India vs England 2021: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ತಂಡ ಪ್ರಕಟ..!

 ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದ ಸದಸ್ಯರ ಪಟ್ಟಿಯನ್ನು ಈಗ ಘೋಷಿಸಲಾಗಿದೆ, ಚೇತನ್ ಶರ್ಮಾ ನೇತೃತ್ವದ ಹೊಸ ಆಯ್ಕೆ ಸಮಿತಿಯು ಮಂಗಳವಾರ ನಡೆದ ವರ್ಚುವಲ್ ಸಭೆಯಲ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತೀಯ ತಂಡವನ್ನು ಆಯ್ಕೆ ಮಾಡಿದೆ.

Last Updated : Jan 19, 2021, 09:10 PM IST
  • ಪೂರ್ಣ ಫಿಟ್‌ನೆಸ್‌ಗೆ ಮರಳಿದ ಇಶಾಂತ್ ಶರ್ಮಾ ಕೂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ತಂಡದಲ್ಲಿ ಭಾಗವಹಿಸದ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಮರಳಿದ್ದಾರೆ.
  • ಜಸ್ಪ್ರೀತ್ ಬುಮ್ರಾ ಬೌಲಿಂಗ್ ದಾಳಿಯನ್ನು ಮುನ್ನಡೆಸಿದ್ದು, ಅವರ ಜೊತೆಗೆ ಮೊಹಮ್ಮದ್ ಸಿರಾಜ್ ಮತ್ತು ಶಾರ್ದುಲ್ ಠಾಕೂರ್ ಪ್ರಸ್ತುತ ಸರಣಿಯಿಂದ ಉತ್ತಮ ಪ್ರದರ್ಶನ ನೀಡಿದ ನಂತರ ತಮ್ಮ ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ.
  • ನಾಲ್ಕನೇ ಟೆಸ್ಟ್‌ನಲ್ಲಿ ಪಾದಾರ್ಪಣೆ ಮಾಡಿ ಮೂರು ವಿಕೆಟ್‌ಗಳನ್ನು ಕಬಳಿಸಿದ ನಟರಾಜನ್ ತಪ್ಪಿಸಿಕೊಳ್ಳುತ್ತಾರೆ.
 India vs England 2021: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ತಂಡ ಪ್ರಕಟ..! title=
file photo

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದ ಸದಸ್ಯರ ಪಟ್ಟಿಯನ್ನು ಈಗ ಘೋಷಿಸಲಾಗಿದೆ, ಚೇತನ್ ಶರ್ಮಾ ನೇತೃತ್ವದ ಹೊಸ ಆಯ್ಕೆ ಸಮಿತಿಯು ಮಂಗಳವಾರ ನಡೆದ ವರ್ಚುವಲ್ ಸಭೆಯಲ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತೀಯ ತಂಡವನ್ನು ಆಯ್ಕೆ ಮಾಡಿದೆ.

ಇದನ್ನೂ ಓದಿ: ಐತಿಹಾಸಿಕ ಟೆಸ್ಟ್ ಗೆಲುವಿನ ನಂತರ ದ್ರಾವಿಡ್ ಗೆ ಮೆಚ್ಚುಗೆಯ ಸುರಿಮಳೆ ಗೈಯುತ್ತಿರುವುದೇಕೆ?

ಪೂರ್ಣ ಫಿಟ್‌ನೆಸ್‌ಗೆ ಮರಳಿದ ಇಶಾಂತ್ ಶರ್ಮಾ ಕೂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ತಂಡದಲ್ಲಿ ಭಾಗವಹಿಸದ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಮರಳಿದ್ದಾರೆ.ಜಸ್ಪ್ರೀತ್ ಬುಮ್ರಾ ಬೌಲಿಂಗ್ ದಾಳಿಯನ್ನು ಮುನ್ನಡೆಸಿದ್ದು, ಅವರ ಜೊತೆಗೆ ಮೊಹಮ್ಮದ್ ಸಿರಾಜ್ ಮತ್ತು ಶಾರ್ದುಲ್ ಠಾಕೂರ್ ಪ್ರಸ್ತುತ ಸರಣಿಯಿಂದ ಉತ್ತಮ ಪ್ರದರ್ಶನ ನೀಡಿದ ನಂತರ ತಮ್ಮ ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ, ನಾಲ್ಕನೇ ಟೆಸ್ಟ್‌ನಲ್ಲಿ ಪಾದಾರ್ಪಣೆ ಮಾಡಿ ಮೂರು ವಿಕೆಟ್‌ಗಳನ್ನು ಕಬಳಿಸಿದ ನಟರಾಜನ್ ತಪ್ಪಿಸಿಕೊಳ್ಳುತ್ತಾರೆ.

ಇದನ್ನೂ ಓದಿ: Australia vs India: 'ಭಾರತ ತಂಡವನ್ನು ಎಂದೆಂದಿಗೂ ಲಘುವಾಗಿ ಪರಿಗಣಿಸಬೇಡಿ'

ಆರ್ ಅಶ್ವಿನ್ ಬೆನ್ನಿನ ಸಮಸ್ಯೆಯೊಂದಿಗೆ ಆಡದಿದ್ದರೂ ಈಗ ಸ್ಥಾನವನ್ನು ಕಂಡುಕೊಂಡಿದ್ದಾರೆ, ನಾಲ್ಕನೇ ಟೆಸ್ಟ್‌ನಲ್ಲಿ ಗಾಯಗೊಂಡ ರವೀಂದ್ರ ಜಡೇಜಾರ ಬದಲಿಗೆ ಸ್ಥಾನ ಪಡೆದ ವಾಷಿಂಗ್ಟನ್ ಸುಂದರ್  ಆಲ್ ರೌಂಡರ್ ಪ್ರದರ್ಶನದ ಸಾಮರ್ಥ್ಯದ ಹಿನ್ನಲೆಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಇಡೀ ಆಸ್ಟ್ರೇಲಿಯಾ ಪ್ರವಾಸದಲ್ಲಿ ಕೇವಲ ಒಂದು ಪಂದ್ಯದಲ್ಲಿ ಕಾಣಿಸಿಕೊಂಡ ಕುಲದೀಪ್ ಯಾದವ್ ಕೂಡ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಎಡಗೈ ಸ್ಪಿನ್ನರ್ ಅಕ್ಸಾರ್ ಪಟೇಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Australia vs India: ಭಾರತ ತಂಡದ ಐತಿಹಾಸಿಕ ಟೆಸ್ಟ್ ಗೆಲುವಿಗೆ Memes ಗಳ ಸುರಿಮಳೆ

ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ:

ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಕ್ಯಾಪ್ಟನ್), ಅಜಿಂಕ್ಯ ರಹಾನೆ, ರಿಷಭ್ ಪಂತ್, ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ, ಕೆ.ಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮುಹಮ್ಮದ್ ಸಿರಾಜ್, ಶರ್ದುಲ್ ಠಾಕೂರ್, ಆರ್ ಅಶ್ವಿನ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಅಕ್ಸಾರ್ ಪಟೇಲ್.
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3hDyh4G 
Apple Link - https://apple.co/3loQYe  

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News