ಇಂದು ಶ್ರೀಲಂಕಾ ವಿರುದ್ಧ ಭಾರತ ಹಣಾಹಣಿ: ಈ ಪಂದ್ಯ ಮಳೆಯಿಂದ ರದ್ದಾದರೇ ಭಗ್ನವಾಗುತ್ತಾ ಫೈನಲ್ ಕನಸು?

India vs Sri Lanka, Colombo Weather Update: ಸೋಮವಾರ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್-2023ರ ಸೂಪರ್-4 ಸುತ್ತಿನ ಪಂದ್ಯದಲ್ಲಿ ಟೀಂ ಇಂಡಿಯಾ 228 ರನ್‌’ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. ಇದು ಪಾಕ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ಗಳಿಸಿದ ಅತಿ ದೊಡ್ಡ ಗೆಲುವಾಗಿದೆ.

Written by - Bhavishya Shetty | Last Updated : Sep 12, 2023, 12:42 PM IST
    • ಭಾರತ ತಂಡ ಈಗ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶ್ರೀಲಂಕಾವನ್ನು ಎದುರಿಸಬೇಕಾಗಿದೆ
    • ಈ ಪಂದ್ಯ ಕೊಲಂಬೊದಲ್ಲಿ ನಡೆಯಲಿದ್ದು, ಹವಾಮಾನದ ಬಗ್ಗೆ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ.
    • ಭಾರತ ತಂಡ 1 ಪಂದ್ಯದಲ್ಲಿ 2 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ
ಇಂದು ಶ್ರೀಲಂಕಾ ವಿರುದ್ಧ ಭಾರತ ಹಣಾಹಣಿ: ಈ ಪಂದ್ಯ ಮಳೆಯಿಂದ ರದ್ದಾದರೇ ಭಗ್ನವಾಗುತ್ತಾ ಫೈನಲ್ ಕನಸು? title=
India vs Sri Lanka

India vs Sri Lanka, Colombo Weather Update: ಭಾರತ ತಂಡವು ಪಾಕಿಸ್ತಾನವನ್ನು ಸೋಲಿಸುವ ಮೂಲಕ ಏಷ್ಯಾ ಕಪ್ ಸೂಪರ್-4 ಸುತ್ತನ್ನು ಗೆಲುವಿನೊಂದಿಗೆ ಪ್ರಾರಂಭಿಸಿದೆ. ಟೀಂ ಇಂಡಿಯಾ ಈಗ ಹಾಲಿ ಚಾಂಪಿಯನ್ ಶ್ರೀಲಂಕಾವನ್ನು ಎದುರಿಸಲಿದೆ. ಈ ಪಂದ್ಯ ಕೊಲಂಬೊದಲ್ಲಿ ನಡೆಯಲಿದ್ದು, ಹವಾಮಾನದ ಬಗ್ಗೆ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ.

ಇದನ್ನೂ ಓದಿ: Asia Cup ಪಾಯಿಂಟ್ ಟೇಬಲ್: ಪಾಕ್ ವಿರುದ್ಧ ಗೆಲುವು ಕಂಡ ಭಾರತಕ್ಕೆ ಎಷ್ಟನೇ ಸ್ಥಾನ?

ಭಾರತಕ್ಕೆ ದೊಡ್ಡ ಗೆಲುವು…

ಸೋಮವಾರ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್-2023ರ ಸೂಪರ್-4 ಸುತ್ತಿನ ಪಂದ್ಯದಲ್ಲಿ ಟೀಂ ಇಂಡಿಯಾ 228 ರನ್‌’ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. ಇದು ಪಾಕ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ಗಳಿಸಿದ ಅತಿ ದೊಡ್ಡ ಗೆಲುವಾಗಿದೆ. ಮೀಸಲು ದಿನದವರೆಗೂ ನಡೆದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (ಔಟಾಗದೆ 122) ಹಾಗೂ ಕೆಎಲ್ ರಾಹುಲ್ (ಅಜೇಯ 111) ಅವರ ಶತಕಗಳ ನೆರವಿನಿಂದ ಭಾರತ 2 ವಿಕೆಟ್ ಕಳೆದುಕೊಂಡು 356 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು.

