India vs Australia, 1st ODI: ಗಾಯಕ್ವಾಡ್, ಗಿಲ್ ಅಬ್ಬರಕ್ಕೆ ತತ್ತರಿಸಿದ ಕಾಂಗರೂ ಪಡೆ 

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Written by - Manjunath N | Last Updated : Sep 22, 2023, 11:05 PM IST
  • ಆಸ್ಟ್ರೇಲಿಯಾ ತಂಡವು ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 50 ಓವರ್ ಗಳಲ್ಲಿ 276 ರನ್ ಗಳನ್ನು ಗಳಿಸಿತು.
  • ಗಾಯಕ್ವಾಡ್ ಹಾಗೂ ಶುಭಮನ್ ಗಿಲ್ ಕ್ರಮವಾಗಿ 71, ಹಾಗೂ 74 ರನ್ ಗಳಿಸುವ ಮೂಲಕ ಮೊದಲ ವಿಕೆಟ್ ಗೆ 142 ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭದ್ರ ಬುನಾದಿಯನ್ನು ಹಾಕಿದರು
India vs Australia, 1st ODI: ಗಾಯಕ್ವಾಡ್, ಗಿಲ್ ಅಬ್ಬರಕ್ಕೆ ತತ್ತರಿಸಿದ ಕಾಂಗರೂ ಪಡೆ  title=

ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು  ಟೀಮ್ ಇಂಡಿಯಾ  ಫೀಲ್ಡಿಂಗ್ ಆಯ್ದುಕೊಂಡಿತು, ಇನ್ನೊಂದೆಡೆಗೆ ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ಪಡೆಪರವಾಗಿ ವಾರ್ನರ್  ಹಾಗೂ ಜೊಸ್ ಇಂಗ್ಲಿಸ್ ಕ್ರಮವಾಗಿ 50, ಹಾಗೂ 45 ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ನೆರವಾದರು.ಅಂತಿಮವಾಗಿ ಆಸ್ಟ್ರೇಲಿಯಾ ತಂಡವು ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 5೦ ಓವರ್ ಗಳಲ್ಲಿ 276 ರನ್ ಗಳನ್ನು ಗಳಿಸಿತು.

ಇದನ್ನೂ ಓದಿ: ಆದಿತ್ಯ ಎಲ್-1 ಯಶಸ್ವಿ ಉಡಾವಣೆ: ಬಾಹ್ಯಾಕಾಶದಲ್ಲಿ ಇಸ್ರೋ ಮತ್ತೊಂದು ಮೈಲಿಗಲ್ಲು!

ಟೀಮ್ ಇಂಡಿಯಾದ ಪರವಾಗಿ ಮೊಹಮ್ಮದ್ ಶಮಿ ಐದು ವಿಕೆಟ್ ಗಳನ್ನು ಕಬಳಿಸುವ ಮೂಲಕ ಆಸೀಸ್ ಪಡೆಯ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

277 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಋತುರಾಜ್ ಗಾಯಕ್ವಾಡ್ ಹಾಗೂ ಶುಭಮನ್ ಗಿಲ್ ಕ್ರಮವಾಗಿ 71, ಹಾಗೂ 74 ರನ್ ಗಳಿಸುವ ಮೂಲಕ ಮೊದಲ ವಿಕೆಟ್ ಗೆ 142 ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭದ್ರ ಬುನಾದಿಯನ್ನು ಹಾಕಿದರು, ಇನ್ನೂ ಮಧ್ಯಮ ಕ್ರಮಾಂಕದಲ್ಲಿ ಕೆ.ಎಲ್ ರಾಹುಲ್ 58 ಹಾಗೂ ಸೂರ್ಯಕುಮಾರ್ ಯಾದವ್ 50 ರನ್ ಗಳಿಸುವ ಮೂಲಕ ತಂಡವನ್ನು 48.4 ಓವರ್ ಗಳಲ್ಲಿ 281 ರನ್ ಗಳಿಸುವ ಮೂಲಕ ಗೆಲುವಿನ ದಡಕ್ಕೆ ಸೇರಿಸಿದರು.

ಇದನ್ನೂ ಓದಿ: ಆರಂಭದಲ್ಲಿ ಜೈಲರ್ ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದರಂತೆ ಸೂಪರ್ ಸ್ಟಾರ್.. ಕಾರಣ ಏನು ಗೊತ್ತಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News