Team India : ಟೀಂ ಇಂಡಿಯಾದ ಈ ಆಟಗಾರನಿಗೆ ನ್ಯೂಜಿಲೆಂಡ್ ಸರಣಿಯೇ ಕೊನೆ!?

ಕೆಲವು ಹಿರಿಯ ಆಟಗಾರರು ಟಿ20 ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ತಮ್ಮ ಅತ್ಯುತ್ತಮ ಪ್ರಯತ್ನವನ್ನು ಮಾಡಲೇಬೇಕಾಗಿದೆ. ಆದರೆ, ಟೀಂ ಇಂಡಿಯಾದ ಈ ಆಟಗಾರನಿಗೆ, ಈ ಸರಣಿಯು ಟಿ20 ವೃತ್ತಿಜೀವನದ ಕೊನೆಯ ಸರಣಿ ಎಂದು ಹೇಳಲಾಗುತ್ತಿದೆ. ಹಾಗಿದ್ರೆ ಈ  ಆಟಗಾರ ಯಾರು?

Written by - Channabasava A Kashinakunti | Last Updated : Nov 19, 2022, 05:38 PM IST
  • ನ್ಯೂಜಿಲೆಂಡ್ ಸರಣಿಯಲ್ಲಿ ಈ ಆಟಗಾರನ ಮೇಲೆ ಎಲ್ಲರ ಕಣ್ಣು
  • ವಿಕೆಟ್ ಪಡೆಯುವಲ್ಲಿ ವಿಫಲರಾದ ಭುವನೇಶ್ವರ್
  • ಭುವನೇಶ್ವರ್ ಕುಮಾರ್ ಕಳಪೆ ಪ್ರದರ್ಶನ
Team India : ಟೀಂ ಇಂಡಿಯಾದ ಈ ಆಟಗಾರನಿಗೆ ನ್ಯೂಜಿಲೆಂಡ್ ಸರಣಿಯೇ ಕೊನೆ!? title=

IND vs NZ 2nd T20 Match : ನ್ಯೂಜಿಲೆಂಡ್ ವಿರುದ್ಧ ಆಡುತ್ತಿರುವ 3 ಪಂದ್ಯಗಳ ಟಿ20 ಸರಣಿಯು ಟೀಂ ಇಂಡಿಯಾದ ಅನೇಕ ಆಟಗಾರರಿಗೆ ಬಹಳ ಮುಖ್ಯವಾಗಿದೆ. ಯುವ ಆಟಗಾರರು ಈ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಅವಕಾಶವನ್ನು ಪಡೆದಿದ್ದರೆ, ಆದರೆ ಕೆಲವು ಹಿರಿಯ ಆಟಗಾರರು ಟಿ20 ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ತಮ್ಮ ಅತ್ಯುತ್ತಮ ಪ್ರಯತ್ನವನ್ನು ಮಾಡಲೇಬೇಕಾಗಿದೆ. ಆದರೆ, ಟೀಂ ಇಂಡಿಯಾದ ಈ ಆಟಗಾರನಿಗೆ, ಈ ಸರಣಿಯು ಟಿ20 ವೃತ್ತಿಜೀವನದ ಕೊನೆಯ ಸರಣಿ ಎಂದು ಹೇಳಲಾಗುತ್ತಿದೆ. ಹಾಗಿದ್ರೆ ಈ  ಆಟಗಾರ ಯಾರು? ಇಲ್ಲಿದೆ ಡಿಟೈಲ್ಸ್...

