IND vs HK: ಹಾಂಗ್ ಕಾಂಗ್ ವಿರುದ್ಧ ಗೆದ್ದರೆ ದೊಡ್ಡ ದಾಖಲೆ ಬರೆಯಲಿದ್ದಾರೆ ರೋಹಿತ್ ಶರ್ಮಾ

India vs Hong Kong Asia Cup: ಪಾಕಿಸ್ತಾನ ವಿರುದ್ಧ ಜಯ ದಾಖಲಿಸಿದ ನಂತರ ಟೀಂ ಇಂಡಿಯಾದ ಕಣ್ಣು ಹಾಂಕಾಂಗ್ ವಿರುದ್ಧ ಜಯ ದಾಖಲಿಸುವತ್ತ ನೆಟ್ಟಿದೆ. ಹಾಂಕಾಂಗ್ ವಿರುದ್ಧ ಟೀಂ ಇಂಡಿಯಾ ಗೆದ್ದರೆ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿ ಹೊಸ ದಾಖಲೆ ಸೃಷ್ಟಿಯಾಗಲಿದೆ.

Written by - Yashaswini V | Last Updated : Aug 30, 2022, 12:09 PM IST
  • ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ 2018ರಲ್ಲಿ ಏಷ್ಯಾಕಪ್ ಟ್ರೋಫಿ ಗೆದ್ದಿತ್ತು.
  • ಆಗ ಭಾರತ ಸತತ ಐದು ಪಂದ್ಯಗಳನ್ನು ಗೆದ್ದಿತ್ತು.
  • ಅದೇ ಸಮಯದಲ್ಲಿ, ಈ ವರ್ಷ ಟೀಂ ಇಂಡಿಯಾ ಅತ್ಯಂತ ಬಲಿಷ್ಠ ಫಾರ್ಮ್‌ನಲ್ಲಿ ಓಡುತ್ತಿದೆ.
IND vs HK: ಹಾಂಗ್ ಕಾಂಗ್ ವಿರುದ್ಧ ಗೆದ್ದರೆ ದೊಡ್ಡ ದಾಖಲೆ ಬರೆಯಲಿದ್ದಾರೆ ರೋಹಿತ್ ಶರ್ಮಾ  title=
IND vs Hong kong

ಭಾರತ vs ಹಾಂಕಾಂಗ್ ಏಷ್ಯಾ ಕಪ್: 2022ರ ಏಷ್ಯಾ ಕಪ್ನ ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ ತಂಡ ಅಬ್ಬರದ ಜಯ ಸಾಧಿಸಿದೆ. ಇದೀಗ ಆಗಸ್ಟ್ 31 ರಂದು ಟೀಂ ಇಂಡಿಯಾ ಹಾಂಕಾಂಗ್ ವಿರುದ್ಧ ಸೆಣಸಲಿದೆ.  ಈ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸೂಪರ್-4 ಗೆ ಅರ್ಹತೆ ಪಡೆಯಲಿದೆ. ಭಾರತ ತಂಡ ಈ ಪಂದ್ಯವನ್ನು ಗೆದ್ದರೆ, ನಂತರ ರೋಹಿತ್ ಶರ್ಮಾ ನಾಯಕನಾಗಿ ದೊಡ್ಡ ದಾಖಲೆಯನ್ನು ನಿರ್ಮಿಸಲಿದ್ದಾರೆ. ಒಂದೊಮ್ಮೆ ರೋಹಿತ್ ಶರ್ಮಾ ಈ ದಾಖಲೆ ನಿರ್ಮಿಸಿದರೆ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಯವರನ್ನೂ ಹಿಂದಿಕ್ಕಲಿದ್ದಾರೆ. 

