India vs Australia 3rd T20I: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ: ಕೊಹ್ಲಿ, ಯಾದವ್ ಅಬ್ಬರಕ್ಕೆ ಆಸೀಸ್ ತತ್ತರ

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ, ಆಸ್ಟ್ರೇಲಿಯಾಗೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿತು. ಈ ಸಂದರ್ಭದಲ್ಲಿ ಬ್ಯಾಟಿಂಗ್ ಮಾಡಿದ ಆಸಿಸ್ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು.

Written by - Bhavishya Shetty | Last Updated : Sep 25, 2022, 10:35 PM IST
    • ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದ ರೋಹಿತ್ ಆಂಡ್ ಟೀಂ
    • ಸರಣಿ ಕೈವಶ ಮಾಡಿಕೊಳ್ಳಲು ಭರ್ಜರಿ ಸಿದ್ಧತೆ ನಡೆಸಿದ್ದ ಟೀಂ ಇಂಡಿಯಾ
    • ಉಭಯ ತಂಡಗಳ ರಣರೋಚಕ ಪಂದ್ಯದಲ್ಲಿ ಭಾರತಕ್ಕೆ ಗೆಲುವು
India vs Australia 3rd T20I: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ: ಕೊಹ್ಲಿ, ಯಾದವ್ ಅಬ್ಬರಕ್ಕೆ ಆಸೀಸ್ ತತ್ತರ title=
India Australia

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮೂರನೇ ಮತ್ತು ಅಂತಿಮ ಸರಣಿಯನ್ನು ಗೆದ್ದು ಬೀಗಿದೆ. ಈ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ಉಭಯ ತಂಡಗಳೂ ಸಹ ಭರ್ಜರಿ ಆಟ ಪ್ರದರ್ಶನ ಮಾಡಿದೆ.  

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ, ಆಸ್ಟ್ರೇಲಿಯಾಗೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿತು. ಈ ಸಂದರ್ಭದಲ್ಲಿ ಬ್ಯಾಟಿಂಗ್ ಮಾಡಿದ ಆಸಿಸ್ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ ಭಾರತ 19.5 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿ ಭರ್ಜರಿ ಜಯ ಸಾಧಿಸಿತು.

ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (63), ಸೂರ್ಯ ಕುಮಾರ್(69) ಯಾದವ್ ಭರ್ಜರಿಯಾಗಿ ಆಟವಾಡಿದ್ದಾರೆ.

ಇದನ್ನೂ ಓದಿ: T20 World Cup: ಈ ತಂಡ ಟಿ-20 ವಿಶ್ವಕಪ್ ಚಾಂಪಿಯನ್ ಆಗಲಿದೆ ಎಂದು ಕ್ರಿಕೆಟ್ ದಿಗ್ಗಜನ ಭವಿಷ್ಯ?

ಮೂರನೇ ಟಿ20 ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದಿದೆ. 3 ನೇ ಟಿ20 ಪಂದ್ಯ ಸಖತ್ ಥ್ರಿಲ್ಲಿಂಗ್ ಆಗಿತ್ತು ಎಂದೆನ್ನಬಹುದು. ಇನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಕೈವಶ ಮಾಡಿಕೊಳ್ಳಲು ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸಿತ್ತು. ಅಷ್ಟೇ ಅಲ್ಲದೆ ಜಸ್ಪ್ರೀತ್ ಬುಮ್ರಾ ಸಹ ತಂಡಕ್ಕೆ ಮರಳಿದ್ದು, ನಿರೀಕ್ಷೆಗಳ ಮಟ್ಟ ಹೆಚ್ಚಾಗಿತ್ತು. ಸದ್ಯ ಟೀಂ ಇಂಡಿಯಾ ಜಯ ಸಾಧಿಸಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ.

ಇದನ್ನೂ ಓದಿ: IND-W vs ENG-W 3rd ODI: ಜೂಲನ್ ಗೋಸ್ವಾಮಿಗೆ ಪರಿಪೂರ್ಣ ವಿದಾಯ: ಇಂಗ್ಲೆಂಡ್ ವಿರುದ್ಧ ಗೆದ್ದ ಟೀಂ ಇಂಡಿಯಾ

ಮುಂಬರುವ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಆಡಲಿದ್ದು, ಸರಣಿ ಗೆಲ್ಲುವ ತವಕದಲ್ಲಿದೆ.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News