IND vs ENG : ಭಾರತ - ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯ ರದ್ದು

India vs England Match : 2023ರ ಐಸಿಸಿ ಏಕದಿನ ವಿಶ್ವಕಪ್‌ಗೂ ಮುನ್ನ ಭಾರತ ಮತ್ತು ಇಂಗ್ಲೆಂಡ್ ನಡುವೆ ಅಭ್ಯಾಸ ಪಂದ್ಯ ನಡೆಯಬೇಕಿತ್ತು. ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಬೇಕಿತ್ತು ಆದರೆ ಇದೀಗ ಪಂದ್ಯವನ್ನು ರದ್ದುಗೊಳಿಸಲಾಯಿತು.    

Written by - Chetana Devarmani | Last Updated : Sep 30, 2023, 08:32 PM IST
  • 2023ರ ಐಸಿಸಿ ಏಕದಿನ ವಿಶ್ವಕಪ್‌ ಪಂದ್ಯ
  • ವಿಶ್ವಕಪ್‌ಗೂ ಮುನ್ನ ನಡೆಯಬೇಕಿದ್ದ ಅಭ್ಯಾಸ ಪಂದ್ಯ
  • ಭಾರತ - ಇಂಗ್ಲೆಂಡ್ ಅಭ್ಯಾಸ ಪಂದ್ಯ ರದ್ದು
IND vs ENG : ಭಾರತ - ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯ ರದ್ದು   title=
IND vs ENG

India vs England Warm Up Match: ICC ODI ವರ್ಲ್ಡ್ ಕಪ್ 2023 ಕ್ಕಿಂತ ಮೊದಲು ಭಾರತ ಮತ್ತು ಇಂಗ್ಲೆಂಡ್ ನಡುವೆ ಅಭ್ಯಾಸ ಪಂದ್ಯವನ್ನು ಆಡಬೇಕಿತ್ತು. ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಬೇಕಿತ್ತು. ಆದರೆ ಸತತ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು. 

ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ, ಸತತ ಮಳೆಯಿಂದಾಗಿ ಒಂದೇ ಒಂದು ಚೆಂಡು ಎಸೆಯಲಾಗದೆ ಪಂದ್ಯವನ್ನು ರದ್ದುಗೊಳಿಸಬೇಕಾಯಿತು. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಈ ಬಾರಿಯ ಟೂರ್ನಿಯನ್ನು ಗೆಲ್ಲುವ ದೊಡ್ಡ ಕನಸು ಹೊತ್ತಿದೆ. ಅದೇ ಸಮಯದಲ್ಲಿ, ಇಂಗ್ಲೆಂಡ್ ತಂಡವು ಹಾಲಿ ಚಾಂಪಿಯನ್ ಆಗಿದೆ.

ಇದನ್ನೂ ಓದಿ : ಭಾರತದ ಆತಿಥ್ಯಕ್ಕೆ ಪಾಕ್‌ ಕ್ರಿಕೆಟಿಗರು ಫಿದಾ..! ಇಂಡಿಯಾ ಬಗ್ಗೆ ಏನ್‌ ಹೇಳಿದ್ರು ಗೊತ್ತಾ..? 

ವಿಶ್ವಕಪ್‌ಗೆ ಭಾರತ ತಂಡ -

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್.

ವಿಶ್ವಕಪ್‌ಗಾಗಿ ಇಂಗ್ಲೆಂಡ್ ತಂಡ-

ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.

ಇದನ್ನೂ ಓದಿ : ಆಸ್ಟ್ರೇಲಿಯಾ ಬ್ಯಾಟರ್‌ ಮಾರ್ನಸ್ ಮುಂದೆ ವಿರಾಟ್ ಕೊಹ್ಲಿ ಡ್ಯಾನ್ಸ್‌ : ವಿಡಿಯೋ ವೈರಲ್‌ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News