IND vs ENG, 1 ನೇ ODI : ಟಿ20 ಸರಣಿಯಲ್ಲಿ ಇಂಗ್ಲೆಂಡ್ ಅನ್ನು 2-1 ಅಂತರದಿಂದ ಸೋಲಿಸಿದ ನಂತರ ಟೀಮ್ ಇಂಡಿಯಾದ ಉತ್ಸಾಹ ಹೆಚ್ಚಾಗಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಲಂಡನ್‌ನ 'ದಿ ಓವಲ್' ಮೈದಾನದಲ್ಲಿ ನಾಳೆ ಸಂಜೆ 5:30 ರಿಂದ ಆಡಲಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತನ್ನ ಪೂರ್ಣ ಸಾಮರ್ಥ್ಯದ ತಂಡದೊಂದಿಗೆ ಈ ಪಂದ್ಯಕ್ಕೆ ಎಂಟ್ರಿ ನೀಡಲಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ. ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಿಂದ ಪ್ಲೇಯಿಂಗ್ XI ನಲ್ಲಿ ಆಡಲಿರುವ ಆಟಗಾರರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ : Suryakumar Yadav : ಕೇವಲ 1 ರನ್‌ನಿಂದ 'ವಿಶ್ವ ದಾಖಲೆ' ಮಿಸ್ ಮಾಡಿಕೊಂಡ ಸೂರ್ಯಕುಮಾರ್ ಯಾದವ್!
1. ಓಪನರ್ ಜೋಡಿ
ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಿಂದ ಓಪನರ್ ಜೋಡಿ ರೋಹಿತ್ ಶರ್ಮಾ ಜೊತೆ ಶಿಖರ್ ಧವನ್ ಕಣಕ್ಕಿಳಿಯಲಿದ್ದಾರೆ. ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಬಹಳ ದಿನಗಳ ನಂತರ ಮತ್ತೊಮ್ಮೆ ಏಕದಿನದಲ್ಲಿ ಓಪನರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
2. ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ ಈ ಸ್ಟಾರ್ ಆಟಗಾರರು
ವಿರಾಟ್ ಕೊಹ್ಲಿಗೆ ಮೂರನೇ ಕ್ರಮಾಂಕದಲ್ಲಿ ಅವಕಾಶ ಸಿಗಲಿದೆ. ಸೂರ್ಯಕುಮಾರ್ ಯಾದವ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ 5ನೇ ಸ್ಥಾನಕ್ಕೆ ಇಳಿಯುವ ಸಾಧ್ಯತೆ ಇದೆ. ಸ್ಫೋಟಕ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದಾರೆ. ಹಾಗೆಯೆ, ಆಲ್ ರೌಂಡರ್ ರವೀಂದ್ರ ಜಡೇಜಾ 7 ನೇ ಕ್ರಮಾಂಕದಲ್ಲಿ ಆಡಲಿದ್ದಾರೆ.
3. ಸ್ಪಿನ್ ಬೌಲರ್
ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಟೀಂ ಇಂಡಿಯಾದ ಪ್ಲೇಯಿಂಗ್ XI ನಲ್ಲಿ ಏಕೈಕ ಸ್ಪಿನ್ನರ್ ಆಗಿ ಆಡಲಿದ್ದಾರೆ.
4. ವೇಗದ ಬೌಲರ್ ಗಳು
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಶಾರ್ದೂಲ್ ಠಾಕೂರ್ ಅವರಿಗೆ ಪ್ಲೇಯಿಂಗ್ XI ನಲ್ಲಿ ಅವಕಾಶ ನೀಡಲಾಗುತ್ತದೆ.
ಇದನ್ನೂ ಓದಿ : ಕಳಪೆ ಫಾರ್ಮ್ ಹೊಂದಿರುವ ಕೊಹ್ಲಿ ದೇಶಿ ಕ್ರಿಕೆಟ್ ಆಡಬೇಕು: ಟೀಂ ಇಂಡಿಯಾ ಮಾಜಿ ವೇಗಿ ಗರಂ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ 11 :
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