IND vs AUS: ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಮೈದಾನದಲ್ಲಿ ಬದಲಾವಣೆ! ಹೊರಬಿತ್ತು ಬಿಗ್ ಅಪ್ಡೇಟ್

India vs Australia Test Series: ಉಭಯ ತಂಡಗಳ ನಡುವಿನ ಸರಣಿಯ ಎರಡನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಜನವರಿ 17 ರಿಂದ ನಡೆಯಲಿದೆ. ಮತ್ತೊಂದೆಡೆ, ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಮಾರ್ಚ್ 1 ರಿಂದ 5 ರವರೆಗೆ ಧರ್ಮಶಾಲಾದ HPCA (ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ) ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾಧ್ಯಮ ವರದಿಗಳ ಪ್ರಕಾರ, ಈ ಪಂದ್ಯದ ಸ್ಥಳವನ್ನು ಬದಲಾಯಿಸಬಹುದು.

Written by - Bhavishya Shetty | Last Updated : Feb 11, 2023, 07:35 AM IST
    • ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಾಗ್ಪುರದ ವಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿದೆ
    • ಇದೆಲ್ಲದರ ನಡುವೆ ಈ ಸರಣಿಗೆ ಸಂಬಂಧಿಸಿದ ದೊಡ್ಡ ಸುದ್ದಿಯೊಂದು ಹೊರಬೀಳುತ್ತಿದೆ.
    • ಸರಣಿಯ ಮೂರನೇ ಟೆಸ್ಟ್ ಪಂದ್ಯದ ಸ್ಥಳದಲ್ಲಿ ಬದಲಾವಣೆಯಾಗಬಹುದು.
IND vs AUS: ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಮೈದಾನದಲ್ಲಿ ಬದಲಾವಣೆ! ಹೊರಬಿತ್ತು ಬಿಗ್ ಅಪ್ಡೇಟ್  title=
India vs Australia

India vs Australia Test Series: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ (ವಿಸಿಎ ಸ್ಟೇಡಿಯಂ) ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಹಿಡಿತ ಜೋರಾಗಿದೆ. ಇದೆಲ್ಲದರ ನಡುವೆ ಈ ಸರಣಿಗೆ ಸಂಬಂಧಿಸಿದ ದೊಡ್ಡ ಸುದ್ದಿಯೊಂದು ಹೊರಬೀಳುತ್ತಿದೆ. ಮಾಧ್ಯಮ ವರದಿಗಳ ಪ್ರಕಾರ, ಸರಣಿಯ ಮೂರನೇ ಟೆಸ್ಟ್ ಪಂದ್ಯದ ಸ್ಥಳದಲ್ಲಿ ಬದಲಾವಣೆಯಾಗಬಹುದು.

ಇದನ್ನೂ ಓದಿ: Virat, Rahul, Poojara ವಿಕೆಟ್ ಕಬಳಿಸಿದ್ದು 22ರ ಹರೆಯದ ಈ ಆಟಗಾರ!

ಉಭಯ ತಂಡಗಳ ನಡುವಿನ ಸರಣಿಯ ಎರಡನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಜನವರಿ 17 ರಿಂದ ನಡೆಯಲಿದೆ. ಮತ್ತೊಂದೆಡೆ, ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಮಾರ್ಚ್ 1 ರಿಂದ 5 ರವರೆಗೆ ಧರ್ಮಶಾಲಾದ HPCA (ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ) ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾಧ್ಯಮ ವರದಿಗಳ ಪ್ರಕಾರ, ಈ ಪಂದ್ಯದ ಸ್ಥಳವನ್ನು ಬದಲಾಯಿಸಬಹುದು. ಈ ಮೈದಾನದಲ್ಲಿ 2017ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಕೊನೆಯ ಟೆಸ್ಟ್ ಪಂದ್ಯ ನಡೆದಿತ್ತು.

ಇತ್ತೀಚೆಗಷ್ಟೇ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ದುರಸ್ತಿ ಕಾರ್ಯ ನಡೆದಿದ್ದು, ಆ ಬಳಿಕ ಈ ಕ್ರೀಡಾಂಗಣ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಆತಿಥ್ಯ ವಹಿಸಲು ಸಾಧ್ಯವಾಗಿರಲಿಲ್ಲ. ಇಎಸ್‌ಪಿಎನ್‌ಕ್ರಿಕ್‌ಇನ್ಫೋ ವರದಿಯ ಪ್ರಕಾರ, ಬಿಸಿಸಿಐ ಮಂಡಳಿಯ ತಜ್ಞರ ತಂಡ ಮೈದಾನದ ಪರಿಶೀಲನೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕೆಲವು ದಿನಗಳಲ್ಲಿ ಬಿಸಿಸಿಐ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಬಿಸಿಸಿಐ ಈಗಾಗಲೇ ಬ್ಯಾಕ್‌ಅಪ್ ಸ್ಥಳವನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎಂದು ತಿಳಿದು ಬಂದಿದೆ,

ಇದನ್ನೂ ಓದಿ: ಯಾವುದೇ ನಿಲ್ದಾಣ ಬಂದರೂ ಸಹ ರೈಲಿನ ಇಂಜಿನ್ ಬಂದ್ ಆಗುವುದಿಲ್ಲ ಯಾಕೆ ಗೊತ್ತಾ?

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹಿಡಿತ ಬಲವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಿ 177 ರನ್ ಗಳಿಸಿತ್ತು

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News