India vs England Test series 2024: ಬಿಸಿಸಿಐ ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್‌ಗಳ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಭಾರತೀಯ ತಂಡವನ್ನು ಪ್ರಕಟಿಸಿದೆ. ಇಂಗ್ಲೆಂಡ್ ವಿರುದ್ಧದಮೊದಲ ಟೆಸ್ಟ್ ಪಂದ್ಯ ಜನವರಿ 25 ರಿಂದ ಹೈದರಾಬಾದ್‌ನಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ 16 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಯುವ ಆಟಗಾರ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾಗೆ ಹೊಸ ವಿಕೆಟ್ ಕೀಪರ್ ಎಂಟ್ರಿ ಆಗಿದೆ.
ಇದನ್ನೂ ಓದಿ: ಒಂದು ಪಂದ್ಯ ಆಡಿದ ಮರುದಿನವೇ ನಾಯಕತ್ವ ತೊರೆದ ಕ್ಯಾಪ್ಟನ್! ಹೊರಬಿತ್ತು ಶಾಕಿಂಗ್ ಅಪ್ಡೇಟ್
ತಂಡದಲ್ಲಿ ಕೆ.ಎಲ್ ರಾಹುಲ್ ಹೊರತು ಪಡಿಸಿ ಇಬ್ಬರು ಬ್ಯಾಕ್ ಅಪ್ ವಿಕೆಟ್ ಕೀಪರ್ ಗಳ ಆಯ್ಕೆ ಅಚ್ಚರಿ ಮೂಡಿಸಿದೆ. ದೇಶೀಯ ಟೂರ್ನಿಗಳಲ್ಲಿ ಜನಪ್ರಿಯರಾಗಿದ್ದ ಧ್ರುವ್ ಜುರೆಲ್ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಪಂದ್ಯಗಳನ್ನು ಆಡಿದ ಭಾರತ ಎ ತಂಡದಲ್ಲಿ ಜುರೆಲ್ ಅದ್ಭುತ ಪ್ರದರ್ನ ನೀಡಿದ್ದರು. 69 ರನ್ ಗಳಿಸಿ ಮಿಂಚಿದ್ದರು. ಕಳೆದ ವರ್ಷ ವಿದರ್ಭ ವಿರುದ್ಧ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ 22ರ ಹರೆಯದ ಜುರೆಲ್ ಇದುವರೆಗೆ 15 ಪಂದ್ಯಗಳಲ್ಲಿ 46ರ ಸರಾಸರಿಯಲ್ಲಿ 790 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳು ಸೇರಿವೆ.
ಮೊದಲ ಎರಡು ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.
ಇದನ್ನೂ ಓದಿ: IPL ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಬ್ರೇಕ್ ಮಾಡಲು ಸಾಧ್ಯವಾಗದ ಆ 5 ದಾಖಲೆಗಳು ಯಾವುವು ಗೊತ್ತಾ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.