ಭಾರತ ತಂಡ ಈಗ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶ್ರೀಲಂಕಾವನ್ನು ಎದುರಿಸಬೇಕಾಗಿದೆ. ಶ್ರೀಲಂಕಾ ತನ್ನ ಹಿಂದಿನ ಸೂಪರ್-4 ಸುತ್ತಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 21 ರನ್‌’ಗಳಿಂದ ಸೋಲಿಸಿತ್ತು. ಭಾರತವೂ ಪಾಕಿಸ್ತಾನವನ್ನು ಸೋಲಿಸಿದೆ. ಈಗ ಎರಡೂ ತಂಡಗಳು ಆತ್ಮವಿಶ್ವಾಸದಿಂದ ಮೈದಾನಕ್ಕಿಳಿಯಲಿವೆ. ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಫೈನಲ್‌’ಗೆ ತನ್ನ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ. ಇದರ ನಂತರ ಶ್ರೀಲಂಕಾ ಸೆಪ್ಟೆಂಬರ್ 14 ರಂದು ಪಾಕಿಸ್ತಾನವನ್ನು ಎದುರಿಸಲಿದೆ ಮತ್ತು ಭಾರತವು ಸೆಪ್ಟೆಂಬರ್ 15 ರಂದು ಬಾಂಗ್ಲಾದೇಶವನ್ನು ಎದುರಿಸಲಿದೆ.

ಹವಾಮಾನ ಹೇಗಿದೆ?

ಭಾರತ ಮತ್ತು ಶ್ರೀಲಂಕಾ ಪಂದ್ಯಕ್ಕೆ ಮೀಸಲು ದಿನವಿಲ್ಲ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಉಭಯ ತಂಡಗಳು ತಲಾ 1 ಅಂಕ ಹಂಚಿಕೊಳ್ಳಬೇಕಾಗುತ್ತದೆ. ಅಕ್ಯುವೆದರ್‌’ನ ಹವಾಮಾನ ವರದಿ ಪ್ರಕಾರ ಮಧ್ಯಾಹ್ನ 2 ರಿಂದ 4 ರವರೆಗೆ ಮಳೆಯಾಗುವ ಸಾಧ್ಯತೆ ಕಡಿಮೆ. ಸಂಜೆ 4ರಿಂದ 7ರವರೆಗೆ ಮಳೆಯಾಗುವ ಸಾಧ್ಯತೆ ಶೇ.50ರ ವರೆಗೆ ಇರುತ್ತದೆ. ಇನ್ನು ರಾತ್ರಿ 10 ಗಂಟೆಯಿಂದ ನಿರಂತರ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: 1 ಶತಕ, 10 ದಾಖಲೆಗಳು ಉಡೀಸ್..! ವಿರಾಟ್ ಅಬ್ಬರಕ್ಕೆ ಪುಡಿಪುಡಿಯಾದ ದಾಖಲೆಗಳು ಯಾವ್ಯಾವು ಗೊತ್ತಾ?

ಯಾವ ತಂಡ ಫೈನಲ್ ತಲುಪಲಿದೆ?

ಭಾರತ ಹಾಗೂ ಶ್ರೀಲಂಕಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾದರೆ ಭಾರತ ಫೈನಲ್ ಪ್ರವೇಶಿಸುವುದು ಬಹುತೇಕ ಖಚಿತ. ಸದ್ಯ ಭಾರತ ತಂಡ 1 ಪಂದ್ಯದಲ್ಲಿ 2 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಶ್ರೀಲಂಕಾ ಮತ್ತು ಪಾಕಿಸ್ತಾನ ತಲಾ 2 ಅಂಕ ಹೊಂದಿವೆ. ಶ್ರೀಲಂಕಾ 2ನೇ ಸ್ಥಾನದಲ್ಲಿದ್ದರೆ ಪಾಕಿಸ್ತಾನ ಮೂರನೇ ಸ್ಥಾನದಲ್ಲಿದೆ. ಬಾಂಗ್ಲಾದೇಶ ಇನ್ನೂ ಖಾತೆ ತೆರೆದಿಲ್ಲ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News