India vs Bangladesh: ಟೀಮ್ ಇಂಡಿಯಾದ ಮಾರಕ ಬೌಲಿಂಗ್ ದಾಳಿಗೆ ಬೆಚ್ಚಿದ ಬಾಂಗ್ಲಾ

ಬಾಂಗ್ಲಾ ತಂಡವು ನೀಡಿದ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 11.5 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 132 ರನ್ ಗಳನ್ನು ಗಳಿಸುವ ಮೂಲಕ ವಿಜಯದ ನಗೆ ಬಿರಿತು.

Written by - Manjunath N | Last Updated : Oct 7, 2024, 03:51 AM IST
  • 11.5 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 132 ರನ್ ಗಳನ್ನು ಗಳಿಸುವ ಮೂಲಕ ವಿಜಯದ ನಗೆ ಬಿರಿತು.
  • ಸಂಜು ಸ್ಯಾಮ್ಸನ್ ಹಾಗೂ ಸೂರ್ಯಕುಮಾರ್ ಯಾದವ್ ತಲಾ 29 ರನ್ ಗಳಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾದರು.
India vs Bangladesh: ಟೀಮ್ ಇಂಡಿಯಾದ ಮಾರಕ ಬೌಲಿಂಗ್ ದಾಳಿಗೆ ಬೆಚ್ಚಿದ ಬಾಂಗ್ಲಾ  title=

ಗ್ವಾಲಿಯರ್: ಇಲ್ಲಿನ ನ್ಯೂ ಮಾಧವರಾವ್ ಸಿಂಧಿಯಾ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶದ ತಂಡದ ವಿರುದ್ಧ  ನಡೆದ ಮೊದಲ ಟಿ 20  ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ ತಂಡವು ತನ್ನ ಕರಾರುವಕ್ಕಾದ ಬೌಲಿಂಗ್ ದಾಳಿಯಿಂದ 19.5 ಓವರ್ ಗಳಲ್ಲಿ 127 ರನ್ ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಯಿತು.ಟೀಮ್ ಇಂಡಿಯಾದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ವರುಣ್ ಚಕ್ರವರ್ತಿ ಹಾಗೂ ಆರ್ಶ್ದೀಪ್ ಸಿಂಗ್ ತಲಾ ಮೂರು ವಿಕೆಟ್ ಗಳನ್ನು ಕಬಳಿಸುವ ಮೂಲಕ ತಂಡಕ್ಕೆ ನೆರವಾದರು.ಬಾಂಗ್ಲಾ ತಂಡದ ಪರವಾಗಿ ಮಿರಜ್ 35 ರನ್ ಗಳಿಸಿದ್ದೆ ಅಧಿಕ ಮೊತ್ತವಾಗಿತ್ತು.

ಬಾಂಗ್ಲಾ ತಂಡವು ನೀಡಿದ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 11.5 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 132 ರನ್ ಗಳನ್ನು ಗಳಿಸುವ ಮೂಲಕ ವಿಜಯದ ನಗೆ ಬಿರಿತು.ಟೀಮ್ ಇಂಡಿಯಾದ ಪರವಾಗಿ ಹಾರ್ದಿಕ್ ಪಾಂಡ್ಯ 39 ರನ್ ಗಳಿಸಿದರೆ ಸಂಜು ಸ್ಯಾಮ್ಸನ್ ಹಾಗೂ ಸೂರ್ಯಕುಮಾರ್ ಯಾದವ್ ತಲಾ 29 ರನ್ ಗಳಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News