ಭಾರತದ ವೇಗಿ ಜಸ್ಪ್ರೀತ್ ಬುಮ್ರಾಗೆ ಕಂಕಣ ಭಾಗ್ಯ...!

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುಂಚಿತವಾಗಿ ವೈಯಕ್ತಿಕ ಕಾರಣಗಳಿಂದಾಗಿ ರಜೆಗೆ ತೆರಳಿದ್ದ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಈಗ ಸಂಜನಾ ಗಣೇಶನ್ ಎನ್ನುವವರನ್ನು ಮದುವೆಯಾಗಿದ್ದಾರೆ.

Last Updated : Mar 15, 2021, 04:15 PM IST
ಭಾರತದ ವೇಗಿ ಜಸ್ಪ್ರೀತ್ ಬುಮ್ರಾಗೆ ಕಂಕಣ ಭಾಗ್ಯ...! title=
Photo Courtesy: Twitter

ನವದೆಹಲಿ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುಂಚಿತವಾಗಿ ವೈಯಕ್ತಿಕ ಕಾರಣಗಳಿಂದಾಗಿ ರಜೆಗೆ ತೆರಳಿದ್ದ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಈಗ ಸಂಜನಾ ಗಣೇಶನ್ ಎನ್ನುವವರನ್ನು ಮದುವೆಯಾಗಿದ್ದಾರೆ.

ಕುಟುಂಬದ ಸದಸ್ಯರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಗೋವಾದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಜಸ್ಪ್ರೀತ್ ಬುಮ್ರಾ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

27 ವರ್ಷದ ಬುಮ್ರಾ (Jasprit Bumrah) ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕು ಪಂದ್ಯಗಳ ಸರಣಿಯಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿ ನಾಲ್ಕು ವಿಕೆಟ್‌ ಗಳನ್ನು ಪಡೆದಿದ್ದಾರೆ.ಚೆನ್ನೈನಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಅವರಿಗೆ ವಿಶ್ರಾಂತಿ ನೀಡಲಾಯಿತು ಮತ್ತು ಮೂರನೇ ಟೆಸ್ಟ್ ನಲ್ಲಿ ಅವರಿಗೆ ಯಾವುದೇ ವಿಕೆಟ್ ಲಭಿಸಲಿಲ್ಲ, ಈ ಪಂದ್ಯಗಳಲ್ಲಿ ಸ್ಪಿನರ್ ಗಳು ಮಹತ್ವದ ಪಾತ್ರವನ್ನು ವಹಿಸಿದರು.

ಇದನ್ನೂ ಓದಿ: IND vs ENG: ಭಾರತದ ಟೆಸ್ಟ್ ಕ್ರಿಕೆಟ್ ತಂಡದಿಂದ ಬುಮ್ರಾ ಹೊರಕ್ಕೆ

ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವುದರೊಂದಿಗೆ ಈಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News