ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯ ಇಂದಿನಿಂದ ನಡೆಯಲಿದ್ದು, ಉಭಯ ತಂಡಗಳು ಭರ್ಜರಿ ಕಸರತ್ತು ನಡೆಸಿವೆ. ಸದ್ಯ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ.
ಇದನ್ನೂ ಓದಿ: ದೇವರನಾಡಲ್ಲಿ ಟೀಂ ಇಂಡಿಯಾ ಶಕ್ತಿ ಪ್ರದರ್ಶನ: ಹೇಗಿದೆ ಇಲ್ಲಿನ ಪಿಚ್! ಯಾವ ತಂಡಕ್ಕೆ ನೀಡಲಿದೆ ಬಲ?
ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಹಣಾಹಣಿಯು ಕೇರಳದ ತಿರುವಂತಪುರಂನ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯ ಟೀಂ ಇಂಡಿಯಾಗೆ ಬಹಳ ಮಹತ್ವದ್ದಾಗಿದೆ. ಏಕೆಂದರೆ ಇದುವರೆಗೆ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ತವರು ನೆಲದಲ್ಲಿ ಗೆದ್ದಿಲ್ಲ. ಹೀಗಾಗಿ ಭರ್ಜರಿ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸುವ ತವಕದಲ್ಲಿ ರೋಹಿತ್ ಪಡೆ ಕಣಕ್ಕಿಳಿದಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡದ ಸಂಭಾವ್ಯ ಆಟಗಾರರ ಪಟ್ಟಿ ಹೀಗಿದೆ
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿ.ಕೀ), ಆರ್ ಅಶ್ವಿನ್, ಅಕ್ಷರ್ ಪಟೇಲ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಉಮೇಶ್ ಯಾದವ್, ಹರ್ಷಲ್ ಪಟೇಲ್ , ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.
ಇದನ್ನೂ ಓದಿ: Dinesh Karthik: ಯುವತಿ ಜಸ್ಟ್ ಟಚ್ ಮಾಡಿದಕ್ಕೆ ಉರಿದು ಕೆಂಡವಾದ್ರು ದಿನೇಶ್ ಕಾರ್ತಿಕ್: ಮುಂದೇನಾಯ್ತು!
ದಕ್ಷಿಣ ಆಫ್ರಿಕಾ: ಟೆಂಬಾ ಬವುಮ (ನಾಯಕ), ಕ್ವಿಂಟನ್ ಡಿ ಕಾಕ್, ರೆಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಏಡನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಎನ್ರಿಕ್ ನಾರ್ಸಿಯಾ, ವೇಯ್ನ್ ಪಾರ್ನೆಲ್, ಡ್ವೇನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲೆ ಸ್ಹಮ್ಸ್ಸಿ, ಟ್ರಿಸ್ಟನ್ ರೊಸ್ಸೊ ಫಾರ್ಚೂನ್, ಮಾರ್ಕೊ ಯೆನ್ಸನ್, ಎ ಫೆಲುಕ್ವಾಯೊ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.