 ಕನ್ನಡಿಗ ದೇವದತ್ ಪಡಿಕ್ಕಲ್ ಅವರು ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಅರ್ಧಶತಕವನ್ನು ಸಿಡಿಸುವ ಮೂಲಕ ಇಂಗ್ಲೆಂಡ್ ವಿರುದ್ಧ ಟೆಸ್ಟ್‌ಗೆ ಪದಾರ್ಪಣೆ ಮಾಡಿದರು.

Written by - Manjunath N | Last Updated : Mar 8, 2024, 03:54 PM IST
  • ರಜತ್ ಪಾಟಿದಾರ್ ಬದಲಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ಪಡಿಕ್ಕಲ್ ತಮಗೆ ಸಿಕ್ಕಂತ ಅವಕಾಶವನ್ನು ಸದುಪಯೋಗಪಡಿಸಿಕೊಂಡರು.
  • ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಪಡಿಕ್ಕಲ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ.
  • ಕರ್ನಾಟಕದ ಎಡಗೈ ಬ್ಯಾಟ್ಸಮನ್ ನಾಲ್ಕು ಪಂದ್ಯಗಳಲ್ಲಿ 92.66 ಸರಾಸರಿಯಲ್ಲಿ 556 ರನ್ ಗಳಿಸಿದ್ದಾರೆ
IND vs ENG: ಪಾದಾರ್ಪಣೆ ಟೆಸ್ಟ್ ಪಂದ್ಯದಲ್ಲಿಯೇ ಅಬ್ಬರಿಸಿದ ಕನ್ನಡಿಗ ದೇವದತ್ ಪಡಿಕಲ್ title=

ಧರ್ಮಾಶಾಲಾ: ಕನ್ನಡಿಗ ದೇವದತ್ ಪಡಿಕ್ಕಲ್ ಅವರು ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಅರ್ಧಶತಕವನ್ನು ಸಿಡಿಸುವ ಮೂಲಕ ಇಂಗ್ಲೆಂಡ್ ವಿರುದ್ಧ ಟೆಸ್ಟ್‌ಗೆ ಪದಾರ್ಪಣೆ ಮಾಡಿದರು.

ಭಾರತ ತಂಡವು 2 ನೇ ದಿನದಂದು ಇಂಗ್ಲೆಂಡ್ ವಿರುದ್ಧ ತನ್ನ ಮುನ್ನಡೆಯನ್ನು ಮುಂದುವರೆಸಿತು.ಇದೇ ವೇಳೆ ದಿನದ 2 ರಂದು ಎರಡನೇ ಅವಧಿಯಲ್ಲಿ ಶತಕವೀರ ಶುಭಮನ್ ಗಿಲ್ ಔಟಾದ ನಂತರ ಕಣಕ್ಕೆ ಇಳಿದ ಪಡಿಕ್ಕಲ್ ಸರ್ಫರಾಜ್ ಖಾನ್ ಅವರೊಂದಿಗೆ 97 ರನ್ ಗಳ ಭರ್ಜರಿ ಜೊತೆಯಾಟವನ್ನು ಆಡಿದರು.ಪಡಿಕ್ಕಲ್ 86ನೇ ಓವರ್‌ನಲ್ಲಿ ಶೋಯೆಬ್ ಬಶೀರ್‌ ಎಸೆತವನ್ನು ಸಿಕ್ಸರ್‌ ಸಿಡಿಸುವ ಮೂಲಕ 50 ರನ್ ಗಳಿಸಿದರು. ಅದರಲ್ಲಿ ಅವರು 10 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿ ಅಂತಿಮವಾಗಿ ವೈಯಕ್ತಿಕ ಮೊತ್ತ 65 ರನ್ ಗಳಾಗಿದ್ದಾಗ ಶೋಯಬ್ ಬಷೀರ್ ಅವರ ವಿಕೆಟ್ ಒಪ್ಪಿಸುವ ಮೂಲಕ ಶತಕ ವಂಚಿತರಾದರು.ಇನ್ನೊಂದೆಡೆಗೆ ಇವರಿಗೆ ಸಾಥ್ ನೀಡಿದ ಸರ್ಫಾರಾಜ್ ಖಾನ್ ಕೇವಲ 60 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 56 ರನ್ ಗಳಿಸಿದರು.

ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ನಲ್ಲಿ ಗಾಯಗೊಂಡಿರುವ ರಜತ್ ಪಾಟಿದಾರ್ ಬದಲಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ಪಡಿಕ್ಕಲ್ ತಮಗೆ ಸಿಕ್ಕಂತ ಅವಕಾಶವನ್ನು ಸದುಪಯೋಗಪಡಿಸಿಕೊಂಡರು.ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಪಡಿಕ್ಕಲ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕರ್ನಾಟಕದ ಎಡಗೈ ಬ್ಯಾಟ್ಸಮನ್ ನಾಲ್ಕು ಪಂದ್ಯಗಳಲ್ಲಿ 92.66 ಸರಾಸರಿಯಲ್ಲಿ 556 ರನ್ ಗಳಿಸಿದ್ದು ಮತ್ತು ಅದರಲ್ಲಿ 3 ಶತಕಗಳೊಂದಿಗೆ 76.90 ಸ್ಟ್ರೈಕ್ ರೇಟ್‌ಗಳನ್ನು ಗಳಿಸಿದ್ದಾರೆ. ಈಗಾಗಲೇ ಟೀಮ್ ಇಂಡಿಯಾ ಸರಣಿಯನ್ನು 3-1 ರಿಂದ ವಶಪಡಿಸಿಕೊಂಡಿದ್ದು, ಸರಣಿಯನ್ನು 4-1 ಅಂತರದಲ್ಲಿ ಗೆಲ್ಲಲು ಎದುರು ನೋಡುತ್ತಿದೆ.

ಇತ್ತೀಚಿನ ವರದಿ ಬಂದಾಗ ಟೀಮ್ ಇಂಡಿಯಾ ಐದು ವಿಕೆಟ್ ನಷ್ಟಕ್ಕೆ 426 ರನ್ ಗಳಿಸಿದೆ.ಸದ್ಯ ಕ್ರೀಸ್ ನಲ್ಲಿ ರವೀಂದ್ರ ಜಡೇಜಾ ಹಾಗೂ ಧ್ರುವ ಜೆರುಲ್ ಆಡುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

Trending News