ನ್ಯೂಜಿಲೆಂಡ್ ಸರಣಿಯಲ್ಲಿ ಈ ಆಟಗಾರನ ಮೇಲೆ ಎಲ್ಲರ ಕಣ್ಣು

ಟಿ20 ವಿಶ್ವಕಪ್ 2022 ರಿಂದ, ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಗಳಿಗೆ ತುಂಬಾ ಟೀಕೆಗಳು ಕೇಳಿ ಬಂದಿವೆ. ಮುಂದಿನ ದಿನಗಳಲ್ಲಿ ಟಿ20 ತಂಡದಲ್ಲಿ ಹಿರಿಯ ಆಟಗಾರರ ಬದಲು ಯುವಕರಿಗೆ ಹೆಚ್ಚಿನ ಅವಕಾಶ ಸಿಗಬಹುದು, ಇಂತಹ ಸಂದರ್ಭದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಭುವನೇಶ್ವರ್ ಕುಮಾರ್‌ಗೆ ಈ ಸರಣಿ ಮಹತ್ವದ್ದಾಗಿದೆ. 2022 ರ ಟಿ20 ವಿಶ್ವಕಪ್‌ನಲ್ಲಿ ಭುವನೇಶ್ವರ್ ಕುಮಾರ್ ತಮ್ಮ ಛಾಪು ಬಿಡಲು ಸಾಧ್ಯವಾಗಲಿಲ್ಲ. ಹೀಗಾಗಿ ಭುವನೇಶ್ವರ್ ಫಾರ್ಮ್ ಗೆ ಬರಬೇಕಾದರೆ ನ್ಯೂಜಿಲೆಂಡ್ ಸರಣಿಯಲ್ಲಿ ಅತ್ತುತ್ಯಮ ಪ್ರದರ್ಶನ ನೀಡಲೇಬೇಕಾಗಿದೆ.

ಇದನ್ನೂ ಓದಿ : IND vs NZ : ಈ ಆಟಗಾರನನ್ನು ಟಿ20 ಪಂದ್ಯದಲ್ಲಿ ಓಪನರ್ ಮಾಡಿ : ದಿನೇಶ್ ಕಾರ್ತಿಕ್ ಬೇಡಿಕೆ

ವಿಕೆಟ್ ಪಡೆಯುವಲ್ಲಿ ವಿಫಲರಾದ ಭುವನೇಶ್ವರ್

ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಈ ಸರಣಿಯಲ್ಲಿ ಆಡುತ್ತಿದ್ದಾರೆ. ಭುವನೇಶ್ವರ್ ಕುಮಾರ್ ಆರಂಭಿಕ ಓವರ್‌ಗಳಲ್ಲಿ ವಿಕೆಟ್‌ಗಳನ್ನು ಪಡೆಯುವಲ್ಲಿ ಹೆಸರುವಾಸಿಯಾಗಿದ್ದಾರೆ, ಆದರೆ 2022 ರ ಟಿ20 ವಿಶ್ವಕಪ್‌ನಲ್ಲಿ ಅವರು ಹಾಗೆ ಮಾಡುವಲ್ಲಿ ವಿಫಲರಾಗಿದ್ದಾರೆ. ಈ ಟೂರ್ನಿಯಲ್ಲಿ ಭುವನೇಶ್ವರ್ ಕುಮಾರ್ 6 ಪಂದ್ಯಗಳಲ್ಲಿ ಕೇವಲ 4 ವಿಕೆಟ್ ಪಡೆದಿದ್ದಾರೆ. ಭುವನೇಶ್ವರ್ ಕುಮಾರ್ ಅವರ ಈ ಕಳಪೆ ಪ್ರದರ್ಶನವು ಈ ಸರಣಿಯಲ್ಲೂ ಮುಂದುವರೆದರೆ ತಂಡಕ್ಕೆ ಭಾರಿ ನಷ್ಟವಾಗಲಿದೆ.

ಭುವನೇಶ್ವರ್ ಕುಮಾರ್ ಕಳಪೆ ಪ್ರದರ್ಶನ

ಭುವನೇಶ್ವರ್ ಕುಮಾರ್ ಗೆ ಪ್ರಸ್ತುತ 32 ವರ್ಷ, ಟಿ20 ವಿಶ್ವಕಪ್ 2024 ಅನ್ನು ಗಮನದಲ್ಲಿಟ್ಟುಕೊಂಡು ಹೊಸ ಟಿ20 ತಂಡವನ್ನು ರಚಿಸಲು ಭಾರತೀಯ ಆಯ್ಕೆದಾರರು ಈಗ ಒತ್ತಾಯಿಸಿದ್ದಾರೆ. ಭುವನೇಶ್ವರ್ ಕುಮಾರ್ ಈ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕಾದರೆ, ಅವರು ಯಾವುದೇ ಸಂದರ್ಭದಲ್ಲಿ ಮ್ಯಾಚ್ ವಿನ್ನಿಂಗ್ ನಿರ್ವಹಿಸಬೇಕಾಗುತ್ತದೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ

ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಸಿಂಗ್ ಯಾದವ್, ಹರ್ಷದೀಪ್ ಸಿಂಗ್ ಯಾದವ್, ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ಇದನ್ನೂ ಓದಿ : ನ್ಯೂಜಿಲೆಂಡ್ ವಿರುದ್ಧ ವಿರಾಟ್ ಬದಲಿಗೆ ಬೌಲರ್‌ಗೆ ಚಾನ್ಸ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News