IND vs PAK: ಹೊಸ ವರ್ಷ ಆರಂಭಕ್ಕೂ ಮೊದಲೇ ಇಂಡಿಯಾ ವರ್ಸಸ್ ಪಾಕಿಸ್ತಾನ್ ಪಂದ್ಯ- ಯಾವಾಗ ಗೊತ್ತಾ?

IND vs PAK: ಹೊಸ ವರ್ಷ ಆರಂಭಕ್ಕೂ ಮೊದಲೇ ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ ಒಂದಿದೆ. ಡಿಸೆಂಬರ್ 2023 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯ ನಡೆಯಲಿದ್ದು, ಯಾವುದೀ ಪಂದ್ಯ, ಯಾವಾಗ ನಡೆಯಲಿದೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ. 

Written by - Yashaswini V | Last Updated : Dec 7, 2023, 07:39 AM IST
  • ಭಾರತ-ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ನಡೆದಾಗಲೆಲ್ಲ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟುತ್ತದೆ.
  • ಇದೀಗ ಅಂಡರ್-19 ಏಷ್ಯಾಕಪ್ ನಲ್ಲಿ ಈ ಎರಡು ತಂಡಗಳ ನಡುವೆ ಪಂದ್ಯ ನಡೆಯುತ್ತಿದೆ.
  • ದುಬೈನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಈ ಟೂರ್ನಿಯಲ್ಲಿ ಭಾರತ ತಂಡ ತನ್ನ ಅಭಿಯಾನ ಆರಂಭಿಸಲಿದೆ.
IND vs PAK: ಹೊಸ ವರ್ಷ ಆರಂಭಕ್ಕೂ ಮೊದಲೇ ಇಂಡಿಯಾ ವರ್ಸಸ್ ಪಾಕಿಸ್ತಾನ್ ಪಂದ್ಯ- ಯಾವಾಗ ಗೊತ್ತಾ?  title=

IND vs PAK: ಕ್ರಿಕೆಟ್ ಪ್ರೇಮಿಗಳಿಗೆ ಶುಭ ಸುದ್ದಿ. ಕ್ರಿಕೆಟ್  ಅಭಿಮಾನಿಗಳಿಗೆ ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯ ನಡೆದಾಗಲೆಲ್ಲ ಅವರ ಸಂಭ್ರಮ ಮುಗಿಲು ಮುಟ್ಟುತ್ತದೆ. ಇದೀಗ ಹೊಸ ವರ್ಷ ಆರಂಭಕ್ಕೂ ಮೊದಲೇ ಕ್ರಿಕೆಟ್ ಪ್ರೇಮಿಗಳಿಗೆ ಇಂಡಿಯಾ ವರ್ಸಸ್ ಪಾಕಿಸ್ತಾನ ಪಂದ್ಯವನ್ನು ವೀಕ್ಷಿಸುವ ಅವಕಾಶವಿದೆ. 

ವಾಸ್ತವವಾಗಿ, ಭಾರತೀಯ ಅಂಡರ್-19 ತಂಡವು ಶುಕ್ರವಾರ ದುಬೈನಲ್ಲಿ ಅಫ್ಘಾನಿಸ್ತಾನ ವಿರುದ್ಧ ಏಷ್ಯಾ ಕಪ್ (ACC U-19 ಏಷ್ಯಾ ಕಪ್) ಅಭಿಯಾನವನ್ನು  ಆರಂಭಿಸಲಿದೆ. ಈ ಟೂರ್ನಿಯ ಉದ್ಘಾಟನಾ ದಿನದಂದು ಪಾಕಿಸ್ತಾನ ಎರಡನೇ ಪಂದ್ಯದಲ್ಲಿ ನೇಪಾಳವನ್ನು ಎದುರಿಸಲಿದೆ. 

ಈ ದಿನ ನಡೆಯಲಿದೆ ಇಂಡಿಯಾ ವರ್ಸಸ್ ಪಾಕಿಸ್ತಾನ ಪಂದ್ಯ: 
ಅಂಡರ್-19 ಏಷ್ಯಾಕಪ್ ನಲ್ಲಿ ಈ ಎರಡು ತಂಡಗಳ ನಡುವೆ ಪಂದ್ಯ ನಡೆಯುತ್ತಿದೆ. ಈ ಬಹು ನಿರೀಕ್ಷಿತ ಪಂದ್ಯ ಡಿಸೆಂಬರ್ 10 ರಂದು ನಡೆಯಲಿದೆ.

ಇದನ್ನೂ ಓದಿ- Vijay Hazare Trophy: ಇತಿಹಾಸ ನಿರ್ಮಿಸಿದ 26ವರ್ಷದ ಯುವ ಆಟಗಾರ

ಪೂಲ್-ಎಯಲ್ಲಿ ಈ 4 ತಂಡಗಳು:
ಅಂಡರ್-19 ಏಷ್ಯನ್ ಕಪ್‌ನ ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವೆ ಎಂಟು ತಂಡಗಳ ಸ್ಪರ್ಧೆಯಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಆಡುವ ಎಲ್ಲ ತಂಡಗಳನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ. 

19 ವರ್ಷದೊಳಗಿನವರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಫ್ಘಾನಿಸ್ತಾನ ಮತ್ತು ನೇಪಾಳದೊಂದಿಗೆ ಪೂಲ್ ಎ ನಲ್ಲಿ ಸ್ಥಾನ ಪಡೆದಿವೆ. ಮತ್ತೊಂದೆಡೆ, ಪೂಲ್ ಬಿ ಬಾಂಗ್ಲಾದೇಶ, ಜಪಾನ್, ಶ್ರೀಲಂಕಾ ಮತ್ತು ಆತಿಥೇಯ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಒಳಗೊಂಡಿದೆ. ಅಂಡರ್-19 ಏಷ್ಯಾಕಪ್‌ನ ಸ್ವರೂಪದ ಪ್ರಕಾರ, ಪ್ರತಿ ಪೂಲ್‌ನಿಂದ ಎರಡು ತಂಡಗಳು ಮಾತ್ರ ಸೆಮಿಫೈನಲ್‌ಗೆ ತಲುಪಲಿದ್ದು, ಇದು ಡಿಸೆಂಬರ್ 15 ರಂದು ನಡೆಯಲಿದೆ. ಅಂತಿಮ ಪಂದ್ಯ ಡಿಸೆಂಬರ್ 17 ರಂದು ನಡೆಯಲಿದೆ.

ಇದನ್ನೂ ಓದಿ- ಕೇವಲ 43 ಎಸೆತಗಳಲ್ಲಿ 193 ರನ್... ಬರಿ 4,6,6,4,6,6,4,6 ಗಳೇ... ಆಟಗಾರ ಯಾರು ತಿಳಿಯಲು ವಿಡಿಯೋ ನೋಡಿ

ಅಂಡರ್-19 ಏಷ್ಯಾಕಪ್‌ಗಾಗಿ ಭಾರತ ತಂಡ ಈ ಕೆಳಕಂಡಂತಿದೆ: 
ಉದಯ್ ಸಹರಾನ್ (ನಾಯಕ), ಸೌಮ್ಯ ಕುಮಾರ್ ಪಾಂಡೆ (ಉಪನಾಯಕ), ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಧನುಷ್ ಗೌಡ, ಅವಿನಾಶ್ ರಾವ್ (ವಿಕೆಟ್ ಕೀಪರ್), ಎಂ ಅಭಿಷೇಕ್, ಇನೇಶ್ ಮಹಾಜನ್ (ವಿಕೆಟ್ ಕೀಪರ್), ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ ಮತ್ತು ನಮನ್ ತಿವಾರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News