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ 2018ರಲ್ಲಿ ಏಷ್ಯಾಕಪ್ ಟ್ರೋಫಿ ಗೆದ್ದಿತ್ತು. ಆಗ ಭಾರತ ಸತತ ಐದು ಪಂದ್ಯಗಳನ್ನು ಗೆದ್ದಿತ್ತು. ಅದೇ ಸಮಯದಲ್ಲಿ, ಈ ವರ್ಷ ಟೀಂ ಇಂಡಿಯಾ ಅತ್ಯಂತ ಬಲಿಷ್ಠ ಫಾರ್ಮ್‌ನಲ್ಲಿ ಓಡುತ್ತಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಇದೀಗ ಹಾಂಕಾಂಗ್‌ನಂತಹ ದುರ್ಬಲ ತಂಡವನ್ನು ಭಾರತ ಎದುರಿಸಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಏಷ್ಯಾಕಪ್‌ನಲ್ಲಿ ಸತತ 7 ಪಂದ್ಯಗಳನ್ನು ಗೆದ್ದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಲಿದ್ದಾರೆ. 

ಇದನ್ನೂ ಓದಿ- IND vs PAK: ಪಾಕ್ ಮಣಿಸಿ ಟಿ-20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ಹಿಟ್ ಮ್ಯಾನ್

ಎಂ.ಎಸ್. ಧೋನಿ ಧೋನಿ ಹಲವು ಪಂದ್ಯಗಳನ್ನು ಗೆದ್ದಿದ್ದಾರೆ :
ಟೀಂ ಇಂಡಿಯಾದಲ್ಲಿ ಕೂಲ್ ಕ್ಯಾಪ್ಟನ್ ಎಂದೇ ಖ್ಯಾತಿ ಪಡೆದಿರುವ ಮಹೇಂದ್ರ ಸಿಂಗ್ ಧೋನಿ  ನಾಯಕತ್ವದಲ್ಲಿ ಟೀಂ ಇಂಡಿಯಾ ಏಷ್ಯಾಕಪ್‌ನಲ್ಲಿ ಸತತ 6 ಪಂದ್ಯಗಳನ್ನು ಗೆದ್ದಿದೆ. ಪಾಕ್ ನಾಯಕ ಮೊಯಿನ್ ಖಾನ್ ಕೂಡ 6 ಪಂದ್ಯಗಳನ್ನು ಗೆದ್ದಿದ್ದಾರೆ. ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ರೋಹಿತ್ ಶರ್ಮಾ ಈ ಇಬ್ಬರೂ ದಿಗ್ಗಜರನ್ನು ಹಿಂದಿಕ್ಕಲಿದ್ದಾರೆ. ಗಮನಾರ್ಹವಾಗಿ, ಧೋನಿ ನಾಯಕತ್ವದಲ್ಲಿ ಭಾರತ 2010 ಮತ್ತು 2016ರಲ್ಲಿ ಏಷ್ಯಾಕಪ್ ಪ್ರಶಸ್ತಿ ಗೆದ್ದಿತ್ತು. 

ಇದನ್ನೂ ಓದಿ- ವಿರಾಟ್ ಕೊಹ್ಲಿ ಭೇಟಿಯಾದ ಈ ವ್ಯಕ್ತಿ ಯಾರು ಗೊತ್ತೇ? ಪಾಕ್‌ ಸೋಲಿನ ಬಗ್ಗೆ ನಡೆಯಿತು ಚರ್ಚೆ

ಭಾರತ ತಂಡ ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿ ಸಾಗುತ್ತಿದೆ. ಪಾಕಿಸ್ತಾನ ತಂಡವನ್ನು ಸೋಲಿಸಿದ ನಂತರ ಭಾರತದ ಮನೋಬಲ ತುಂಬಾ ಹೆಚ್ಚಾಗಿದೆ. ಭಾರತ ಗರಿಷ್ಠ ಬಾರಿ ಏಷ್ಯಾಕಪ್ ಪ್ರಶಸ್ತಿ ಗೆದ್ದಿದೆ. ಅದೇ ಸಮಯದಲ್ಲಿ ಶ್ರೀಲಂಕಾ ಐದು ಬಾರಿ ಏಷ್ಯಾಕಪ್ ಗೆದ್ದಿದೆ. ಪಾಕಿಸ್ತಾನ ಕೇವಲ 2 ಬಾರಿ ಏಷ್ಯಾಕಪ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಬಾರಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಏಷ್ಯಾಕಪ್ ಗೆಲ್ಲಲು ಪ್ರಬಲ ಪೈಪೋಟಿ ನೀಡುತ್ತಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News